Fri,Jan24,2025
ಕನ್ನಡ / English

ಕಪ್ಪುಚುಕ್ಕೆಯನ್ನು ವೈಟ್ನರ್ ನುಂಗಿತ್ತಾ..?? : ದಾಖಲೆ ಸಮೇತ ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಮಂತ್ರಿ ಕುಮಾರಸ್ವಾಮಿ ವಾಗ್ದಾಳಿ | JANATA NEWS

23 Aug 2024
817

ನವದೆಹಲಿ : ಮೂಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರು ದಿನದಿಂದಕ್ಕೆ ಹೆಚ್ಚು ಸಂಕಷ್ಟಕ್ಕೆ ಸೀಲುಕುವಂತೆ ಭಾಸವಾಗುತ್ತಿದ್ದು, ಹಗರಣಕ್ಕೆ ಪುಷ್ಟಿ ನೀಡುವ ಹೊಸ ದಾಖಲೆಗಳು ದಿನಕ್ಕೊಂದು ಹೊರಗೆ ಬರಲಾರಂಬಿಸಿದೆ.

ಇನ್ನೂ ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಎಂದಿನ ಶೈಲಿಯಲ್ಲಿ ದಾಖಲೆ ಸಮೇತ ಸಿದ್ದರಾಮಯ್ಯ ಅವರನ್ನು ತರಾಟೆ ತೆಗೆದುಕೊಂಡಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಮುಜುಗರ ಉಂಟುಮಾಡಿದ್ದಾರೆ.

"ಸನ್ಮಾನ್ಯ ಸಿಎಂ ಸಿದ್ದರಾಮಯ್ಯ ನವರೇ.. ಮೂಡಾ ನಿವೇಶನ ಹಂಚಿಕೆಯಲ್ಲಿ ನನ್ನ ಹಾಗೂ ನನ್ನ ಕುಟುಂಬದ ಪಾತ್ರವೇ ಇಲ್ಲ ಎಂದು ಬೊಗಳೆ ಬಿಡುವ ನಿಮಗೆ ಕನ್ನಡ ಬರುತ್ತದೆ, ಭಾಷೆಯೂ ಗೊತ್ತಿದೆ ಎಂದು ನಾನಾದರೂ ಪರಿಭಾವಿಸುತ್ತೇನೆ. ನೀವು ಸ್ವಯಂಘೋಷಿತ ವಕೀಲರಲ್ಲವೇ? ಇಲ್ಲಿರುವ ದಾಖಲೆಯನ್ನೊಮ್ಮೆ ಕಣ್ಣಲ್ಲಿ ಕಣ್ಣಿಟ್ಟು ಓದಿ. "50:50ರ ಅನುಪಾತದಲ್ಲಿಯೇ ಮೂಡಾ ಬದಲಿ ನಿವೇಶನ ನೀಡಲೇಬೇಕು ಎಂದು ಸಿಎಂ ಸಾಹೇಬರ ಧರ್ಮಪತ್ನಿ 'ಒತ್ತಾಯ' ಮಾಡಿದ್ದಾರೆ!!" ಎಂದು ಎಚ್.ಡಿ.ಕೆ ದಾಖಲೆ ಸಮೇತ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

"ಅರ್ಜಿದಾರರಾದ ಶ್ರೀಮತಿ ಪಾರ್ವತಮ್ಮ ಇವರಿಗೆ ಮಾರುಕಟ್ಟೆ ದರದಲ್ಲಿ ಜಮೀನಿನ ಪರಿಹಾರ ನೀಡುವುದಾಗಿಯೂ ಅಥವಾ 40:60ರ ಅನುಪಾತದಲ್ಲಿ ನಿವೇಶನ ನೀಡುವುದಾಗಿಯೂ ತಿಳಿಸಲಾಗಿತ್ತು. ಆದರೆ ಪ್ರಾಧಿಕಾರದ ಈ ಸಲಹೆಗೆ ಅವರು ಒಪ್ಪಿಗೆ ನೀಡದೇ ಇದ್ದು, ಬದಲಿ ಜಮೀನನ್ನು ನೀಡುವಂತೆ ಒತ್ತಾಯಿಸಿರುತ್ತಾರೆ."

