ಪೆಟ್ರೋಲ್-ಡೀಸೆಲ್ ಹಾಗೂ ಹಾಲಿನ ದರ ಏರಿಸಿದ ಬೆನ್ನಲ್ಲೇ ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ದರ ಸಹ ಹೆಚ್ಚಳ | JANATA NEWS

ಬೆಂಗಳೂರು : ಪೆಟ್ರೋಲ್-ಡೀಸೆಲ್ ಹಾಗೂ ಹಾಲಿನ ದರ ಏರಿಸಿದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಸರ್ಕಾರ ಈಗ ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ದರವನ್ನೂ ಸಹ ಹೆಚ್ಚಳ ಮಾಡಲು ಮುಂದಾಗಿದೆ ಎನ್ನಲಾಗಿದೆ.
ಸದ್ಯದಲ್ಲೇ ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಲಾಗುವುದು. ಮೊನ್ನೆ ನಿಗಮದ ಮೀಟಿಂಗ್ ಮುಗಿದಿದ್ದು 15-20% ದರ ಹೆಚ್ಚಳ ಮಾಡುವ ಪ್ರಸ್ತಾವನೆಯನ್ನು ಸಿಎಂ ಮುಂದೆ ಇಟ್ಟಿದ್ದೇವೆ, ಎಂದು ಕೆಎಸ್‌ಆರ್‌ಟಿಸಿ ನಿಗಮದ ಅಧ್ಯಕ್ಷ, ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಹೇಳಿದ್ದಾರೆ.
ಕಳೆದ ತ್ರೈಮಾಸಿಕದಲ್ಲಿ 295 ಕೋಟಿ ರೂ. ನಷ್ಟವಾಗಿದೆ. ಟಿಕೆಟ್ ದರ ಏರಿಸದೇ ಇದ್ದರೆ ಕೆಎಸ್‌ಆರ್‌ಟಿಸಿ (KSRTC) ಸಂಸ್ಥೆ ಉಳಿಯುವುದಿಲ್ಲ, ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸದ್ಯದಲ್ಲೇ ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಲಾಗುವುದು. ಮೊನ್ನೆ ನಿಗಮದ ಮೀಟಿಂಗ್ ಮುಗಿದಿದ್ದು 15-20% ದರ ಹೆಚ್ಚಳ ಮಾಡುವ ಪ್ರಸ್ತಾವನೆಯನ್ನು ಸಿಎಂ ಮುಂದೆ ಇಟ್ಟಿದ್ದೇವೆ, ಎಂದು ಮಾಹಿತಿ ನೀಡಿದರು.