ಐತಿಹಾಸಿಕ ರಾಮನಗರ ಬದಲು ಬೆಂಗಳೂರು ದಕ್ಷಿಣ ನಾಮಕರಣ : ಸಿಎಂ ಗೆ ಮನವಿ ಮಾಡಿದ ಕಾಂಗ್ರೆಸ್ ನಿಯೋಗ | JANATA NEWS
ಬೆಂಗಳೂರು : ಡಿಸಿಎಂ ಡಿಕೆ.ಶಿವಕುಮಾರ ನೇತ್ರತ್ವದ ನಿಯೋಗ ರಾಮನಗರ ಜಿಲ್ಲೆಯ ಹೆಸರನ್ನು ಬದಲಾಯಿಸಿ ಬೆಂಗಳೂರು ದಕ್ಷಿಣ ಜಿಲ್ಲೆಯನ್ನಾಗಿ ಮರುನಾಮಕರಣ ಮಾಡುವ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.
ಎಲ್.ಕೆ.ಅಡ್ವಾಣಿ ಅವರು ಆರಂಬಿಸಿದ ರಾಮಜನ್ಮಭೂಮಿ ಆಂದೋಲನವನ್ನು ಅಯೋಧ್ಯೆಯಲ್ಲಿ ಸೋಲಿಸಿದ್ದೇವೆ ಎಂಬ ಕಾಂಗ್ರೆಸ್ ಮುಖಂಡ ಹಾಗೂ ಲೋಕಸಭೆ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ಶ್ರೀರಾಮ ದೇವರ ಹೆಸರಿನ ಐತಿಹಾಸಿಕ ಹಿನ್ನೆಲೆ ಇರುವ ರಾಮನಗರ ಹೆಸರು ಬದಲಿಸುವ ಮುನ್ಸೂಚನೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ನೀಡಿದೆ.
ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆಯನ್ನಾಗಿ ಮರುನಾಮಕರಣ ಮಾಡಿ ರಾಮನಗರವನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಿಸುವಂತೆ ಇಂದು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಯಿತು, ಎಂದು ಮಾಜಿ ಕಾಂಗ್ರೆಸ್ ಸಂಸದ ಡಿಕೆ.ಸುರೇಶ ಅವರು ಪೋಸ್ಟ್ ಮಾಡಿದ್ದಾರೆ.
ಡಿಕೆ.ಶಿವಕುಮಾರ್ ಸೇರಿ 14 ನಾಯಕರು ಮನವಿ ಸಲ್ಲಿಸಿದ್ದಾರೆ ಎನ್ನಲಾಗಿದೆ. ರಾಮನಗರ ಉಸ್ತುವಾರಿ ಸಚಿವ ರಾಮಲಿಂಗರೆಡ್ಡಿ ಶಾಸಕ ಇಕ್ಬಾಲ್ ಹುಸೇನ್, ಮಾಜಿ ಸಂಸದ ಡಿಕೆ ಸುರೇಶ್, ಮಾಜಿ ಶಾಸಕ ಲಿಂಗಪ್ಪ, ರಾಜು ಎಂ. ಸಿ ಅಶ್ವಥ್ , ರಾಮನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಮೂರ್ತಿ ಅವರಿಂದ ಸಹಿ ಮನವಿ ಪತ್ರಕ್ಕೆ ಸಹಿ ಹಾಕಲಾಗಿದೆ ಎನ್ನಲಾಗಿದೆ.