Fri,Jul10,2026
ಕನ್ನಡ / English

ನಂದಿಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯ ಮಹತ್ವದ ನಿರ್ಧಾರಗಳು | JANATA NEWS

03 Jul 2025

ಬೆಂಗಳೂರು : ನಂದಿಬೆಟ್ಟದಲ್ಲಿ(Nandi Hills) ನಡೆದ ಸಚಿವ ಸಂಪುಟ ಸಭೆಯಲ್ಲಿ ಕೆಲವೊಂದು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಅಂತ ಮರು ನಾಮಕರಣ ಮಾಡಲಾಗಿದ್ದು, ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ (Bengaluru University) ದಿವಂಗತ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಹೆಸರಿಡಲಾಗಿದೆ.

ನಂದಿ ಬೆಟ್ಟದಲ್ಲಿ ನಡೆದ ಈ ಸಭೆಯು ಈ ವರ್ಷದ 14 ನೇ ಸಭೆಯಾಗಿದೆ.

ಸಚಿವ ಸಂಪುಟ ಸಭೆಯ ಕೆಲವೊಂದು ಮಹತ್ವದ ನಿರ್ಧಾರಗಳನ್ನು ಹಂಚಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, "ಶೇ.90 ರಷ್ಟು ಬೆಂಗಳೂರು ವಿಭಾಗದ ವಿಷಯಗಳನ್ನೇ ಈ ವಿಶೇಷ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಣಯ ಕೈಗೊಂಡಿದ್ದೇವೆ. ಒಟ್ಟು 48 ವಿಷಯಗಳು ಚರ್ಚೆಯಾಗಿದೆ. ₹3,400 ಕೋಟಿ ಮೊತ್ತವನ್ನು ಮಂಜೂರು ಮಾಡಿದ್ದೇವೆ. ₹2,050 ಕೋಟಿ ಬೆಂಗಳೂರು ಜಿಲ್ಲಾ ಭಾಗಕ್ಕೆ ಕೊಟ್ಟಿದ್ದೇವೆ."

"ಈ ಸಭೆಯಲ್ಲಿ ನಾವು ಹಲವು ಐತಿಹಾಸಿಕ ತೀರ್ಮಾನಗಳನ್ನು ಕೈಗೊಂಡಿದ್ದೇವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಬೆಂಗಳೂರು ಉತ್ತರ ಜಿಲ್ಲೆ ಎಂದು ನಾಮಕರಣ ಮಾಡಿದ್ದೇವೆ."

"ನಾವು ಆಡಳಿತವನ್ನು ಬೆಂಗಳೂರು ಕೇಂದ್ರಿತ ಎಂಬುದನ್ನು ತಪ್ಪಿಸಿ ವಿಕೇಂದ್ರೀಕರಣ ಮಾಡುವುದಕ್ಕಾಗಿಯೆ ಆಯಾ ಭಾಗದ ಸಮಸ್ಯೆಗಳ ಮೇಲೆ ಗಮನ ಹರಿಸಿ, ಅವುಗಳಿಗೆ ಚಿಕಿತ್ಸಕ ಪರಿಹಾರ ನೀಡುವ ಉದ್ದೇಶದಿಂದ ಸಚಿವ ಸಂಪುಟ ಸಭೆಗಳನ್ನು ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆಸುತ್ತಿದ್ದೇವೆ. ಮೊದಲಿಗೆ ಕಲ್ಬುರ್ಗಿಯಲ್ಲಿ, ಆ ನಂತರ ಮಲೈ ಮಹದೇಶ್ವರ ಬೆಟ್ಟದಲ್ಲಿ ನಡೆಸಿದ್ದೆವು. ಮೂರನೆಯದಾಗಿ ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆಯನ್ನು ನಡೆಸುತ್ತಿದ್ದೇವೆ.", ಎಂದು ಸಿಎಂ ಹೇಳಿದ್ದಾರೆ.

