ಮಳೆಯಿಂದಾಗಿ ಬೆಂಗಳೂರಿನಲ್ಲಿ ವಿದ್ಯುತ್ ವ್ಯತ್ಯಯ: ನಾಳೆಯೂ ಹಲವೆಡೆ ದಿನಪೂರ್ತಿ ವಿದ್ಯುತ್ ವ್ಯತ್ಯಯ | JANATA NEWS

ಬೆಂಗಳೂರು : ವಿಪರೀತ ಮಳೆಯಿಂದ ರಾಜಧಾನಿ ಬೆಂಗಳೂರಿನ ನಿವಾಸಿಗಳು ವಿಫರಿತವಾಗಿ ವಿದ್ಯುತ್ ಕಣ್ಣುಮುಚ್ಚಾಲೆ ಎದುರಿಸುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಇದರ ಬೆನ್ನಲ್ಲೇ ನಾಳೆ ಬುಧವಾರ 23.10.2024 ರಂದು ಸಹ ವಿದ್ಯುತ್ ವ್ಯತ್ಯಾಯವನ್ನು ರಾಜಧಾನಿಯ ಕೆಲವು ಭಾಗಗಳ ನಿವಾಸಿಗಳು ಎದುರಿಸುವ ಕುರಿತು ಬೆಸಕಾಂ ಪ್ರಕಟಣೆ ಹೊರಡಿಸಿದೆ.
66/11 kV ವಿಡಿಯಾ ಸಬ್‌ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಜಾಲಹಳ್ಳಿ ವಿಭಾಗದ ಎನ್-9 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 23.10.2024 ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
“ವಿನಾಯಕ ನಗರ, ವಿಕಾಸ್ ನಗರ, ಶೋಭಾ ಅಪಾರ್ಟ್‌ಮೆಂಟ್, 8 ನೇ ಮೈಲ್ ರಸ್ತೆ, ರಾಮಯ್ಯ ಲೇಔಟ್, ಹಾವನೂರು ಎಕ್ಸ್‌ಟೆನ್. ನಾರಾಯಣ ಲೇಔಟ್, ವಿಡಿಯಾ ಸ್ಕೂಲ್, ಕುವೆಂಪು ನಗರ, ವಿಡಿಯಾ ಬಸ್ ಸ್ಟಾಪ್, ರಿಲಯನ್ಸ್ ಫ್ರೆಶ್, ಮುನಿಕೊಂಡಪ್ಪ ಲೇಔಟ್, ಅಶೋಕ್ ನಗರ, ವಿದ್ಯಾ ನಗರ, ಡಿಫೆನ್ಸ್ ಕಾಲೋನಿ, ಹಾವನೂರು ಎಕ್ಸ್,. ಮಂಜುನಾಥ್ ನಗರ, ಮಹಾಲಕ್ಷ್ಮಿ ನಗರ, ಕಾಟರಾಯ ನಗರ, ಸೋಪ್ ಫ್ಯಾಕ್ಟರಿ ಲೇಔಟ್, ವಿಜಯಲಕ್ಷ್ಮಿ ಲೇಔಟ್, ಅಂದಾನಪ್ಪ ಲೇಔಟ್ , ಬಿಟಿಎಸ್ ಲೇಔಟ್, ಸಿದ್ದೇಶ್ವರ ಲೇಔಟ್, ಸಾಸುವೆಘಟ್ಟ, ಸೋಲದೇವನಹಳ್ಳಿಯ ಭಾಗಶಃ, ತರಬನಹಳ್ಳಿ ಮುಖ್ಯ ರಸ್ತೆ, , ಹಾವನೂರು ಎಕ್ಸ್‌ಟಿಎನ್., ಹೆಸರಘಟ್ಟ ಮುಖ್ಯ ರಸ್ತೆ, ಸಿಡೇದಹಳ್ಳಿ, ಭಾಗಶಃ ವಿಶ್ವೇಶರಯ್ಯ ಲೇಔಟ್, ರಾಯಲ್ ಎನ್‌ಕ್ಲೇವ್, ಬೈರವೇಶ್ವರ ವೃತ್ತ. ಮತ್ತು ಮೇಲೆ ಹೇಳಿದ ಪ್ರದೇಶದ ಸುತ್ತಮುತ್ತಲಿನ ಪ್ರದೇಶಗಳು.