ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಭೂಮಿಗೆ ಯಶಸ್ವಿಯಾಗಿ ಬಂದ ಶುಭಾಂಶು ಶುಕ್ಲಾ ತಂಡ | JANATA NEWS
ಕ್ಯಾಲಿಫೋರ್ನಿಯಾ : ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ, ಐಎಎಫ್ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳ ತಂಡ ಭೂಮಿಗೆ ಯಶಸ್ವಿಯಾಗಿ ವಾಪಸ್ ಆಗಿದ್ದಾರೆ. ಕ್ಯಾಪ್ಸುಲ್ ನಿಂದ ಹೊರಬಂದ ತಕ್ಷಣ ನಗುಮುಖದಲ್ಲಿ ಕಂಡುಬಂದ ಶುಭಾಂಶು ಶುಕ್ಲಾ ಕ್ಯಾಮರಾಗೆ
ಕೈಬೀಸಿದರು.
ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣವನ್ನು ಯಶಸ್ವಿಯಾಗಿ ತಲುಪಿ ಇತಿಹಾಸ ಸೃಷ್ಟಿಸಿರುವ ಭಾರತೀಯ ಗಗನಯಾತ್ರಿ, ಐಎಎಫ್ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳು ಭೂಮಿಗೆ ವಾಪಸ್ ಆಗಿದ್ದು, ಅಭಿನಂದನೆಗಳ ಮಹಾಪೂರವೇ ಹರಿದು ಬಂತು.
ಇಂದು ಭಾರತೀಯ ಕಾಲಮಾನ ಮಧ್ಯಾಹ್ನ 3ಕ್ಕೆ ಕ್ಯಾಲಿಫೋರ್ನಿಯಾ ಕರಾವಳಿಯಲ್ಲಿ ಯಶಸ್ವಿಯಾಗಿ ಸ್ಪ್ಯಾಷ್ ಡೌನ್ ಮಾಡಲಾಯಿತು. ಬಳಿಕ ಕ್ಯಾಪ್ಸುಲ್ ಸುರಕ್ಷಿತವಾಗಿದೆಯೇ ಎಂದು ಪರಿಶೀಲಿಸಿದ ಬಳಿಕ ಕೆಳಗಡೆ ಇರುವ ಬಾಗಿಲು(ಹ್ಯಾಚ್) ತೆರೆಯಲಾಯಿತು. ಈ ಬಾಗಿಲಿನ ಮೂಲಕ ಯಾನಿಗಳು ನಿಧಾನವಾಗಿ ಹೊರ ಬಂದ ಬಳಿಕ ಸ್ಪೇಸ್ ಎಕ್ಸ್ ಸಿಬ್ಬಂದಿ ಕರೆದುಕೊಂಡು ಹೋದರು. ಈ ವೇಳೆ ಎರಡನೇಯದಾಗಿ ಹೊರಬಂದ ಶುಭಾಂಶು ಶುಕ್ಲಾ ನಗುಮುಖದಿಂದ ಕೈಬೀಸಿ ಸಂತೋಷ ವ್ಯಕ್ತಪಡಿಸಿದ್ದಾರೆ.