ಸಭೆಯ ಪ್ರಮುಖ ಅಂಶಗಳು:

ಬಾಗೇಪಲ್ಲಿ ಪಟ್ಟಣದ ಹೆಸರನ್ನು ಭಾಗ್ಯನಗರ ಎಂದು ಹೆಸರಿಡಲು ತೀರ್ಮಾನ.

ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವ ವಿದ್ಯಾಲಯ ಎಂದು ಮರು ನಾಮಕರಣ

ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಇದುವರೆಗೆ ಆಗಿರುವ ಪ್ರಗತಿ, ಆಗಬೇಕಾಗಿರುವ ಕ್ರಮಗಳು ಸೇರಿದಂತೆ ಹಲವು ವಿಷಯಗಳ ಕುರಿತು ಪರಿಶೀಲಿಸಲು ಹೆಚ್.ಕೆ. ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿಯನ್ನು ರಚಿಸಲು ತೀರ್ಮಾನ.

ಒಟ್ಟಾರೆ ಈ ಭಾಗದ ಅಭಿವೃದ್ಧಿಗೆ ಹಲವು ಯೋಜನೆಗಳನ್ನು / ಕಾರ್ಯಕ್ರಮಗಳನ್ನು ತೆಗೆದುಕೊಳ್ಳಲು ಈ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಯಿತು.

ಎತ್ತಿನಹೊಳೆ ಯೋಜನೆಗೆ ಒಟ್ಟು ₹23,251 ಕೋಟಿ ಪರಿಷ್ಕೃತ ಅಂದಾಜು ಮಾಡಲಾಗಿದ್ದು, ಇಲ್ಲಿಯವರೆಗೂ ₹17,147 ಕೋಟಿ ಖರ್ಚಾಗಿದೆ. ಮೂಲತಃ ಕುಡಿಯುವ ನೀರಿನ ಯೋಜನೆ ಇದಾಗಿದೆ. ಕೆರೆಗಳಿಗೆ ನೀರು ತುಂಬಿಸುವುದು ನಂತರದ ಆದ್ಯತೆ. 24.1 TMC ನೀರಿನಲ್ಲಿ ಕುಡಿಯುವ ನೀರಿಗೆ 14 TMC ಬೇಕಾಗಿದೆ. ಆದ್ದರಿಂದ ಮೊದಲು ಕುಡಿಯುವ ನೀರನ್ನು ಕೊಡುವ ಯೋಜನೆ ಮುಗಿಸಲು ಸಂಪುಟ ಸಭೆ ತೀರ್ಮಾನ ಮಾಡಿದೆ. ಎರಡು ವರ್ಷಗಳಲ್ಲಿ ಉದ್ದೇಶಿತ ಜಿಲ್ಲೆ, ತಾಲ್ಲೂಕುಗಳಿಗೆ ನೀರು.

₹9,807 ಕೋಟಿ ಮೊತ್ತದಲ್ಲಿ ಗ್ರಾವಿಟಿ ಮುಖ್ಯ ಕೆನಲ್ ನ‌ ಕೆಲಸ 85% ಮಗಿದಿದೆ. ಹೆಚ್ಚುವರಿಯಾಗಿ ಇದಕ್ಕೆ ₹8,000 ಕೋಟಿ ಬೇಕಾಗಿದೆ. ಬಾಕಿ ಉಳಿದಿರುವುದು ಸುಮಾರು ₹6,000 ಕೋಟಿ. ಒಟ್ಟು 9 ಜಿಲ್ಲೆಗಳ 75 ಲಕ್ಷ ಜನರಿಗೆ ಕುಡಿಯುವ ನೀರು.

ಬೆಂಗಳೂರು ಜಿಲ್ಲೆಗಳ 31 ವಿಷಯಗಳು ಚರ್ಚೆಯಾಗಿದ್ದು, ₹2,250 ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ನೀರಾವರಿ ಯೋಜನೆ, ಕೆರೆ ತುಂಬಿಸುವ ಯೋಜನೆಗಳನ್ನೇ ಪ್ರಮುಖವಾಗಿ ಚರ್ಚಿಸಲಾಗಿದೆ.

