Mon,Dec15,2025
ಕನ್ನಡ / English

ಭಾನು ಮುಷ್ತಾಕ್ ಮೊದಲು ತಾಯಿ ಭುವನೇಶ್ವರಿ, ತಾಯಿ ಚಾಮುಂಡೇಶ್ವರಿಯ ಬಗ್ಗೆ ಗೌರವವನ್ನು ಸ್ಪಷ್ಟಪಡಿಸುವುದು ಅತ್ಯಂತ ಅಗತ್ಯ - ಸಂಸದ ಒಡೆಯರ್ | JANATA NEWS

26 Aug 2025

ಮೈಸೂರು : ದಸರಾ ಉದ್ಘಾಟನೆಗೆ ಆಹ್ವಾನಿತ ಶ್ರೀಮತಿ ಭಾನು ಮುಷ್ತಾಕ್ ಅವರು ಮೊದಲು ತಾಯಿ ಭುವನೇಶ್ವರಿ ಮತ್ತು ತಾಯಿ ಚಾಮುಂಡೇಶ್ವರಿಯ ಬಗ್ಗೆ ಅವರ ಗೌರವವನ್ನು ಸ್ಪಷ್ಟಪಡಿಸುವುದು ಈ ಸಮಯದಲ್ಲಿ ಅತ್ಯಂತ ಅಗತ್ಯ, ಎಂದು ಮೈಸೂರು ಸಂಸದ ಯಾದುವಿರ ಒಡೆಯರ್ ಅವರು ಆಗ್ರಹಿಸಿದ್ದಾರೆ.

ದಸರಾ ಉದ್ಘಾಟನೆ ಕುರಿತಂತೆ ವಿವಾದ ಮುಂದುವರೆದಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಧಾರದ ಕುರಿತು ದೇಶಾದ್ಯಂತ ಚರ್ಚೆ ನಡೆಯುತ್ತಿದೆ. ಅದರಲ್ಲೂ ಕನ್ನಡದ ತಾಯಿ ಭುವನೇಶ್ವರಿಯನ್ನು ಮಂದಹಾಸದ ಮೇಲೆ ಕೂರಿಸಿದ ಬಗ್ಗೆ ಹಾಗೂ ಕನ್ನಡ ಭಾವೂಟದ ಬಣ್ಣ ಅರಿಶಿನ ಕುಂಕುಮ ಬಣ್ಣ ಎಂದು ಅಸಮಾಧಾನ ವ್ಯಕ್ತ ಪಡಿಸಿದ ಭಾನು ಅವರ ಹಳೆಯ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗಿದ್ದು, ರಾಜ್ಯದ ಸರ್ಕಾರದ ಆಯ್ಕೆ ಬಗ್ಗೆ ಸಾಕಷ್ಟು ಆಕ್ರೋಶ ವ್ಯಕ್ತವಾಗಿದೆ.

"ಶ್ರೀಮತಿ ಭಾನು ಮುಷ್ತಾಕ್ ಅವರು ಕನ್ನಡ ಸಾಹಿತ್ಯ ಲೋಕದ ವಿಶಿಷ್ಟ ಬರಹಗಾರ್ತಿ ಮತ್ತು ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿಯನ್ನು ಗೆದ್ದ ಮೊದಲ ಕನ್ನಡ ಲೇಖಕಿಯಾಗಿ, ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರ ಹೆಮ್ಮೆಯನ್ನು ತಂದಿದ್ದಾರೆ ನಿಜ ಆದರೆ ಈ ಹಿಂದೆ ಕನ್ನಡ ತಾಯಿ ಭುವನೇಶ್ವರಿಯ ಬಗ್ಗೆ ಅವರು ಕೆಲವು ಹೇಳಿಕೆಗಳನ್ನು ನೀಡಿರುವುದು ನಮ್ಮ ಗಮನಕ್ಕೆ ಬಂದಿದೆ. ದಸರಾ ಕೇವಲ ಸಾಂಸ್ಕೃತಿಕ ಕಾರ್ಯಕ್ರಮವಲ್ಲ, ಬದಲಾಗಿ ಶಾಸ್ತ್ರ ಮತ್ತು ಪುರಾಣಗಳಲ್ಲಿ ಉಲ್ಲೇಖಗೊಂಡಿರುವ ಮತ್ತು ವಿಜಯನಗರ ಸಾಮ್ರಾಜ್ಯ ಮತ್ತು ಮೈಸೂರು ಸಂಸ್ಥಾನದ ಕಾಲದಿಂದಲೂ ವೈಭವದಿಂದ ಆಚರಿಸಲ್ಪಡುವ ಹಿಂದೂ ಧಾರ್ಮಿಕ ಉತ್ಸವವಾಗಿದೆ. ಈ ಪವಿತ್ರ ಪರಂಪರೆಯನ್ನು ಗಮನಿಸಿದರೆ, ಈ ವರ್ಷದ ದಸರಾ ಆಚರಣೆಯ ಮುಖ್ಯ ಅತಿಥಿಯಾಗಿ ಉದ್ಘಾಟಿಸುವ ಮೊದಲು ಅವರು ತಾಯಿ ಭುವನೇಶ್ವರಿ ಮತ್ತು ತಾಯಿ ಚಾಮುಂಡೇಶ್ವರಿಯ ಬಗ್ಗೆ ಅವರ ಗೌರವವನ್ನು ಶ್ರೀಮತಿ ಭಾನು ಮುಷ್ತಾಕ್ ಸ್ಪಷ್ಟಪಡಿಸುವುದು ಈ ಸಮಯದಲ್ಲಿ ಅತ್ಯಂತ ಅಗತ್ಯ.", ಎಂದು ಸಂಸದ ಒಡೆಯರ್ ಅವರು ಹೇಳಿದ್ದಾರೆ.

English summary :It is very important to express respect for Mother Bhuvaneshwari and Mother Chamundeswari - MP Wadeyar

 ಆಸ್ಟ್ರೇಲಿಯಾ ಬೋಂಡಿ ಬೀಚ್‌ನಲ್ಲಿ ಭಯೋತ್ಪಾದಕ ದಾಳಿಗೆ ಕನಿಷ್ಟ 12 ಸಾವು
ಆಸ್ಟ್ರೇಲಿಯಾ ಬೋಂಡಿ ಬೀಚ್‌ನಲ್ಲಿ ಭಯೋತ್ಪಾದಕ ದಾಳಿಗೆ ಕನಿಷ್ಟ 12 ಸಾವು
2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ
2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ
₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಎಸ್ಐಆರ್, ಸಂಚಾರ ಸಾಥಿ - ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು

ನ್ಯೂಸ್ MORE NEWS...