ದರ್ಶನ್ ಅರೆಸ್ಟ್ , ಘಟನೆ ಕುರಿತು ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ ರಚಿತಾ ರಾಮ್ | JANATA NEWS

ಬೆಂಗಳೂರು : ರೇಣಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದರ್ಶನ್ ಬಗ್ಗೆ ಇದೀಗ ಚಂದನವನದ ಡಿಂಪಲ್ ಕ್ವೀನ್ ರಚಿತಾ ರಾಮ್ ಘಟನೆ ಕುರಿತು ತಮ್ಮ ಮೊದಲ ಪ್ರತಿಕ್ರಿಯೆಯನ್ನು ನೀಡಿದ್ದಾರೆ.
ಸ್ಯಾಂಡಲ್‌ವುಡ್‌ನ ಡಿಂಪಲ್ ಕ್ವೀನ್ ರಚಿತಾ ರಾಮ್ ಇನ್‌ಸ್ಟಾಗ್ರಾಂ ಪೋಸ್ಟ್ ಮಾಡಿದ್ದು, ಇದರಲ್ಲಿ ದರ್ಶನ್ ಪರ ಬ್ಯಾಟ್ ಬೀಸಿದ್ದಾರೆ. ಆರಂಭದಲ್ಲಿ ರೇಣುಕಾಸ್ವಾಮಿ ಹತ್ಯೆಯನ್ನು ಖಂಡಿಸಿದ್ದರೂ, ಬಳಿಕ ದರ್ಶನ್ ತಮ್ಮ ಗುರು ಸಮಾನರು. ಅವರ ಜೀವನದಲ್ಲಾದ ತಪ್ಪುಗಳನ್ನು ತಿದ್ದಿ ಮಾರ್ಗದರ್ಶನ ನೀಡಿದಂತಹ ವ್ಯಕ್ತಿ. ಇಂತಹ ಪ್ರಕರಣದಲ್ಲಿ ಭಾಗಿಯಾಗಿರೋದನ್ನು ನಂಬುವುದಕ್ಕೆ ಅಸಾಧ್ಯವೆಂದು ಹೇಳಿಕೊಂಡಿದ್ದಾರೆ.
ರಚಿತಾ ರಾಮ್ ಇನ್‌ಸ್ಟಾಗ್ರಾಂ ಪೋಸ್ಟ್ ಈಗ ವೈರಲ್ ಆಗುತ್ತಿದೆ. ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಡಿಂಪಲ್ ಕ್ವೀನ್ ರಚಿತಾರಾಮ್ ಡಿಪ್ಲೋಮ್ಯಾಟಿಕ್ ಆಗಿ ಪೋಸ್ಟ್ ಹಾಕಿದ್ದಾರೆ. ಮೊದಲನೆಯದಾಗಿ ರೇಣುಕಾಸ್ವಾಮಿ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ಭಗವಂತ ಧೈರ್ಯ ಭರಿಸುವ ಶಕ್ತಿ ನೀಡಲಿ ಎಂಬ ಪ್ರಾರ್ಥನೆ ಮಾಡುತ್ತೇನೆ. ಈ ಹತ್ಯೆಗೆ ಕಾನೂನಾತ್ಮಕವಾಗಿ ನ್ಯಾಯ ಸಿಗುತ್ತದೆಂಬ ಭರವಸೆ ನನಗಿದೆ ಎಂದು ಬರೆದುಕೊಂಡಿದ್ದಾರೆ.
ನಮಸ್ಕಾರ,
ಈ ನೋಟ್‌ನ ನಾನು ನಟಿಯಾಗಿ ಅಲ್ಲ, ಸಾಮಾನ್ಯ ಪ್ರಜೆಯಾಗಿ ಬರೆಯುತ್ತಿದ್ದೇನೆ. ಇತ್ತೀಚೆಗೆ ನಡೆದ ಪ್ರಕರಣದ ಬಗ್ಗೆ ನನ್ನ ಮಾತು…!
ಮೊದಲನೇಯದಾಗಿ ರೇಣುಕಾಸ್ವಾಮಿ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಕ್ಕೆ ಧೈರ್ಯ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ. ಈ ಹತ್ಯೆಗೆ ಕಾನೂನಾತ್ಮಕವಾಗಿ ನ್ಯಾಯ ಸಿಗುತ್ತದೆಂಬ ಭರವಸೆ ನನಗಿದೆ.
ನನ್ನನ್ನ ಚಿತ್ರರಂಗಕ್ಕೆ ಪರಿಚಯಿಸಿದ ದರ್ಶನ್ ಸರ್ ನನಗೆ ಗುರು ಸಮಾನರು. ನನ್ನ ಜೀವನದ ತಪ್ಪುಗಳನ್ನು ತಿದ್ದಿ ಮಾರ್ಗದರ್ಶನ ನೀಡಿದಂತಹ ವ್ಯಕ್ತಿ ಇಂತಹ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನುವುದು ಸ್ವಲ್ಪ ಕಷ್ಟವಾಗತ್ತದೆ. ಏನಿದ್ರೂ ಸತ್ಯ ಪೊಲೀಸ್ ತನಿಖೆಯಿಂದ ನಮ್ಮ ಮುಂದೆ ಬರಲಿದೆ ಎನ್ನುವುದೇ ನನ್ನ ನಂಬಿಕೆ. ನನ್ನ ಮಾಧ್ಯಮ ಮಿತ್ರರು ಈ ಕೇಸ್‌ನ ವರದಿಯಲ್ಲಿ ಪಾದರ್ಶಕವಾಗಿರುತ್ತೀರಿ ಮತ್ತು ನಿಷ್ಪಕ್ಷವಾಗಿ ಕೆಲಸ ಮಾಡುತ್ತೀರಿ ಎಂದು ಆಶಿಸುತ್ತೇನೆ. ಧರ್ಮೋ ರಕ್ಷತಿ ರಕ್ಷಿತಃ ಎಂದು ಸೋಶಿಯಲ್ ಮೀಡಿಯಾದಲ್ಲಿ ನಟಿ ರಚಿತಾ ರಾಮ್ ಬರೆದುಕೊಂಡಿದ್ದಾರೆ.
ಧರ್ಮೋ ರಕ್ಷತಿ ರಕ್ಷಿತಃ pic.twitter.com/zuNn7ObcNN
— Rachita Ram (@RachitaRamDQ) June 18, 2024