"ಇದು ಮೂಡಾ ದಾಖಲೆಯಲ್ಲಿರುವ ಒಕ್ಕಣೆ. ಇದಕ್ಕೆ ತಾವು ಏನಂತೀರಿ? ಇದು ತಮ್ಮ ಪ್ರಕಾರ ಟಿಪ್ಪಣಿಯೋ..? ಒಕ್ಕಣೆಯೋ..? ಅಥವಾ ಅಪ್ಪಣೆಯೋ..? ಸೂಪರ್ ಸಿಎಂ ಅವರೇ 'ಒತ್ತಾಯಿಸಿರುತ್ತಾರೆ!!!' ಎಂದರೆ ಮೂಡಾ ಅಧಿಕಾರಿಗಳು ಇನ್ನೇನು ಮಾಡಿಯಾರು? ಆಗ ತಾವು ರಾಜ್ಯದಲ್ಲಿ ಏನಾಗಿದ್ದಿರಿ? ವಿಧಾನಸೌಧದ 3ನೇ ಮಹಡಿಯಲ್ಲಿರುವ ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂತಿದ್ದಿರಿ. ಈಗ ಹೇಳಿ.. ಯಾರ ತಟ್ಟೆಯಲ್ಲಿ ಏನು ಸತ್ತು ಬಿದ್ದಿದೆ? ಕಪ್ಪುಚುಕ್ಕೆಯನ್ನು ವೈಟ್ನರ್ ನುಂಗಿತ್ತಾ..?? ", ಎಂದು ಕೇಂದ್ರ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಎಕ್ಸ್ ನಲ್ಲಿ ಸಾಲು ಸಾಲು ಸವಾಲುಗಳೊಂದಿಗೆ ಸಿಎಂ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

English summary :Whitener swallowed the black spot..?? : Union Minister Kumaraswamy lashed out against CM Siddaramaiah with record

