ದರ್ಶನ್ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ | JANATA NEWS
ಬೆಂಗಳೂರು : ದರ್ಶನ್ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸರ ವಶವಾಗಿದ್ದು, ವಿಚಾರಣೆಯನ್ನು ಎದುರಿಸುತ್ತಿದ್ದಾರೆ.
ಕಾರ್ಯಕ್ರಮ ನಿಮಿತ್ತ ಚಿಕ್ಕಬಳ್ಳಾಪುರಕ್ಕೆ ತೆರಳುವ ಮುನ್ನ ದೇಶದ ಸರ್ಕಾರದ ಬಗ್ಗೆ ಮಾಧ್ಯಮಗಳ ಜತೆ ಮಾತನಾಡುವಾಗ ದರ್ಶನ್ ಪ್ರಕರಣದ ಬಗ್ಗೆಯೂ ಕೋಡಿಶ್ರೀ ಮಾತನಾಡಿದರು. ಇದೀಗ ದೇಶದಲ್ಲಿ ಕ್ರೋಧಿ ನಾಮ ಸಂವತ್ಸರ ನಡೆಯುತ್ತಿದೆ. ಕ್ರೋಧಿ ಅಂದರೆ ಕ್ರೋಧ. ಹೀಗಾಗಿ ಜಾಸ್ತಿ ಕೆಟ್ಟದ್ದೇ ಹೆಚ್ಚಾಗಿ ನಡೆಯುತ್ತಿವೆ. ದೇಶದಲ್ಲೂ ಪ್ರಾಕೃತಿಕ ವಿಕೋಪಗಳು ಸಂಭವಿಸಲಿವೆ ಎಂದರು.
ಗುರುಗಳು ಶಿಷ್ಯರಾಗುತ್ತಾರೆ, ಶಿಷ್ಯರು ಗುರುಗಳಾಗುತ್ತಾರೆ. ಹೆಣ್ಣು ಮಕ್ಕಳ ಪ್ರಾಬಲ್ಯ ಹೆಚ್ಚಾಗಲಿದೆ. ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರಕ್ಕೆ ಯಾವುದೇ ಆಪತ್ತು ಇರುವುದಿಲ್ಲ. ಶ್ರಾವಣದಲ್ಲಿ ನಾನು ಮತ್ತೊಂದು ಸ್ಫೋಟಕ ಭವಿಷ್ಯ ಹೇಳುತ್ತೇನೆ. ಕೇಂದ್ರ ಸರ್ಕಾರ ಹಾಗೂ ಮೋದಿ ಅವರ ಬಗ್ಗೆ ಶ್ರಾವಣದಲ್ಲಿ ಮಾತನಾಡುತ್ತೇನೆ ಎಂದಿದ್ದಾರೆ.
ರಾಜ್ಯದಲ್ಲಿ ಈ ಬಾರಿ ಅತಿವೃಷ್ಟಿ ಸಾಧ್ಯತೆ ಇದೆ ಎಂದು ಕೋಡಿಮಠದ ಶ್ರೀಗಳಾದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಯವರು ಸ್ಫೋಟಕ ಭವಿಷ್ಯ ನುಡಿದಿದ್ದಾರೆ.
ಇದೇ ಸಂದರ್ಭದಲ್ಲಿ ದರ್ಶನ್ ಮತ್ತು ಉಮಾಪತಿ ಬಗ್ಗೆ ಮಾತನಾಡಿ, ದರ್ಶನ್ಗೆ ಕೋಪ ಮತ್ತು ಉಮಾಪತಿಗೆ ತಾಳ್ಮೆ ತುಂಬಾ ಇದೆ ಎಂದರು.ಕರೆಯದೆ ಬರುವವನು ಕೋಪ, ಬರೆಯದೆ ಓದುವವನು ಕಣ್ಣು, ಬರಿಗಾಲಲ್ಲಿ ನಡೆಯುವವನು ಮನಸ್ಸು ಎಂದು ಇಬ್ಬರ ನಡುವಿನ ಗಲಾಟೆ ಬಗ್ಗೆ ಮಾರ್ಮಿಕವಾಗಿ ನುಡಿದಿದ್ದಾರೆ.