Fri,Jul10,2026
ಕನ್ನಡ / English

ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ | JANATA NEWS

08 Oct 2025

ಬೆಂಗಳೂರು : ಕನ್ನಡದ ಸುಪ್ರಸಿದ್ಧ ಚಲನಚಿತ್ರ ನಟ ಕಿಚ್ಚ ಸುದೀಪ್ ನೇತ್ರತ್ವದ ಕನ್ನಡ ಬಿಗ್ ಬಾಸ್ ಸೀಸನ್ 12 ಕ್ಕೆ ತೊಂದರೆ ಕೊಡಲು ಪ್ರಯತ್ನಿಸಿ, ರಾಜ್ಯ ಕಾಂಗ್ರೆಸ್ ಸರ್ಕಾರ ಈಗ ರಾಜ್ಯದಲ್ಲಿ ಪ್ರತಿಪಕ್ಷಗಳೂ ಸೇರಿದಂತೆ ಸಾಕಷ್ಟು ಛೀಮಾರಿಯನ್ನು ಎದುರಿಸುವಂತಾಗಿದೆ.

ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುವ ಬಗ್ಗೆ ಈ ಹಿಂದೆ ಎಚ್ಚರಿಕೆ ನೀಡಿದ್ದ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಯನ್ನು ಉಲ್ಲೇಖಿಸಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ರಾಜ್ಯ ಬಿಜೆಪಿ, "ಅಧಿಕಾರಕ್ಕೆ ಬಂದು ಎರಡೂವರೆ ವರ್ಷವಾದರೂ ಭ್ರಷ್ಟ ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ರಾಜಧಾನಿಯ ರಸ್ತೆ ಗುಂಡಿ ಮುಚ್ಚಲು ಆಗಿಲ್ಲ. ಯಮರೂಪದ ಗುಂಡಿಗಳಿಗೆ ಟಾರ್‌, ಸಿಮೆಂಟ್‌ ಹಾಕುವ ಬದಲು ಡಿಕೆ ಶಿವಕುಮಾರ್ ಸ್ಪ್ಯಾನರ್‌ ಹಿಡಿದು ನಟ್‌-ಬೋಲ್ಟ್‌ ಬಿಗಿ ಮಾಡಲು ಹೊರಟಿದ್ದಾರೆ! ಜನರಿಗೆ ರಸ್ತೆ ಗುಂಡಿ ಚಿಂತೆಯಾದರೆ, ಸರ್ಕಾರಕ್ಕೆ ಪ್ರಚಾರದ ಚಿಂತೆ.", ಎಂದಿದೆ.

ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆಯನ್ನು ಕಟುವಾಗಿ ಟೀಕಿಸಿದ ಜೆಡಿಎಸ್ ಪಕ್ಷ ಸರಣಿ ಸವಾಲನ್ನು ಎಸೆಗಿದೆ, "ನಿಯಮಗಳ ಉಲ್ಲಂಘನೆ ನೆಪದಲ್ಲಿ ಬಿಡದಿಯ ಬಿಗ್ ಬಾಸ್ ಮನೆಗೆ ಬೀಗ ಹಾಕಿಸಿದ್ದೀರಿ. ಒಪ್ಪಿಕೊಳ್ಳೋಣ. ‌ಅದೇ ರೀತಿ ಬೆಂಗಳೂರಿನ ರಸ್ತೆ ಗುಂಡಿಗಳನ್ನು ಯಾವಾಗ ಬಂದ್ ಮಾಡಿಸುತ್ತೀರಾ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರೇ.. ರಾಜ್ಯದಲ್ಲಿ ನಿರಂತರವಾಗಿ ನಡೆಯುತ್ತಿರುವ ರೈತರ ಆತ್ಮಹತ್ಯೆಗಳನ್ನು ಯಾವಾಗ ಬಂದ್ ಮಾಡಿಸುತ್ತೀರಾ?

ರಾಜ್ಯದ ಜನರ ಮೇಲೆ ನಿರಂತರವಾಗಿ ತೆರಿಗೆ ಬರೆ ಎಳೆದು ಲೂಟಿ ಹೊಡೆಯುತ್ತಿರುವುದಕ್ಕೆ ಯಾವಾಗ ಬೀಗ ಹಾಕುತ್ತೀರಾ? ಬೆಲೆ ಏರಿಕೆಗಳ ಮೂಲಕ ಜನಸಾಮಾನ್ಯರನ್ನು ಪಿಕ್ ಪಾಕೆಟ್ ಮಾಡುತ್ತಿರುವ ನಿಮ್ಮ ಕಾಂಗ್ರೆಸ್ ಸರ್ಕಾರಕ್ಕೆ ಯಾವಾಗ ಬೀಗ ಹಾಕುತ್ತೀರಾ?

