ಮೋದಿ ಸರ್ಕಾರವು ರಾಜ್ಯಕ್ಕೆ ಪೂರೈಕೆ ಮಾಡಿದ 8.73 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಕಾಳಸಂತೆಯಲ್ಲಿ ಮಾರಾಟ - ರಾಜ್ಯ ಬಿಜೆಪಿ ಆರೋಪ | JANATA NEWS
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ರಾಜ್ಯಕ್ಕೆ ಪೂರೈಕೆ ಮಾಡಿದ 8.73 ಲಕ್ಷ ಮೆಟ್ರಿಕ್ ಟನ್ ಯೂರಿಯಾವನ್ನು ಕಳ್ಳರು ಕಾಳಸಂತೆಯಲ್ಲಿ ದುಪ್ಪಟ್ಟು ಬೆಲೆಗೆ ಮಾರಾಟ ಮಾಡಲು ಕರ್ನಾಟಕ ಕಾಂಗ್ರೆಸ್ ಸರ್ಕಾರ ಅನುವುಮಾಡಿಕೊಟ್ಟಿದೆ, ಎಂದು ರಾಜ್ಯ ಬಿಜೆಪಿ ಗಂಭೀರ ಆರೋಪ ಮಾಡಿದೆ.
"ಪಿಎಂ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಾಜ್ಯದ ರೈತರ ಹಿತದೃಷ್ಟಿಯಿಂದ 8.73 ಲಕ್ಷ ಮೆಟ್ರಿಕ್ ಟನ್ ಯೂರಿಯಾ ರಾಜ್ಯಕ್ಕೆ ಪೂರೈಕೆ ಮಾಡಿದೆ. ಆದರೆ, ಕರ್ನಾಟಕ ಕಾಂಗ್ರೆಸ್ ಸರ್ಕಾರ ಸಮರ್ಪಕವಾಗಿ ವಿತರಿಸದೆ ಕಳ್ಳರು ಕಾಳಸಂತೆಯಲ್ಲಿ ದುಪ್ಪಟ್ಟು ಬೆಲೆಗೆ ಮಾರಾಟ ಮಾಡಲು ಅನುವು ಮಾಡಿಕೊಟ್ಟು, ರೈತರನ್ನು ಬೀದಿಗೆ ತಳ್ಳಿದೆ.", ಎಂದು ರಾಜ್ಯ ಬಿಜೆಪಿ ಗಂಭೀರ ಆರೋಪ ಮಾಡಿದೆ.
"ಕೇಂದ್ರ ಸರ್ಕಾರ ಪೂರೈಸಿರುವ ರಸಗೊಬ್ಬರದಲ್ಲಿ ಇದುವರೆಗೆ 6.55 ಲಕ್ಷ ಮೆಟ್ರಿಕ್ ಯೂರಿಯಾ ಮಾರಾಟ ಮಾಡಿರುವುದಾಗಿ ಕೃಷಿ ಸಚಿವ ಚೆಲುವರಾಯ ಸ್ವಾಮಿ ಅವರು ಹೇಳಿದ್ದಾರೆ. ಹಾಗಾದ್ರೆ, ಇನ್ನುಳಿದ 1.94 ಮೆಟ್ರಿಕ್ ಟನ್ ಗೊಬ್ಬರ ಎಲ್ಲಿ ಯಾರ ಕೈಸೇರಿದೆ ಎಂಬುವುದನ್ನು ಉತ್ತರಿಸುವಿರಾ ಮಂತ್ರಿಗಳೇ.?"
"ರಾಜ್ಯಾದ್ಯಂತ ಲಕ್ಷಾಂತರ ಅನ್ನದಾತರು ಯೂರಿಯಾ ಗೊಬ್ಬರಕ್ಕಾಗಿ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದರೂ ಒಂದು ಚೀಲ ಗೊಬ್ಬರ ಪೂರೈಸಲು ಸಿಎಂ ಸಿದ್ದರಾಮಯ್ಯ ನವರ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ.! ಗೋದಾಮಿನಲ್ಲಿ ದಾಸ್ತಾನು ಇದ್ದರೇ ವಿತರಣೆಗೆ ವಿಳಂಬ ಯಾಕೆ.? ಕೂಡಲೇ ವಿತರಣೆಗೆ ಕ್ರಮ ಕೈಗೊಳ್ಳಿ.!", ಎಂದು ರಾಜ್ಯ ಬಿಜೆಪಿ ಒತ್ತಾಯಿಸಿದೆ.
ಪಿಎಂ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಾಜ್ಯದ ರೈತರ ಹಿತದೃಷ್ಟಿಯಿಂದ 8.73 ಲಕ್ಷ ಮೆಟ್ರಿಕ್ ಟನ್ ಯೂರಿಯಾ ರಾಜ್ಯಕ್ಕೆ ಪೂರೈಕೆ ಮಾಡಿದೆ. ಆದರೆ, @INCKarnataka ಸರ್ಕಾರ ಸಮರ್ಪಕವಾಗಿ ವಿತರಿಸದೆ ಕಳ್ಳರು ಕಾಳಸಂತೆಯಲ್ಲಿ ದುಪ್ಪಟ್ಟು ಬೆಲೆಗೆ ಮಾರಾಟ ಮಾಡಲು ಅನುವು ಮಾಡಿಕೊಟ್ಟು, ರೈತರನ್ನು ಬೀದಿಗೆ ತಳ್ಳಿದೆ.
— BJP Karnataka (@BJP4Karnataka) July 27, 2025
ಕೇಂದ್ರ ಸರ್ಕಾರ… pic.twitter.com/AvKUPxXNT0