ಪ್ರತೀ ಜಿಲ್ಲೆಯಲ್ಲಿ ಕಾರ್ಮಿಕರ ಮಕ್ಕಳಿಗೆ ವಸತಿ ಶಾಲೆ ನಿರ್ಮಿಸಲು ತೀರ್ಮಾನಿಸಲಾಗಿದ್ದು ಇದಕ್ಕೆ 1,125.25 ಕೋಟಿ ಮಂಜೂರು ಮಾಡಲಾಗಿದೆ.

ಹಿಂದುಳಿದ ವರ್ಗದ ಅಭ್ಯರ್ಥಿಗಳು IAS, IRS, IPS ಸೇರಿ ಸ್ಪರ್ಧಾತ್ಮಕ ಪರೀಕ್ಷಾ‌ ತರಬೇತಿಗೆ ₹10 ಕೋಟಿ ವೆಚ್ಚದ ಎರಡು ವಸತಿ ಶಾಲೆಗಳನ್ನು ಬೆಂಗಳೂರಿನಲ್ಲಿ ನಿರ್ಮಿಸಲಾಗುವುದು.

ಪ್ರಾಥಮಿಕ‌ ಆರೋಗ್ಯ ಕೇಂದ್ರಗಳಿಲ್ಲದ ಹೊಸ ತಾಲ್ಲೂಕುಗಳಲ್ಲಿ ಸಮುದಾಯ ಆರೋಗ್ಯ ಕೇಂದ್ರಗಳನ್ನು ಆರಂಭಿಸಲು ತೀರ್ಮಾನ.

ಈ ಸಚಿವ ಸಂಪುಟ ಸಭೆಯಲ್ಲಿ ನಾವು ₹3,400 ಕೋಟಿಗಳಿಗೆ ಅನುಮೋದನೆ ನೀಡಿದ್ದೇವೆ. ಈ ಸಭೆಯಲ್ಲಿ ಆರೋಗ್ಯ, ಶಿಕ್ಷಣ, ಕೃಷಿ, ತೋಟಗಾರಿಕೆ, ನೀರಾವರಿ, ಪ್ರವಾಸೋದ್ಯಮ, ರಸ್ತೆ- ಸೇತುವೆ ಮುಂತಾದ ವಿಷಯಗಳಿಗೆ ಆದ್ಯತೆ ನೀಡಿ ಅನುಮೋದನೆ ನೀಡಲಾಗಿದೆ.

ಈ ಸಭೆಯಲ್ಲಿ ಅತ್ಯಂತ ಮುಖ್ಯವಾಗಿ ಕುಡಿಯುವ ನೀರಿನ ಯೋಜನೆಗಳು ಅದರಲ್ಲೂ ಮುಖ್ಯವಾಗಿ ಎತ್ತಿನಹೊಳೆ ಯೋಜನೆಯ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು. ಕಳೆದ ವರ್ಷವೇ ಎತ್ತಿನ ಹೊಳೆಯ ನೀರನ್ನು ಎತ್ತಿನ ಯಶಸ್ವಿಯಾಗಿ ಹರಿಸಲಾಯಿತು.

ಬೆಂಗಳೂರು ವಿಭಾಗದ ಜಿಲ್ಲೆಗಳಿಗೆ ಸಂಬಂಧಿಸಿದಂತೆ 31 ವಿಷಯಗಳಿಗೆ ₹2,525 ಕೋಟಿಗಳನ್ನು ಒದಗಿಸುವ ಕಾಮಗಾರಿ/ ಯೋಜನೆಗಳ ಕುರಿತು ಚರ್ಚಿಸಿ ಅನುಮೋದನೆ ನೀಡಲಾಯಿತು.

