ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲಿನ ಗುಂಡಿನ ದಾಳಿ ತೀವ್ರವಾಗಿ ಖಂಡಿಸಿದ ಪ್ರಧಾನಿ ಮೋದಿ | JANATA NEWS
ನವದೆಹಲಿ : ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲಿನ ಗುಂಡಿನ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ವಿಶ್ವ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ.
"ನನ್ನ ಸ್ನೇಹಿತ, ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲಿನ ದಾಳಿಯಿಂದ ತೀವ್ರ ಕಳವಳಗೊಂಡಿದೆ. ಘಟನೆಯನ್ನು ಬಲವಾಗಿ ಖಂಡಿಸುತ್ತೇನೆ. ರಾಜಕೀಯ ಮತ್ತು ಪ್ರಜಾಪ್ರಭುತ್ವದಲ್ಲಿ ಹಿಂಸೆಗೆ ಸ್ಥಾನವಿಲ್ಲ. ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ನಮ್ಮ ಆಲೋಚನೆಗಳು ಮತ್ತು ಪ್ರಾರ್ಥನೆಗಳು ಮೃತರ ಕುಟುಂಬ, ಗಾಯಗೊಂಡವರು ಮತ್ತು ಅಮೇರಿಕನ್ ಜನರೊಂದಿಗೆ ಇವೆ.", ಎಂದು ಪ್ರಧಾನಿ ಮೋದಿ ಎಕ್ಸ್ ನ ಪೋಸ್ಟ್ ಒಂದರಲ್ಲಿ ಹೇಳಿದ್ದಾರೆ.
English summary :PM Modi strongly condemned the shooting of former US President Donald Trump