ಕೇರಳದ ದುರ್ಘಟನೆಗೆ ವಿಷಾದ ವ್ಯಕ್ತಪಡಿಸಿದ ರಾಜ್ಯದ ಮಂತ್ರಿಗಳಿಂದ ಉತ್ತರ ಕನ್ನಡದ ಬಗ್ಗೆ ನಿರ್ಲಕ್ಷ್ಯಕ್ಕೆ ನೆಟ್ಟಿಗರ ಬೇಸರ | JANATA NEWS

ಬೆಂಗಳೂರು : ನೆರೆ ರಾಜ್ಯ ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದ ದುರಂತದ ಬಗ್ಗೆ ರಾಜ್ಯ ಸರ್ಕಾರದ ಮಂತ್ರಿಗಳು ಹಾಗೂ ಮುಖ್ಯಮಂತ್ರಿಗಳು ಕಂಬನಿ ಮಿಡಿದಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಅಸಮಾಧಾನಕ್ಕೆ ಕಾರಣವಾಗಿದೆ.
ವಯನಾಡ್ ಜಿಲ್ಲೆಯ ಮೆಪ್ಪಾಡಿ, ಮುಂಡಕೈ ಮತ್ತು ಚೋರಲ್ ಮಲದಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ಸಂಭವಿಸಿರುವ ಭೂಕುಸಿತ ಹಾಗೂ ಜಲಪ್ರಳಯದಿಂದ 150ಕ್ಕೂ ಅಧಿಕ ಸಾವು ಸಂಭವಿಸಿರುವ ಆತಂಕ ವ್ಯಕ್ತವಾಗಿದೆ. ಈ ಘಟನೆ ಕುರಿತು ದೇಶಾದ್ಯಂತ ಸಾಕಷ್ಟು ವಿಷಾದ ವ್ಯಕ್ತವಾಗಿದ್ದು ದೇಶದ ಸೇನಾ, ಎನ್.ಡಿ.ಆರ್.ಎಫ್ ರಕ್ಷಣಾ ಕಾರ್ಯಾಚರಣೆ ಎಡಬಿಡದೆ ನಿರಂತರ ಸಾಗುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಸಂಭವಿಸಿದ ಪ್ರಕೃತಿ ವಿಕೋಪಕ್ಕೆ ತೀವ್ರ ಸಂತಾಪ ವ್ಯಕ್ತಪಡಸಿದ್ದು, ಪ್ರಧಾನ ಮಂತ್ರಿ ಪರಿಹಾರ ನಿಧಿಯಿಂದ ಸಂತ್ರಸ್ತರಿಗೆ ತಲಾ 2 ಲಕ್ಷ ಪರಿಹಾರ ಮತ್ತು ಗಾಯಾಳುಗಳಿಗೆ 50 ಸಾವಿರ ಘೋಷಿಸಿದ್ದಾರೆ. ಅಲ್ಲದೇ, ಪ್ರಧಾನಿ ಮೋದಿ ಅವರು ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಅವರ ಜೊತೆ ಫೋನಿನಲ್ಲಿ ಚರ್ಚೆ ನಡೆಸಿದ್ದರು.
ರಾಜ್ಯ ಇಂದನ ಖಾತೆ ಸಚಿವ ಕೆಜೆ.ಜಾರ್ಜ್ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿ, "ವಯನಾಡನ್ನು ತೀವ್ರ ಹತಾಶೆಗೆ ತಳ್ಳಿರುವ ಭೂಕುಸಿತವನ್ನು ನೋಡುವುದು ಹೃದಯ ವಿದ್ರಾವಕವಾಗಿದೆ. ಅನೇಕ ಜೀವಗಳು ಬಲಿಯಾಗಿವೆ. ಅತ್ಯಂತ ವಿನಾಶಕಾರಿ ಸನ್ನಿವೇಶಗಳಿಂದ ತಮ್ಮ ಜೀವನವನ್ನು ಬಾಧಿಸಿರುವ ವಯನಾಡಿನ ಜನರಿಗಾಗಿ ನಮ್ಮ ಹೃದಯಗಳು ಹೊರಹೊಮ್ಮುವುದು." ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಆದರೆ, ನಮ್ಮದೇ ರಾಜ್ಯದ ಉತ್ತರ ಕನ್ನಡ ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸಿ ಸಾವು ನೋವು ಸಂಭವಿಸಿ, ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿ ಜನಜೀವನ ಅಸ್ತವ್ಯಸ್ತಗೊಂಡು ಇಷ್ಟು ದಿನವಾದಾಗ ಮಿಡಿಯದೆ ಇದ್ದ ರಾಜ್ಯ ಸರ್ಕಾರದ ಮಂತ್ರಿಗಳ ಮನಃ ಈಗ ವಯನಾಡಿಗೆ ವ್ಯಕ್ತವಾಗಿರುವುದು, ಸಾಮಾಜಿಕ ಜಾಲತಾಣದಲ್ಲಿ ಅನೇಕರಿಂದ ಬೆಸರಕ್ಕೆ ಕಾರಣವಾಗಿದೆ.
ರಾಹುಲ್ ಗಾಂಧಿ ಅವರು ವಯನಾಡ್ ಸಂಸದೀಯ ಕ್ಷೇತ್ರದ ಮಾಜಿ ಸಂಸದರಾಗಿದ್ದು, ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ವಯನಾಡ್ ಸಂಸದೀಯ ಕ್ಷೇತ್ರದಿಂದ ಆಯ್ಕೆಯಾಗಿದ್ದು, ಬಳಿಕ ರಾಯಬರೇಲಿ ಸ್ಥಾನವನ್ನು ಉಳಿಸಿಕೊಂಡು ವಯನಾಡ್ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ನವದೆಹಲಿಯಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು, ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ಸಂಕಷ್ಟದಲ್ಲಿರುವ ಜನರ ನೆರವಿಗಾಗಿ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಹಾಗೆಯೇ ಗಡಿಜಿಲ್ಲೆ ಚಾಮರಾಜ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿ ತೆರೆಯಲಾಗಿದೆ. ಈ ಮಾಹಿತಿಯನ್ನು ಹೆಚ್ಚೆಚ್ಚು ಜನರಿಗೆ ತಲುಪಿಸಿ, ಸಂಕಷ್ಟದಲ್ಲಿರುವವರಿಗೆ ಸಕಾಲದಲ್ಲಿ ನೆರವು ಸಿಗಲು ಕಾರಣರಾಗಿ." ಎಂದು ಸಹಾಯವಾಣಿ ಸಂಖ್ಯೆಗಳೊಂದಿಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
Achaya, you are minister in the KARNATAKA state government
— Naren Menon (@NarenMenon1) July 31, 2024
What have you felt (forget about doing) for the landslide victims of Uttara Kannada which happens to be in the state of KARNATAKA, a state you happen to be a minister in? https://t.co/Fxrq4ERaX8