ಶಿಕ್ಷಣಕ್ಕೆ ₹1627.25 ಕೋಟಿ ರೂ ನೀಡಿದ್ದು. ಇದರಲ್ಲಿ ಕಾಲೇಜು, ವಿಶ್ವವಿದ್ಯಾಲಯಗಳ ಮೂಲಭೂತ ಸೌಕರ್ಯ.

ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಐಎಎಸ್, ಐಪಿಎಸ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ತರಬೇತಿ ನೀಡಲು ಬೆಂಗಳೂರಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಎರಡು ವಸತಿ ನಿಲಯ ನಿರ್ಮಿಸಲು ತೀರ್ಮಾನ.

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ₹1,125.25 ಕೋಟಿ ವೆಚ್ಚದಲ್ಲಿ ಸ್ಥಾಪಿಸಲು ಅನುಮೋದನೆ.

ನೀರಾವರಿ ಯೋಜನೆಗಳಿಗೆ ₹1,154 ಕೋಟಿ ನೀಡಿದ್ದೇವೆ. ಇದರಲ್ಲಿ 237 ಕೋಟಿ ರೂ.ಗಳನ್ನು ಬೆಂಗಳೂರಿನ ತ್ಯಾಜ್ಯ ನೀರನ್ನು ಶುದ್ಧೀಕರಣ ಮಾಡಿ ಶಿಡ್ಲಘಟ್ಟ ಮತ್ತು ಚಿಂತಾಮಣಿ ತಾಲ್ಲೂಕಿನ 164 ಕೆರೆಗಳಿಗೆ ತುಂಬಿಸುವ ಯೋಜನೆಗೆ ಅನುಮೋದನೆ.

ಈ ಭಾಗದಲ್ಲಿ ಅತಿ ಹೆಚ್ಚಾಗಿ ಗುಣಮಟ್ಟದ ಹೂ ಬೆಳೆಯುತ್ತಾರೆ. ಆದ್ದರಿಂದ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರವನ್ನು 10 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲು ಅನುಮೋದನೆ ಮಾಡಲಾಗಿದೆ.

ಇದರ ಜೊತೆಗೆ ಚಿಕ್ಕಬಳ್ಳಾಪುರದಲ್ಲಿ ಎಪಿಎಂಸಿ ವತಿಯಿಂದ 141.5 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ಹೂವಿನ ಮಾರುಕಟ್ಟೆ ಸ್ಥಾಪಿಸಲು ಅನುಮೋದನೆ ನೀಡಲಾಗಿದೆ.

ಆರೋಗ್ಯ ಇಲಾಖೆ ವತಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 46 ಕೋಟಿ ರೂ. ವೆಚ್ಚದಲ್ಲಿ ಸಮುದಾಯ ಆರೋಗ್ಯ ಕೇಂದ್ರಗಳಾಗಿ ಅಭಿವೃದ್ಧಿ ಪಡಿಸಲು ಹಾಗೂ 21.40 ಕೋಟಿ ವೆಚ್ಚದಲ್ಲಿ ಚಿಕ್ಕಬಳ್ಳಾಪುರ ಮತ್ತು ಹುಬ್ಬಳ್ಳಿಯಲ್ಲಿನ ಮೆಡಿಕಲ್ ಕಾಲೇಜುಗಳಿಗೆ ಎಂಆರ್ ಐ ಯಂತ್ರಗಳನ್ನು ಖರೀದಿಸಲು ಅನುಮತಿ ನೀಡಲಾಗಿದೆ. ಹಾಗೂ 56 ಕೋಟಿ ರೂ. ವೆಚ್ಚದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಕೈವಾರ ಪಿಎಚ್ ಸಿ, ಹಾಗೂ ಮಂಚೇನಹಳ್ಳಿಯ ಆಸ್ಪತ್ರೆಗಳನ್ನು ಉನ್ನತೀಕರಿಸಲು ಹಾಗೂ ಹೆಚ್ಚುವರಿ ಕಾಮಗಾರಿ ತೆಗೆದುಕೊಳ್ಳಲು ತೀರ್ಮಾನ.
ಒಟ್ಟಾರೆ 123 ಕೋಟಿ ರೂ. ವೆಚ್ಚದಲ್ಲಿ ಆರೋಗ್ಯ ಸಂಬಂಧಿತ ಚಟುವಟಿಕೆಗಳಿಗೆ ಅನುಮತಿ ನೀಡಲಾಗಿದೆ.

