ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ 4% ಮೀಸಲಾತಿ, ಕೆಟಿಪಿಪಿ ಕಾಯ್ದೆ ತಿದ್ದುಪಡಿಗೆ ಸಿದ್ದರಾಮಯ್ಯ ಅನುಮೋದನೆ ನೀಡಿದ್ದಾರೆ - ಆರ್. ಅಶೋಕ | JANATA NEWS
ಬೆಂಗಳೂರು : ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ 4% ಮೀಸಲಾತಿ ಕೊಡಬೇಕು ಎಂದು ಕೆಟಿಪಿಪಿ ಕಾಯ್ದೆಗೆ ತಿದ್ದುಪಡಿ ತರಲೂ ಸಿಎಂ ಸಿದ್ದರಾಮಯ್ಯ ಅವರು ಅನುಮೋದನೆ ನೀಡಿದ್ದು, ಈಗ ಪ್ರಸ್ತಾವನೆ ಇಲ್ಲ ಎಂದು ಸುಳ್ಳು ಹೇಳುತ್ತಿದ್ದಾರೆ, ಎಂದು ಪ್ರತಿಪಕ್ಷದ ನಾಯಕ ಆರ್. ಅಶೋಕ ಗಂಭೀರ ಆರೋಪ ಮಾಡಿದ್ದಾರೆ.
"ಎಡವಟ್ಟು ಮಾಡೋದು, ಆಮೇಲೆ ಸುಳ್ಳು ಹೇಳೋದು... ಇದೇ ಸಿಎಂ ಸಿದ್ದರಾಮಯ್ಯ ನವರ ದಿನಚರಿ!" ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಲೇವಡಿ ಮಾಡಿರುವ ಬಿಜೆಪಿ ನಾಯಕ ಆರ್. ಅಶೋಕ ಅವರು. "ಸ್ವಾಮಿ ಮುಖ್ಯಮಂತ್ರಿಗಳೇ, ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಪ್ರಸ್ತಾವನೆಯೇ ಸರ್ಕಾರದ ಮುಂದಿಲ್ಲ ಎಂದು ಸತ್ಯದ ತಲೆಯ ಮೇಲೆ ಹೊಡೆದ ಹಾಗೆ ಸುಳ್ಳು ಹೇಳುತ್ತೀರಲ್ಲಾ, ತಮ್ಮ ಭಂಡತನಕ್ಕೆ ಏನು ಹೇಳೋಣ?", ಎಂದು ಆರ್.ಅಶೋಕ ಅವರು ಪ್ರಶ್ನಿಸಿದ್ದಾರೆ.
"ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ 4% ಮೀಸಲಾತಿ ಕೊಡಬೇಕು ಎಂದು ತಮ್ಮ ರಾಜಕೀಯ ಕಾರ್ಯದರ್ಶಿ ನಾಸೀರ್ ಅಹ್ಮದ್, ಸಚಿವ ಜಮೀರ್ ಅಹ್ಮದ್ ಖಾನ್ ಸೇರಿದಂತೆ ಮುಸ್ಲಿಂ ಶಾಸಕರು ಆಗಸ್ಟ್ 24, 2024 ರಂದು ತಮಗೆ ಪತ್ರ ಬರೆಯುತ್ತಾರೆ. ತಾವು ಅದೇ ದಿನವೇ ಈ ಪತ್ರವನ್ನ ಪರಿಶೀಲಿಸಿ ಮಂಡಿಸಿ ಎಂದು ಆರ್ಥಿಕ ಇಲಾಖೆಗೆ ನಿರ್ದೇಶನ ನೀಡಿದ್ದೀರಿ. ಈ ಸಂಬಂಧ ಕೆಟಿಪಿಪಿ ಕಾಯ್ದೆಗೆ ತಿದ್ದುಪಡಿ ತರಲೂ ಸಹ ತಾವು ಅನುಮೋದನೆ ನೀಡಿದ್ದೀರಿ.", ಎಂದು ಗಂಭೀರ ವಿಷಯವನ್ನು ಆರ್.ಅಶೋಕ್ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಹೊರಹಾಕಿದ್ದಾರೆ.
"ಇಷ್ಟೆಲ್ಲಾ ಪತ್ರ ವ್ಯವಹಾರ ನಡೆದಿದ್ದರೂ ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಪ್ರಸ್ತಾವನೆಯೇ ಸರ್ಕಾರದ ಮುಂದಿಲ್ಲ ಎಂದು ಹಸಿ ಸುಳ್ಳು ಹೇಳುತ್ತಿರಲ್ಲ, ತಮಗೆ ಕಿಂಚಿತ್ತಾದರೂ ಆತ್ಮಸಾಕ್ಷಿ, ನೈತಿಕತೆ ಅನ್ನುವುದೇ ಇಲ್ಲವೇ? ಸತ್ಯದ ಮೇಲೆ ಪ್ರಮಾಣ ವಚನ ಸ್ವೀಕರಿಸಿ, ಬಾಯಿ ಬಿಟ್ಟರೆ ಬರಿ ಸುಳ್ಳು ಹೇಳುವ ತಮ್ಮನ್ನ ಆ ತಾಯಿ ಚಾಮುಂಡೇಶ್ವರಿ ಮೆಚ್ಚುತ್ತಾಳಾ? ತಮ್ಮನ್ನ ನಂಬಿ ಮತ ಹಾಕಿ ಅಧಿಕಾರ ಕೊಟ್ಟ ಕನ್ನಡಿಗರು ಕ್ಷಮಿಸುತ್ತಾರಾ?", ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಕಟುವಾಗಿ ಟೀಕಿಸಿದ್ದಾರೆ.
ಎಡವಟ್ಟು ಮಾಡೋದು, ಆಮೇಲೆ ಸುಳ್ಳು ಹೇಳೋದು... ಇದೇ ಸಿಎಂ @siddaramaiah ನವರ ದಿನಚರಿ!
— R. Ashoka (@RAshokaBJP) November 12, 2024
ಸ್ವಾಮಿ ಮುಖ್ಯಮಂತ್ರಿಗಳೇ, ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಪ್ರಸ್ತಾವನೆಯೇ ಸರ್ಕಾರದ ಮುಂದಿಲ್ಲ ಎಂದು ಸತ್ಯದ ತಲೆಯ ಮೇಲೆ ಹೊಡೆದ ಹಾಗೆ ಸುಳ್ಳು ಹೇಳುತ್ತೀರಲ್ಲಾ, ತಮ್ಮ ಭಂಡತನಕ್ಕೆ ಏನು ಹೇಳೋಣ?
ಗುತ್ತಿಗೆ ಕಾಮಗಾರಿಗಳಲ್ಲಿ… pic.twitter.com/Agrw9yf1Cs