ಉತ್ತರ ಕರ್ನಾಟಕದಲ್ಲಿ ನೆರೆ ಹಾವಳಿಯನ್ನು ತಡೆಯಲು ಯಾವ ರೀತಿ ಬೀಗ ಹಾಕಿಸುತ್ತೀರಾ?

ರಾಜ್ಯದ ಜನರ ತೆರಿಗೆ ಹಣವನ್ನು ಅಕ್ರಮವಾಗಿ ವಾಮಮಾರ್ಗಗಳ ಮೂಲಕ ಕಾಂಗ್ರೆಸ್ ಹೈಕಮಾಂಡ್'ಗೆ ಕಪ್ಪ ಒಪ್ಪಿಸುತ್ತಿರುವುದಕ್ಕೆ ಯಾವಾಗ ಬೀಗ ಹಾಕಿಸುತ್ತೀರಾ?

ಕಾಂಗ್ರೆಸ್ ಸರ್ಕಾರದ 60% ಕಮಿಷನ್ ದಂಧೆಗೆ ಯಾವಾಗ ಬೀಗ ಹಾಕುತ್ತೀರಾ?

ಕಾಂಗ್ರೆಸ್ ಶಾಸಕರು ಮತ್ತು ಕಾಂಗ್ರೆಸ್ ಪುಢಾರಿಗಳು ನಡೆಸುತ್ತಿರುವ ಕ್ಯಾಸಿನೋ ದಂಧೆ, ಅಕ್ರಮಗಳಿಗೆ ಯಾವಾಗ ಬೀಗ ಹಾಕಿಸುತ್ತೀರಾ?

ಭ್ರಷ್ಟಾಚಾರದ ಕೂಪಗಳಾಗಿರುವ ಸರ್ಕಾರಿ ಇಲಾಖೆ, ಕಚೇರಿಗಳಿಗೆ ಯಾವಾಗ ಬೀಗ ಹಾಕಿಸುತ್ತೀರಾ?

ಕೈಲಾಗದವರು ಮೈಪರಚಿ ಕೊಂಡಂತೆ ಇದೆ ಕಾಂಗ್ರೆಸ್ ಸರ್ಕಾರದ ದುರಾಡಳಿತ."

English summary :Lock on Kannada Bigg Boss house: Opposition alleges that the state government is tightening control over Sandalwood actors

