Mon,Dec15,2025
ಕನ್ನಡ / English

ಕೇಶವ ಫೌಂಡೇಷನ್ ಅಧಿಕೃತ ವೆಬ್ಸೈಟ್ ಲೋಕಾರ್ಪಣೆ ಮಾಡಿದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ | JANATA NEWS

30 Jan 2025

ಧರ್ಮಸ್ಥಳ : ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಶ್ರೀ ವೀರೇಂದ್ರ ಹೆಗ್ಗಡೆ ಯವರು ಇಂದು ಬೆಳಿಗ್ಗೆ ಎನ್.ಜಿ.ಓ ಸಂಸ್ಥೆಯಾಗಿರುವ ಕೇಶವ ಫೌಂಡೇಷನ್, ಬೆಂಗಳೂರು., ತಮ್ಮ ನೂತನವಾಗಿ ನಿರ್ಮಿಸಲಾದ www.helpin.in ಅಧಿಕೃತ ವೆಬ್ಸೈಟ್ ಲೋಕಾರ್ಪಣೆಗೊಳಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಸಂಸ್ಥೆಯ ಅಧ್ಯಕ್ಷರಾದ ಹರೀಶ ನಾಯ್ಕ, ಖಜಾಂಚಿಗಳಾದ ವಿನುತಾ ಹಾಗೂ ಸಂಸ್ಥೆಯ ಸದಸ್ಯರಿಗೆ ಶುಭಕೋರಿದರು.

ಈ ಸಂದರ್ಭದಲ್ಲಿ ತಾವು ಲೋಕಾರ್ಪಣೆ ಮಾಡಿದ ಸಂಸ್ಥೆಯ ವೆಬ್ಸೈಟ್ ನ್ನು ಸಂಪೂರ್ಣವಾಗಿ ಕುತೂಹಲದಿಂದ ವೀಕ್ಷಿಸಿದ ಧರ್ಮದರ್ಶಿಗಳು ಈ ವೆಬ್ಸೈಟ್ ನೊಂದಿಗೆ ಕೇಶವ ಫೌಂಡೇಷನ್ ಜನಹಿತಕ್ಕಾಗಿ ಆಧುನಿಕ ತಂತ್ರಜ್ಞಾನಗಳನ್ನು ಬಳಸಿ ಈಗಾಗಲೇ ನಿರ್ಮಿಸಿ 7 ಸಮುದಾಯಗಳ ವಧುವರನ್ವೇಷಣೆ ವೆಬ್ಸೈಟ್ ಬಗ್ಗೆ ಮಾಹಿತಿ ಪಡೆದ ಧರ್ಮದರ್ಶಿಗಳು ಸಂಸ್ಥೆಯ ಉದ್ದೇಶ ಹಾಗೂ ಉತ್ತಮ ಸಾಮಾಜಿಕ ಸೇವೆಗಳ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಉಚಿತ ಆರೋಗ್ಯ ಶಿಬಿರಗಳ ಬಗ್ಗೆ ಮಾಹಿತಿಯನ್ನು ಧರ್ಮದರ್ಶಿಗಳು ಪಡೆದುಕೊಂಡರು ಹಾಗೂ ಸಂಸ್ಥೆಗೆ ಇನ್ನೂ ಹೆಚ್ಚಿನ ಯಶಸ್ಸು ಸಿಗಲೆಂದು ಆ ಭಗವಂತ ಶ್ರೀ ಮಂಜುನಾಥ ಸ್ವಾಮಿಯಲ್ಲಿ ಪ್ರಾರ್ಥಿಸೋಣ ಎಂದಿದ್ದಾರೆ.

