Mon,Dec15,2025
ಕನ್ನಡ / English

ನಾನು ಭಾವಿಸಿದಷ್ಟು ಧೈರ್ಯವಂತರಲ್ಲ ನೀವು - ಸಿದ್ದರಾಮಯ್ಯಗೆ ಲೇವಡಿ ಮಾಡಿದ ಎಚ್.ಡಿ.ಕೆ | JANATA NEWS

27 Sep 2024

ಬೆಂಗಳೂರು : ಸಿಬಿಐ ತನಿಖಾ ದಳಕ್ಕೆ ಮುಕ್ತ ಅನುಮತಿ ನೀಡಿರುವ ಅಧಿಸೂಚನೆ ವಾಪಸ್ ಪಡೆಯಲು ರಾಜ್ಯ ಕಾಂಗ್ರೆಸ್ ಸರ್ಕಾರದ ಕ್ಯಾಬಿನೆಟ್ ನಿರ್ಧರಿಸಿದ್ದು, ಸಿಎಂ ಸಿದ್ದರಾಮಯ್ಯ ಸಿಬಿಐ ತನಿಖೆಗೆ ಭಯಪಡುತ್ತಿದ್ದಾರೆ ಎಂಬಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಲೇವಡಿ ಮಾಡಿದ್ದಾರೆ.

ಈ ಕುರಿತು ಹೇಳಿರುವ ಎಚ್.ಡಿ.ಕೆ ಅವರು, "ಶ್ರೀಮಾನ್ ಸಿದ್ದರಾಮಯ್ಯನವರೇ.. ನಿಮ್ಮ 'ಸಿದ್ವಿಲಾಸ'ಕ್ಕೆ ಉಘೇಉಘೇ ಎನ್ನಲೇಬೇಕು. "
"ಅಂದು: ಹಗರಣಗಳಿಂದ ಪಾರಾಗಲು ಲೋಕಾಯುಕ್ತಕ್ಕೇ ಸಮಾಧಿ ಕಟ್ಟಿ ಎಸಿಬಿ ರಚನೆ ಮಾಡಿಕೊಂಡಿರಿ!"
"ಇಂದು: ಮೂಡಾಗರಣದಿಂದ ಬಚಾವಾಗಲು ನಿಮಗೀಗ ಅದೇ ಲೋಕಾಯುಕ್ತವೇsss ಗತಿ!!"

"Karma Hit back(ಕರ್ಮ ಹಿಟ್ಸ್ ಬ್ಯಾಕ್) ಎಂದರೇ ಇದೇ ಅಲ್ಲವೇ ಸಿದ್ದರಾಮಯ್ಯ ನವರೇ? ನಿಮ್ಮ ಗ್ರಹಚಾರಕ್ಕೆ ಎಸಿಬಿಯನ್ನೂ ಹೈಕೋರ್ಟ್ ಬರ್ಖಾಸ್ತು ಮಾಡಿಬಿಟ್ಟಿತು. ಈಗ ಲೋಕಾಯುಕ್ತವನ್ನೇ ಗುರಾಣಿ ಮಾಡಿಕೊಂಡು ಸಿಬಿಐ ರಾಜ್ಯ ಪ್ರವೇಶಕ್ಕೆ ಸಂಪುಟದಿಂದ ಬಾಗಿಲು ಬಂದ್ ಮಾಡಿಸಿದ್ದೀರಿ. ಅಲ್ಲಿಗೆ ಆರೋಪಿ ಅಪರಾಧಿಯಾದ ಎಂದೇ ಲೆಕ್ಕ. 'ಸಿದ್ದಾಪರಾದ' ಸಾಬೀತಿಗೆ ಇನ್ನೊಂದೇ ಹೆಜ್ಜೆ ಬಾಕಿ. ನಾನು ಭಾವಿಸಿದಷ್ಟು ಧೈರ್ಯವಂತರಲ್ಲ ನೀವು.. ನಿಮಗೂ ಭಯವಿದೆsss!! ಅದೇ ಈ ನೆಲದ ಕಾನೂನಿನ ಶಕ್ತಿ.", ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆ ನಡೆಸುವ ಸಾಧ್ಯತೆ ಹೆಚ್ಚಾಗಿತ್ತು, ಎಂದು ಹೇಳಲಾಗಿದೆ. ಆದ್ದರಿಂದ ಕಾನೂನಿನ ಕುಣಿಕೆಯಿಂದ ರಕ್ಷಣೆ ಪಡೆಯಲು ಸಿಎಂ ಸಿದ್ದರಾಮಯ್ಯನವರು ಮುಂದಾಗಿದ್ದಾರೆ ಎಂದು ಹೇಳಲಾಗಿದೆ.

ಮೂಡಾ ಹಗರಣದ ಪರ ವಿರೋಧ ಆಲಿಸಿದ ಹೈ ಕೋರ್ಟ್ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಶನ್ ಆದೇಶವನ್ನು ಎತ್ತಿ ಹಿಡಿದಿದೆ. ಆ ಮೂಲಕ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಿದೆ.

English summary :You are not as brave as I thought - HDK mocked Siddaramaiah

 ಆಸ್ಟ್ರೇಲಿಯಾ ಬೋಂಡಿ ಬೀಚ್‌ನಲ್ಲಿ ಭಯೋತ್ಪಾದಕ ದಾಳಿಗೆ ಕನಿಷ್ಟ 12 ಸಾವು
ಆಸ್ಟ್ರೇಲಿಯಾ ಬೋಂಡಿ ಬೀಚ್‌ನಲ್ಲಿ ಭಯೋತ್ಪಾದಕ ದಾಳಿಗೆ ಕನಿಷ್ಟ 12 ಸಾವು
2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ
2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ
₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಎಸ್ಐಆರ್, ಸಂಚಾರ ಸಾಥಿ - ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು

ನ್ಯೂಸ್ MORE NEWS...