ಉಗ್ರ ನಿಜ್ಜರ್ ಹತ್ಯೆಗೂ ಭಾರತ ಸರ್ಕಾರಕ್ಕೂಸಂಬಂಧವಿಲ್ಲ; ಬ್ರಾರ್ ಮಾಹಿತಿಗೆ 50 ಸಾವಿರ ಡಾಲರ್ ಬಹುಮಾನ - ಕೆನಡ, ಎಫ್‌ಬಿಐ
ಉಗ್ರ ನಿಜ್ಜರ್ ಹತ್ಯೆಗೂ ಭಾರತ ಸರ್ಕಾರಕ್ಕೂಸಂಬಂಧವಿಲ್ಲ; ಬ್ರಾರ್ ಮಾಹಿತಿಗೆ 50 ಸಾವಿರ ಡಾಲರ್ ಬಹುಮಾನ - ಕೆನಡ, ಎಫ್‌ಬಿಐ
ಇರಾನಿನ ಮಿಲಿಟರಿ ಗುರಿಗಳ ಮೇಲೆ ಅಮೆರಿಕ ಪ್ರಮುಖ ದಾಳಿ : ಹೆಚ್ಚಿದ ಉದ್ವಿಗ್ನತೆ
ಇರಾನಿನ ಮಿಲಿಟರಿ ಗುರಿಗಳ ಮೇಲೆ ಅಮೆರಿಕ ಪ್ರಮುಖ ದಾಳಿ : ಹೆಚ್ಚಿದ ಉದ್ವಿಗ್ನತೆ
ಬರುಯಿಪುರ್ ಅತ್ಯಾಚಾರ-ಕೊಲೆ ಪ್ರಕರಣದ ಪ್ರಮುಖ ಆರೋಪಿ ಪೊಲೀಸ್ ಎನ್ಕೌಂಟರ್ನಲ್ಲಿ ಬಲಿ
ಬರುಯಿಪುರ್ ಅತ್ಯಾಚಾರ-ಕೊಲೆ ಪ್ರಕರಣದ ಪ್ರಮುಖ ಆರೋಪಿ ಪೊಲೀಸ್ ಎನ್ಕೌಂಟರ್ನಲ್ಲಿ ಬಲಿ
2 ಭಯೋತ್ಪಾದನಾ ಘಟಕಗಳನ್ನು ಭೇದಿಸಿದ ದೆಹಲಿ ಪೊಲೀಸರು : 6 ಶಂಕಿತರ ಬಂಧನ
2 ಭಯೋತ್ಪಾದನಾ ಘಟಕಗಳನ್ನು ಭೇದಿಸಿದ ದೆಹಲಿ ಪೊಲೀಸರು : 6 ಶಂಕಿತರ ಬಂಧನ
ಎಸ್‌ಐಆರ್‌ ಬೃಹತ್ ಅಕ್ರಮ - ಎನ್‌ಡಿಎ ನಾಯಕರ ನಿಯೋಗದಿಂದ ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿಗೆ ದೂರು
ಎಸ್‌ಐಆರ್‌ ಬೃಹತ್ ಅಕ್ರಮ - ಎನ್‌ಡಿಎ ನಾಯಕರ ನಿಯೋಗದಿಂದ ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿಗೆ ದೂರು
8 ಶಂಕಿತ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರನ್ನು ಬಂಧಿಸಿದ ಗುಜರಾತ್ ಎಟಿಎಸ್
8 ಶಂಕಿತ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರನ್ನು ಬಂಧಿಸಿದ ಗುಜರಾತ್ ಎಟಿಎಸ್
 ವಿಶ್ವಸಂಸ್ಥೆಯ ಪ್ರಧಾನ ಕಚೇರಿಯ ಹೊರಗೆ ಚೀನಾ ವಿರುದ್ಧ ಪ್ರತಿಭಟನೆ ನಡೆಸಿ ಟಿಬೆಟಿಯನ್ ಕಾರ್ಯಕರ್ತ ಆತ್ಮಹತ್ಯೆ
ವಿಶ್ವಸಂಸ್ಥೆಯ ಪ್ರಧಾನ ಕಚೇರಿಯ ಹೊರಗೆ ಚೀನಾ ವಿರುದ್ಧ ಪ್ರತಿಭಟನೆ ನಡೆಸಿ ಟಿಬೆಟಿಯನ್ ಕಾರ್ಯಕರ್ತ ಆತ್ಮಹತ್ಯೆ
52 ಕ್ರಿಮಿನಲ್ ಪ್ರಕರಣ ವಜಾ ಮಾಡುವ ರಾಜ್ಯ ಸಚಿವ ಸಂಪುಟದ ನಿರ್ಧಾರಕ್ಕೆ ಕರ್ನಾಟಕ ಹೈಕೋರ್ಟ್ ತಡೆ
52 ಕ್ರಿಮಿನಲ್ ಪ್ರಕರಣ ವಜಾ ಮಾಡುವ ರಾಜ್ಯ ಸಚಿವ ಸಂಪುಟದ ನಿರ್ಧಾರಕ್ಕೆ ಕರ್ನಾಟಕ ಹೈಕೋರ್ಟ್ ತಡೆ
ರಾಮನಗರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಗಂಭೀರ ಲೋಪ
ರಾಮನಗರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಗಂಭೀರ ಲೋಪ
ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಕ್ಷಮೆಯಾಚಿಸಿದ್ದನ್ನು ಅಪಹಾಸ್ಯ ಮಾಡುವ ಪೋಸ್ಟರ್‌ ಹಾಕಿದ  ಬಿಜೆಪಿ
ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಕ್ಷಮೆಯಾಚಿಸಿದ್ದನ್ನು ಅಪಹಾಸ್ಯ ಮಾಡುವ ಪೋಸ್ಟರ್‌ ಹಾಕಿದ ಬಿಜೆಪಿ
ವಾಟ್ಸಾಪ್ ಯೂಸರ್-ನೇಮ್ ಬಿಡುಗಡೆ ತಾತ್ಕಾಲಿಕ ತಡೆ ನೀಡಿ ಕೇಂದ್ರ ಸರ್ಕಾರ ನಿರ್ದೇಶನ
ವಾಟ್ಸಾಪ್ ಯೂಸರ್-ನೇಮ್ ಬಿಡುಗಡೆ ತಾತ್ಕಾಲಿಕ ತಡೆ ನೀಡಿ ಕೇಂದ್ರ ಸರ್ಕಾರ ನಿರ್ದೇಶನ
 ಟೆಹ್ರಾನ್‌ನ ಹಲವಾರು ಮಿಲಿಟರಿ ಗುರಿಗಳ ಮೇಲೆ ದಾಳಿ ಮಾಡಿದ ಅಮೆರಿಕ-ಇಸ್ರೇಲ್; ಭಾರೀ ಸಾವುನೋವುಗಳನ್ನು ವರದಿ
ಟೆಹ್ರಾನ್‌ನ ಹಲವಾರು ಮಿಲಿಟರಿ ಗುರಿಗಳ ಮೇಲೆ ದಾಳಿ ಮಾಡಿದ ಅಮೆರಿಕ-ಇಸ್ರೇಲ್; ಭಾರೀ ಸಾವುನೋವುಗಳನ್ನು ವರದಿ

ನ್ಯೂಸ್ MORE NEWS...