Mon,Dec15,2025
ಕನ್ನಡ / English

ರಾಜ್ಯದ ಮಾವು ಬೆಳೆಗಾರ ರೈತರ ನೆರವಿಗೆ ಧಾವಿಸಿದ ಕೇಂದ್ರ ಸರ್ಕಾರ : 2,50,000 ಮೆಟ್ರಿಕ್ ಟನ್ ಮಾವಿನಹಣ್ಣಿನ ಖರೀದಿಗೆ ಅನುಮೋದನೆ | JANATA NEWS

24 Jun 2025

ನವದೆಹಲಿ : ರಾಜ್ಯದಲ್ಲಿ ಮಾವಿನ ಹಣ್ಣಿನ ಬೆಲೆ ಕುಸಿತದಿಂದ ಕಂಗಾಲಾಗಿದ್ದ ರೈತರ ನೆರವಿಗೆ ಕೇಂದ್ರ ಸರ್ಕಾರ ಮುಂದಾಗಿದ್ದು, ಬೆಂಬಲ ಬೆಲೆ ಘೋಷಿಸಿದೆ. ಈ ಮೂಲಕ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರ ಪ್ರಯತ್ನ ರೈತರಿಗೆ ಸಿಹಿ ನೀಡಿದೆ. ರಾಜ್ಯದ ಮಾವಿನಹಣ್ಣುಗಳಿಗೆ ಆಂಧ್ರಪ್ರದೇಶ ನಿಷೇಧ ಹೇರಿದ್ದರಿಂದ ರಾಜ್ಯದಲ್ಲಿ ಮಾವು ಬೆಲೆ ತೀವ್ರ ಕುಸಿತವಾಗಿತ್ತು.

ಮಾವಿನ ಹಣ್ಣನ್ನು ರಸ್ತೆಗೆ ಸುರಿದು ಪ್ರತಿಭಟನೆಗೆ ಮುಂದಾಗಿದ್ದ ರಾಜ್ಯದ ಮಾವು ಬೆಳೆಗಾರರ ಕಷ್ಟವನ್ನು ಆಲಿಸಿದ ಕುಮಾರಸ್ವಾಮಿ ನೆರವಿಗೆ ಧಾವಿಸುವಂತೆ ಕೇಂದ್ರ ಕೃಷಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ಗೆ ಪತ್ರ ಬರೆದಿದ್ದರು.

ಜೂನ್ 24ರಂದು, ಕೃಷಿ ಮತ್ತು ರೈತ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಭಾರೀ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಉತ್ತರ ನೀಡಿ ಪತ್ರ ಬರೆದಿದ್ದಾರೆ. ಕರ್ನಾಟಕ ಮತ್ತು ನೆರೆಯ ರಾಜ್ಯಗಳಲ್ಲಿನ ಮಾರುಕಟ್ಟೆ ಪರಿಸ್ಥಿತಿಗಳಿಂದಾಗಿ ಮಾವಿನ ರೈತರು ಎದುರಿಸುತ್ತಿರುವ ತೊಂದರೆಗಳ ಬಗ್ಗೆ ನೀವು ಬರೆದ ಪತ್ರ ಗಮನಕ್ಕೆ ಬಂದಿದೆ ಎಂದಿದ್ದು, ಕ್ವಿಂಟಲ್‌ಗೆ ರೂ. 1616 ಮಾರುಕಟ್ಟೆ ಮಧ್ಯಸ್ಥಿಕೆ ಬೆಲೆಯಲ್ಲಿ ಗರಿಷ್ಠ 2,50,000 ಮೆಟ್ರಿಕ್ ಟನ್ ಮಾವಿನಹಣ್ಣಿನ ಖರೀದಿಗೆ ಅನುಮೋದಿಸಲಾಗಿದೆ, ಎಂದು ತಿಳಿಸಿದ್ದಾರೆ.

ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯವು ಕರ್ನಾಟಕದಲ್ಲಿ 2025-26 ರ ಮಾರುಕಟ್ಟೆ ವರ್ಷಕ್ಕೆ ಮಾವಿನಹಣ್ಣಿಗೆ ಮಾರುಕಟ್ಟೆ ಮಧ್ಯಸ್ಥಿಕೆ ಬೆಲೆ ಯೋಜನೆ (ಎಂಐಎಸ್) ಅನ್ನು ಅನುಮೋದಿಸಿದೆ. ಈ ಯೋಜನೆಯಡಿಯಲ್ಲಿ, ಕ್ವಿಂಟಲ್‌ಗೆ ರೂ. 1616 ಮಾರುಕಟ್ಟೆ ಮಧ್ಯಸ್ಥಿಕೆ ಬೆಲೆಯಲ್ಲಿ ಗರಿಷ್ಠ 2,50,000 ಮೆಟ್ರಿಕ್ ಟನ್ ಮಾವಿನಹಣ್ಣಿನ ಖರೀದಿಗೆ ಅನುಮೋದಿಸಲಾಗಿದೆ ಎಂದು ತಿಳಿಸಿದ್ದಾರೆ. ಈ ಮಧ್ಯಸ್ಥಿಕೆ ಪರಿಹಾರವನ್ನು ನೀಡುತ್ತದೆ ಮತ್ತು ಕರ್ನಾಟಕದ ಮಾವಿನ ರೈತರ ಕಲ್ಯಾಣಕ್ಕಾಗಿ ಕುಮಾರಸ್ವಾಮಿ ಅವರು ಎತ್ತಿದ ನಿಜವಾದ ಕಳವಳಗಳನ್ನು ಪರಿಹರಿಸುತ್ತದೆ ಎಂದು ಶಿವರಾಜ್ ಸಿಂಗ್ ಚೌಹಾಣ್ ಅವರು ಆಶಿಸಿದ್ದಾರೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಇದಕ್ಕೆ ಧನ್ಯವಾದ ತಿಳಿಸಿರುವ ಕುಮಾರಸ್ವಾಮಿ, 'ಕರ್ನಾಟಕದ ಮಾವು ಬೆಳೆಗಾರರ ನೆರವಿಗೆ ಧಾವಿಸಿದ ಪ್ರಧಾನಿಗಳಾದ ನರೇಂದ್ರ ಮೋದಿ ಅವರ ಸರಕಾರದ ರೈತಪರ ಬದ್ಧತೆ, ಅಚಲತೆಗೆ ನನ್ನ ಹೃದಯಪೂರ್ವಕ ಧನ್ಯವಾದಗಳು. ಬೆಲೆ ಕುಸಿತದಿಂದ ಕಂಗಾಲಾಗಿದ್ದ ರಾಜ್ಯದ ಮಾವು ಬೆಳೆಗಾರರ ಹಿತದೃಷ್ಟಿಯಿಂದ ಮನವಿ ಮಾಡಿದ ತಕ್ಷಣವೇ ಮಾರುಕಟ್ಟೆ ಮಧ್ಯಸ್ಥಿಕೆ ಬೆಲೆ ಯೋಜನೆ (Market Intervention Scheme-MIS) ಅಡಿಯಲ್ಲಿ ಬೆಂಬಲ ಬೆಲೆ ಘೋಷಿಸಿದ್ದಕ್ಕಾಗಿ ಕೇಂದ್ರದ ಕೃಷಿ ಸಚಿವರಾದ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರಿಗೆ ಕರ್ನಾಟಕದ ಮಾವು ಬೆಳೆಗಾರರ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ನರೇಂದ್ರ ಮೋದಿ ಅವರ ಆಡಳಿತದಲ್ಲಿ ರೈತರ ಉತ್ಪನ್ನಗಳಿಗೆ ಸ್ಥಿರ ಬೆಲೆಯ ಖಾತರಿ ಸದಾ ಇರುತ್ತದೆ ಎಂಬುದನ್ನು ಈ ಉಪಕ್ರಮವು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ಟ್ವೀಟ್‌ ಮಾಡಿದ್ದಾರೆ.

English summary :Central govt rushed to the aid of the state mango growers: Approval for the purchase of 250,000 metric tons of mangoes

 ಆಸ್ಟ್ರೇಲಿಯಾ ಬೋಂಡಿ ಬೀಚ್‌ನಲ್ಲಿ ಭಯೋತ್ಪಾದಕ ದಾಳಿಗೆ ಕನಿಷ್ಟ 12 ಸಾವು
ಆಸ್ಟ್ರೇಲಿಯಾ ಬೋಂಡಿ ಬೀಚ್‌ನಲ್ಲಿ ಭಯೋತ್ಪಾದಕ ದಾಳಿಗೆ ಕನಿಷ್ಟ 12 ಸಾವು
2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ
2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ
₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಎಸ್ಐಆರ್, ಸಂಚಾರ ಸಾಥಿ - ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು

ನ್ಯೂಸ್ MORE NEWS...