English summary :Important decisions of the cabinet meeting held at Nandibetta

ಉಗ್ರ ನಿಜ್ಜರ್ ಹತ್ಯೆಗೂ ಭಾರತ ಸರ್ಕಾರಕ್ಕೂಸಂಬಂಧವಿಲ್ಲ; ಬ್ರಾರ್ ಮಾಹಿತಿಗೆ 50 ಸಾವಿರ ಡಾಲರ್ ಬಹುಮಾನ - ಕೆನಡ, ಎಫ್‌ಬಿಐ
ಉಗ್ರ ನಿಜ್ಜರ್ ಹತ್ಯೆಗೂ ಭಾರತ ಸರ್ಕಾರಕ್ಕೂಸಂಬಂಧವಿಲ್ಲ; ಬ್ರಾರ್ ಮಾಹಿತಿಗೆ 50 ಸಾವಿರ ಡಾಲರ್ ಬಹುಮಾನ - ಕೆನಡ, ಎಫ್‌ಬಿಐ
ಇರಾನಿನ ಮಿಲಿಟರಿ ಗುರಿಗಳ ಮೇಲೆ ಅಮೆರಿಕ ಪ್ರಮುಖ ದಾಳಿ : ಹೆಚ್ಚಿದ ಉದ್ವಿಗ್ನತೆ
ಇರಾನಿನ ಮಿಲಿಟರಿ ಗುರಿಗಳ ಮೇಲೆ ಅಮೆರಿಕ ಪ್ರಮುಖ ದಾಳಿ : ಹೆಚ್ಚಿದ ಉದ್ವಿಗ್ನತೆ
ಬರುಯಿಪುರ್ ಅತ್ಯಾಚಾರ-ಕೊಲೆ ಪ್ರಕರಣದ ಪ್ರಮುಖ ಆರೋಪಿ ಪೊಲೀಸ್ ಎನ್ಕೌಂಟರ್ನಲ್ಲಿ ಬಲಿ
ಬರುಯಿಪುರ್ ಅತ್ಯಾಚಾರ-ಕೊಲೆ ಪ್ರಕರಣದ ಪ್ರಮುಖ ಆರೋಪಿ ಪೊಲೀಸ್ ಎನ್ಕೌಂಟರ್ನಲ್ಲಿ ಬಲಿ
2 ಭಯೋತ್ಪಾದನಾ ಘಟಕಗಳನ್ನು ಭೇದಿಸಿದ ದೆಹಲಿ ಪೊಲೀಸರು : 6 ಶಂಕಿತರ ಬಂಧನ
2 ಭಯೋತ್ಪಾದನಾ ಘಟಕಗಳನ್ನು ಭೇದಿಸಿದ ದೆಹಲಿ ಪೊಲೀಸರು : 6 ಶಂಕಿತರ ಬಂಧನ
ಎಸ್‌ಐಆರ್‌ ಬೃಹತ್ ಅಕ್ರಮ - ಎನ್‌ಡಿಎ ನಾಯಕರ ನಿಯೋಗದಿಂದ ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿಗೆ ದೂರು
ಎಸ್‌ಐಆರ್‌ ಬೃಹತ್ ಅಕ್ರಮ - ಎನ್‌ಡಿಎ ನಾಯಕರ ನಿಯೋಗದಿಂದ ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿಗೆ ದೂರು
8 ಶಂಕಿತ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರನ್ನು ಬಂಧಿಸಿದ ಗುಜರಾತ್ ಎಟಿಎಸ್
8 ಶಂಕಿತ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರನ್ನು ಬಂಧಿಸಿದ ಗುಜರಾತ್ ಎಟಿಎಸ್