ಸಾಮಾಜಿಕ ಕಳಕಳಿಯಿಂದ ಅಸ್ತಿತ್ವಕ್ಕೆ ಬಂದ ಎನ್.ಜಿ.ಓ ಕೇಶವ ಫೌಂಡೇಷನ್ ಒಂದು ಲಾಭ ರಹಿತ ಸಂಸ್ಥೆಯಾಗಿದ್ದು 2013 ರಿಂದ ಹಲವು ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಾವಿರಾರು ಜನರಿಗೆ ಸೇವೆ ಸಲ್ಲಿಸುತ್ತಿದೆ. ಹಾಗೂ ಧಾನಿಗಳಿಗೆ ತೆರಿಗೆ ಉಳಿಸುವ ಮೂಲಕ ಸಹಾಯ ಮಾಡುವ ನಿಟ್ಟಿನಲ್ಲಿ ಆದಾಯ ತೆರಿಗೆ ಇಲಾಖೆಯಿಂದ 80ಜಿ ಸರ್ಟಿಫಿಕೇಟ್ ಪಡೆದುಕೊಂಡಿದೆ.

ಉತ್ತಮ ಸಾಮಾಜಿಕ ಕಾರ್ಯಗಳನ್ನು ಮಾಡುತ್ತಿರುವ ಸಮುದಾಯದ ಸಂಘಗಳಿಗೆ ಡಿಜಿಟಲ್ ಉಪಸ್ಥಿತಿಯ ಅಗತ್ಯವಿದೆ ಎಂದು ಅರಿತುಕೊಂಡು, 2013ರಿಂದ ಹೆಚ್ಚು ಸುಧಾರಿತ ಅತ್ಯಾಧುನಿಕ ತಂತ್ರಜ್ಞಾನದ ವೆಬ್‌ಸೈಟ್‌ಗಳನ್ನು ಸಂಘಗಳಿಗೆ ಸಂಪೂರ್ಣವಾಗಿ ಉಚಿತವಾಗಿ ಒದಗಿಸಲು ಪ್ರಾರಂಭಿಸಿದ್ದು, 3 ಸಂಘಗಳಿಗೆ ವಿನ್ಯಾಸ ಅಥವಾ ವಾರ್ಷಿಕ ನಿರ್ವಹಣೆಯ ವಿಷಯದಲ್ಲಿ, ಎಲ್ಲವನ್ನೂ ಸಂಪೂರ್ಣವಾಗಿ ಉಚಿತ ವೆಚ್ಚದಲ್ಲಿ ಪೂರೈಸುತ್ತಿದೆ. ಇದು ಸಮುದಾಯ ಸಂಘಗಳು ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಮತ್ತು ಆಧುನಿಕ ಜನರೊಂದಿಗೆ ಸಂಪರ್ಕ ಸಾಧಿಸಲು ಅನುವು ಮಾಡಿಕೊಟ್ಟಿತು. ಮತ್ತು ಈ ಸೇವೆಗಳನ್ನು ಇನ್ನೂ ಅನೇಕ ಸಂಘಗಳಿಗೆ ವಿಸ್ತರಿಸಲು ಕೇಶವ ಫೌಂಡೇಷನ್ ಉತ್ಸುಕರಾಗಿದ್ದೇವೆ.

English summary :Dharmadhikari Shri Virendra Heggade launched official website of Keshav Foundation

 ಆಸ್ಟ್ರೇಲಿಯಾ ಬೋಂಡಿ ಬೀಚ್‌ನಲ್ಲಿ ಭಯೋತ್ಪಾದಕ ದಾಳಿಗೆ ಕನಿಷ್ಟ 12 ಸಾವು
ಆಸ್ಟ್ರೇಲಿಯಾ ಬೋಂಡಿ ಬೀಚ್‌ನಲ್ಲಿ ಭಯೋತ್ಪಾದಕ ದಾಳಿಗೆ ಕನಿಷ್ಟ 12 ಸಾವು
2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ
2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ
₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಎಸ್ಐಆರ್, ಸಂಚಾರ ಸಾಥಿ - ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು

ನ್ಯೂಸ್ MORE NEWS...