ಮಹಾ ಕುಂಭಮೇಳ : ಸಂಗಮದಲ್ಲಿ ತೀರ್ಥಸ್ನಾನ ಮಾಡಿದ ಕೇಂದ್ರ ರಾಜ್ಯ ಸಚಿವ ವಿ.ಸೋಮಣ್ಣ
ಮಹಾ ಕುಂಭಮೇಳ : ಸಂಗಮದಲ್ಲಿ ತೀರ್ಥಸ್ನಾನ ಮಾಡಿದ ಕೇಂದ್ರ ರಾಜ್ಯ ಸಚಿವ ವಿ.ಸೋಮಣ್ಣ
ದೊಡ್ಡ ಯಶಸ್ಸು : 1 ಕೋಟಿ ರೂ. ಬಹುಮಾನ ಹೊತ್ತಿದ್ದ ಮಾವೋವಾದಿ ಜೊತೆ 20 ಮಾವೋವಾದಿಗಳು ತಟಸ್ಥ
ದೊಡ್ಡ ಯಶಸ್ಸು : 1 ಕೋಟಿ ರೂ. ಬಹುಮಾನ ಹೊತ್ತಿದ್ದ ಮಾವೋವಾದಿ ಜೊತೆ 20 ಮಾವೋವಾದಿಗಳು ತಟಸ್ಥ
ಆರ್‌ಜಿ ಕರ್ ಅತ್ಯಾಚಾರ ಮತ್ತು ಕೊಲೆ ಪ್ರಕರಣ : ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆ  ಸೆಷನ್ಸ್ ನ್ಯಾಯಾಲಯ
ಆರ್‌ಜಿ ಕರ್ ಅತ್ಯಾಚಾರ ಮತ್ತು ಕೊಲೆ ಪ್ರಕರಣ : ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆ ಸೆಷನ್ಸ್ ನ್ಯಾಯಾಲಯ
ಇಸ್ರೋ ಸ್ಪೇಡೆಕ್ಸ್ ಡಾಕಿಂಗ್ ಮಿಷನ್‌ ಯಶಸ್ವಿ : ಈ ಸಾಮರ್ಥ್ಯ ಹೊಂದಿರುವ ವಿಶ್ವದ ನಾಲ್ಕನೇ ರಾಷ್ಟ್ರ ಭಾರತ
ಇಸ್ರೋ ಸ್ಪೇಡೆಕ್ಸ್ ಡಾಕಿಂಗ್ ಮಿಷನ್‌ ಯಶಸ್ವಿ : ಈ ಸಾಮರ್ಥ್ಯ ಹೊಂದಿರುವ ವಿಶ್ವದ ನಾಲ್ಕನೇ ರಾಷ್ಟ್ರ ಭಾರತ
ಮನೆಯಲ್ಲಿ ನಿಮ್ಮ ಹೆಂಡತಿಯನ್ನು ನೀವು ಎಷ್ಟು ಹೊತ್ತು ನೋಡಬಹುದು? ಆಫೀಸಿಗೆ ಹೋಗಿ ಕೆಲಸ ಮಾಡು - ಎಲ್ ಅಂಡ್ ಟಿ ಅಧ್ಯಕ್ಷ
ಮನೆಯಲ್ಲಿ ನಿಮ್ಮ ಹೆಂಡತಿಯನ್ನು ನೀವು ಎಷ್ಟು ಹೊತ್ತು ನೋಡಬಹುದು? ಆಫೀಸಿಗೆ ಹೋಗಿ ಕೆಲಸ ಮಾಡು - ಎಲ್ ಅಂಡ್ ಟಿ ಅಧ್ಯಕ್ಷ
ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ವೈಮಾನಿಕ ದಾಳಿಯನ್ನು ತೀವ್ರವಾಗಿ ಖಂಡಿಸಿದ ಭಾರತ
ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ವೈಮಾನಿಕ ದಾಳಿಯನ್ನು ತೀವ್ರವಾಗಿ ಖಂಡಿಸಿದ ಭಾರತ
ಚಿನ್ನದ ಹಾಲ್‌ಮಾರ್ಕ್‌ನಂತೆಯೇ ಶೀಘ್ರದಲ್ಲೇ ಬೆಳ್ಳಿಗೆ ಹಾಲ್‌ಮಾರ್ಕಿಂಗ್ - ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಚಿನ್ನದ ಹಾಲ್‌ಮಾರ್ಕ್‌ನಂತೆಯೇ ಶೀಘ್ರದಲ್ಲೇ ಬೆಳ್ಳಿಗೆ ಹಾಲ್‌ಮಾರ್ಕಿಂಗ್ - ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಅಮೆರಿಕದಲ್ಲಿ ಭಯೋತ್ಪಾದಕ ದಾಳಿ : ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಒಗ್ಗಟ್ಟಾಗಿ ನಿಲ್ಲಬೇಕು - ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್
ಅಮೆರಿಕದಲ್ಲಿ ಭಯೋತ್ಪಾದಕ ದಾಳಿ : ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಒಗ್ಗಟ್ಟಾಗಿ ನಿಲ್ಲಬೇಕು - ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್
ಮಾಜಿ ಪ್ರಧಾನಿಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ :  ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆ
ಮಾಜಿ ಪ್ರಧಾನಿಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ : ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆ
ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನ : ನೀಲಿ ಪೇಟದ ಸರ್ದಾರ್ ರಹಸ್ಯ
ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನ : ನೀಲಿ ಪೇಟದ ಸರ್ದಾರ್ ರಹಸ್ಯ
ಚೆನ್ನೈ ಅಣ್ಣಾ ವಿಶ್ವವಿದ್ಯಾನಿಲಯದ ಲೈಂಗಿಕ ದೌರ್ಜನ್ಯ ಪ್ರಕರಣ : ರಾಜ್ಯ ಸರ್ಕಾರ ಕಿತ್ತೋಗೆಯುವವರೆಗೂ ಪಾದರಕ್ಷೆ ಧರಿಸುವುದಿಲ್ಲ - ಅಣ್ಣಾಮಲೈ
ಚೆನ್ನೈ ಅಣ್ಣಾ ವಿಶ್ವವಿದ್ಯಾನಿಲಯದ ಲೈಂಗಿಕ ದೌರ್ಜನ್ಯ ಪ್ರಕರಣ : ರಾಜ್ಯ ಸರ್ಕಾರ ಕಿತ್ತೋಗೆಯುವವರೆಗೂ ಪಾದರಕ್ಷೆ ಧರಿಸುವುದಿಲ್ಲ - ಅಣ್ಣಾಮಲೈ
ಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ 100ನೇ ಜನ್ಮದಿನ : ಪ್ರಧಾನಿ ಮೋದಿ ಪುಷ್ಪ ನಮನ
ಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ 100ನೇ ಜನ್ಮದಿನ : ಪ್ರಧಾನಿ ಮೋದಿ ಪುಷ್ಪ ನಮನ

ನ್ಯೂಸ್ MORE NEWS...