 ವಿಶ್ವಸಂಸ್ಥೆಯ ಪ್ರಧಾನ ಕಚೇರಿಯ ಹೊರಗೆ ಚೀನಾ ವಿರುದ್ಧ ಪ್ರತಿಭಟನೆ ನಡೆಸಿ ಟಿಬೆಟಿಯನ್ ಕಾರ್ಯಕರ್ತ ಆತ್ಮಹತ್ಯೆ
ವಿಶ್ವಸಂಸ್ಥೆಯ ಪ್ರಧಾನ ಕಚೇರಿಯ ಹೊರಗೆ ಚೀನಾ ವಿರುದ್ಧ ಪ್ರತಿಭಟನೆ ನಡೆಸಿ ಟಿಬೆಟಿಯನ್ ಕಾರ್ಯಕರ್ತ ಆತ್ಮಹತ್ಯೆ
52 ಕ್ರಿಮಿನಲ್ ಪ್ರಕರಣ ವಜಾ ಮಾಡುವ ರಾಜ್ಯ ಸಚಿವ ಸಂಪುಟದ ನಿರ್ಧಾರಕ್ಕೆ ಕರ್ನಾಟಕ ಹೈಕೋರ್ಟ್ ತಡೆ
52 ಕ್ರಿಮಿನಲ್ ಪ್ರಕರಣ ವಜಾ ಮಾಡುವ ರಾಜ್ಯ ಸಚಿವ ಸಂಪುಟದ ನಿರ್ಧಾರಕ್ಕೆ ಕರ್ನಾಟಕ ಹೈಕೋರ್ಟ್ ತಡೆ
ರಾಮನಗರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಗಂಭೀರ ಲೋಪ
ರಾಮನಗರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಗಂಭೀರ ಲೋಪ
ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಕ್ಷಮೆಯಾಚಿಸಿದ್ದನ್ನು ಅಪಹಾಸ್ಯ ಮಾಡುವ ಪೋಸ್ಟರ್‌ ಹಾಕಿದ  ಬಿಜೆಪಿ
ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಕ್ಷಮೆಯಾಚಿಸಿದ್ದನ್ನು ಅಪಹಾಸ್ಯ ಮಾಡುವ ಪೋಸ್ಟರ್‌ ಹಾಕಿದ ಬಿಜೆಪಿ
ವಾಟ್ಸಾಪ್ ಯೂಸರ್-ನೇಮ್ ಬಿಡುಗಡೆ ತಾತ್ಕಾಲಿಕ ತಡೆ ನೀಡಿ ಕೇಂದ್ರ ಸರ್ಕಾರ ನಿರ್ದೇಶನ
ವಾಟ್ಸಾಪ್ ಯೂಸರ್-ನೇಮ್ ಬಿಡುಗಡೆ ತಾತ್ಕಾಲಿಕ ತಡೆ ನೀಡಿ ಕೇಂದ್ರ ಸರ್ಕಾರ ನಿರ್ದೇಶನ
 ಟೆಹ್ರಾನ್‌ನ ಹಲವಾರು ಮಿಲಿಟರಿ ಗುರಿಗಳ ಮೇಲೆ ದಾಳಿ ಮಾಡಿದ ಅಮೆರಿಕ-ಇಸ್ರೇಲ್; ಭಾರೀ ಸಾವುನೋವುಗಳನ್ನು ವರದಿ
ಟೆಹ್ರಾನ್‌ನ ಹಲವಾರು ಮಿಲಿಟರಿ ಗುರಿಗಳ ಮೇಲೆ ದಾಳಿ ಮಾಡಿದ ಅಮೆರಿಕ-ಇಸ್ರೇಲ್; ಭಾರೀ ಸಾವುನೋವುಗಳನ್ನು ವರದಿ

ನ್ಯೂಸ್ MORE NEWS...