Mon,Dec15,2025
ಕನ್ನಡ / English

ಕಾಲಾ ಕುಮಾರಸ್ವಾಮಿ ಎಂದು ನಿಂದನೆ : ಸಚಿವ ಜಮೀರ್ ವಿರುದ್ಧ ಜನಾಂಗೀಯ ನಿಂದನೆ, ವರ್ಣಭೇದ ತಾರತಮ್ಯ ಆರೋಪ | JANATA NEWS

11 Nov 2024

ಚೆನ್ನಪಟ್ಟಣ : ಚನ್ನಪಟ್ಟಣ ಉಪಚುನಾವಣೆ ಪ್ರಚಾರದ ವೇಳೆ ವಸತಿ ಖಾತೆ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಜನಾಂಗೀಯ ನಿಂದನೆ ಮಾಡಿದ್ದಾರೆ, ಎಂದು ಜಾತ್ಯತೀತ ಜನತಾ ದಳ ಪಕ್ಷ ಗಂಭೀರ ಆರೋಪ ಮಾಡಿದೆ.

"ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಭಾನುವಾರ (10-11-2024) ರಾತ್ರಿ ಪ್ರಚಾರದ ವೇಳೆ ಬಹಿರಂಗ ಸಭೆಯಲ್ಲಿ ಸಾರ್ವಜನಿಕವಾಗಿ ಕೇಂದ್ರ ಸಚಿವರಾದ ಶ್ರೀ ಹೆಚ್‌.ಡಿ. ಕುಮಾರಸ್ವಾಮಿ ಅವರನ್ನು, ​ಜಮೀರ್​ ಅಹ್ಮದ್​ ಖಾನ್‌ "ಕಾಲಾ ಕುಮಾರಸ್ವಾಮಿ" (ಕರಿಯ ಕುಮಾರಸ್ವಾಮಿ) ಎಂದು ಉರ್ದು ಭಾಷೆಯಲ್ಲಿ ನಿಂದಿಸಿದ್ದಾರೆ.", ಎಂದು ಜೆಡಿಎಸ್ ಆರೋಪಿಸಿದೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ದೂರು ಸಲ್ಲಿಸಿರುವ ಜೆಡಿಎಸ್ ತನ್ನ ಅಧಿಕೃತ ಖಾತೆಯಲ್ಲಿ, "ಈ ಮೂಲಕ ಕಪ್ಪು ವರ್ಣದವರ ಜನಾಂಗೀಯ ನಿಂದನೆ ಮಾಡಿ ವರ್ಣಭೇದ ತಾರತಮ್ಯ ಎಸಗಿದ್ದಾರೆ. ಅಷ್ಟೆ ಅಲ್ಲದೇ ಒಂದು ಸಮುದಾಯವನ್ನು ಎತ್ತಿಕಟ್ಟಿ ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಹದಗೆಡಲು ಜನರನ್ನು ಪ್ರಜೋದಿಸಿರುವ ಜಮೀರ್​ ಅಹ್ಮದ್​ ಬಾಯಿಂದ ಬಂದಿರುವ ಈ ಜನಾಂಗೀಯ ದ್ವೇಷದ ಮಾತುಗಳು ಅಕ್ಷಮ್ಯ. ಅಪರಾಧ. ಈ ಕೂಡಲೇ ಗೃಹ ಸಚಿವರಾದ ಡಾ.ಪರಮೇಶ್ವರ, ರಾಮನಗರ ಜಿಲ್ಲಾ ಪೊಲೀಸರು ಜನಾಂಗೀಯ ನಿಂದನೆ, ವರ್ಣಭೇದ ಹಾಗೂ ಸಮಾಜದಲ್ಲಿ ಶಾಂತಿ ಕದಡಲು ಯತ್ನಿಸಿರುವ ಸಚಿವ ಜಮೀರ್‌ ಅಹ್ಮದ್‌ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಜಾತ್ಯತೀತ ಜನತಾದಳ ಪಕ್ಷವು ಆಗ್ರಹಿಸುತ್ತದೆ.", ಎಂದು ಪೋಸ್ಟ್ ಮಾಡಿದೆ.

ಅಲ್ಲದೇ, "ರಾಷ್ಟ್ರೀಯ ಕಾಂಗ್ರೆಸ್‌ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್(ಕೇಂದ್ರ) ಪಕ್ಷಕ್ಕೆ ನೈತಿಕತೆ ಉಳಿಸಿಕೊಂಡಿದ್ದರೇ ಮೊದಲು ಈ ಜನಾಂಗೀಯ ದ್ವೇಷಿ ಜಮೀರ್‌ ರಾಜೀನಾಮೆ ಪಡೆಯಬೇಕು.", ಎಂದು ಜೆಡಿಎಸ್ ಒತ್ತಾಯಿಸಿದೆ.

English summary : Insulting as Kala Kumaraswamy: Allegation of Racial Insult, Racial Discrimination Against Minister Zameer

 ಆಸ್ಟ್ರೇಲಿಯಾ ಬೋಂಡಿ ಬೀಚ್‌ನಲ್ಲಿ ಭಯೋತ್ಪಾದಕ ದಾಳಿಗೆ ಕನಿಷ್ಟ 12 ಸಾವು
ಆಸ್ಟ್ರೇಲಿಯಾ ಬೋಂಡಿ ಬೀಚ್‌ನಲ್ಲಿ ಭಯೋತ್ಪಾದಕ ದಾಳಿಗೆ ಕನಿಷ್ಟ 12 ಸಾವು
2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ
2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ
₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಎಸ್ಐಆರ್, ಸಂಚಾರ ಸಾಥಿ - ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು

ನ್ಯೂಸ್ MORE NEWS...