Mon,Dec15,2025
ಕನ್ನಡ / English

ಸರ್ಕಾರಿ ಸ್ಥಳಗಳಲ್ಲಿ ನಮಾಜ್ ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ | JANATA NEWS

17 Oct 2025

ಬೆಂಗಳೂರು : ವಿಜಯಪುರ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಸರಕಾರಿ ಅನುಮತಿಯಿಲ್ಲದೆ ಸಾರ್ವಜನಿಕ ರಸ್ತೆ, ಪುಟಪಾತ ಹಾಗೂ ಸರ್ಕಾರಿ ಆವರಣಗಳಲ್ಲಿ ನಮಾಜ್ ಮಾಡಲು ಅವಕಾಶ ಕೊಡಬಾರದೆಂದು ಆಗ್ರಹಿಸಿದ್ದಾರೆ.

"ಸರ್ಕಾರವೇ ಪರಿಚಯಿಸಿರುವ ನಿಯಮಾವಳಿಗಳ ಅನುಸಾರ ಸಾರ್ವಜನಿಕ ಸ್ಥಳಗಳಲ್ಲಿ, ಸರ್ಕಾರಿ ಜಾಗಗಳಲ್ಲಿ ನಮಾಜ್ ಮಾಡಲು ಅವಕಾಶ ಕೊಡಬಾರದೆಂದು ಮಾನ್ಯ ಮುಖ್ಯ ಮಂತ್ರಿಗಳಿಗೆ ಸವಿವರವಾಗಿ ಪತ್ರ ಬರೆದಿದ್ದೇನೆ. ಸ 'ಸರ್ವ ಜನಾಂಗದ ಶಾಂತಿಯ ತೋಟ' ಎಂಬ ಸರ್ಕಾರದ ಆಶಯ ಎಲ್ಲರಿಗೂ ಅನ್ವಯ ಆಗಬೇಕು. ಸರ್ಕಾರ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಲಿ.", ಎಂದು ಯತ್ನಾಳ್ ಹೇಳಿದ್ದಾರೆ.

ಆರ್. ಎಸ್. ಎಸ್. ಪಥಸಂಚಲನ ನಿರ್ಬಂಧ ಕುರಿತು ರಾಜ್ಯ ಕಾಂಗ್ರೆಸ್ ಸರ್ಕಾರದ ಯೋಚನೆ ಕುರಿತು ನಡೆದ ಚರ್ಚೆಯ ಬೆನ್ನಲ್ಲೇ, ಸರ್ಕಾರಿ ಸ್ಥಳಗಳು, ಶೈಕ್ಷಣಿಕ ಸಂಸ್ಥೆಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಧಾರ್ಮಿಕ ಅಥವಾ ರಾಜಕೀಯ ಕಾರ್ಯಕ್ರಮಕ್ಕೆ ಕಡ್ಡಾಯ ಅನುಮತಿ ಪಡೆಯಬೇಕು ಎಂದು ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಸಚಿವ ಸಂಪುಟದ ಸಭೆಯಲ್ಲಿ ನಿರ್ಧರಿಸಿತ್ತು.

ಈ ಹಿನ್ನೆಲೆಯಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಅವರು, ಸಚಿವ ಪ್ರಿಯಾಂಕ ಖರ್ಗೆ ಮಾದರಿಯಲ್ಲಿ, ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಸರಕಾರಿ ಅನುಮತಿಯಿಲ್ಲದೆ ಸಾರ್ವಜನಿಕ ರಸ್ತೆ, ಪುಟಪಾತ ಹಾಗೂ ಸರ್ಕಾರಿ ಆವರಣಗಳಲ್ಲಿ ಪೂರ್ವ ಅನುಮತಿ ಇಲ್ಲದೆ ನಮಾಜ್ ನಡೆಸದಂತೆ ಆಗ್ರಹಿಸಿದ್ದಾರೆ.

ಅನುಮತಿಯಿಲ್ಲದೆ ರಸ್ತೆ, ಪುಟಪಾತ ಹಾಗೂ ಸರ್ಕಾರಿ ಆವರಣಗಳಲ್ಲಿ ನಮಾಜ್ ಸಲ್ಲಿಸುವ ಚಟುವಟಿಕೆಗಳಿಂದ ವಾಹನ ಸಂಚಾರ ಹಾಗೂ ಪಾದಚಾರಿಗಳಿಗೆ ಅಡಚಣೆ ಉಂಟಾಗುತ್ತಿದೆ. ಇದು ಭಾರತೀಯ ಸಂವಿಧಾನದ ಕಲಂ 19 ಮತ್ತು 21ರ ಅಡಿಯಲ್ಲಿ ಖಾತರಿಯಾದ ಮುಕ್ತ ಸಂಚಾರ ಹಾಗೂ ಭದ್ರತೆ ಎಂಬ ಮೂಲಭೂತ ಹಕ್ಕುಗಳು ಉಲ್ಲಂಘನೆಯಾಗಿದೆ. ಹೀಗಾಗಿ ಸರ್ಕಾರದ ಕಚೇರಿಗಳು ಅಥವಾ ಸರ್ಕಾರಿ ಅನುದಾನಿತ ಸಂಸ್ಥೆಗಳಲ್ಲಿ ನಮಾಜ್‌ಗೆ ವಿಶೇಷ ಅನುಮತಿ ನೀಡಬಾರದು. ಇತರ ಸಂಸ್ಥೆಗಳ ಕಾರ್ಯಚಟುವಟಿಕೆ ನಿರ್ಬಂಧಿಸಿ ಇಂತಹ ಧಾರ್ಮಿಕ ಚಟುವಟಿಕೆಗಳಿಗೆ ಅವಕಾಶ ನೀಡುವುದು ಆಡಳಿತದ ಮೇಲಿನ ನಂಬಿಕೆಗೆ ಚ್ಯುತಿ ತರಬಹುದಾದ ಕಾರಣ ಈ ಬಗ್ಗೆ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್​ ವರಿಷ್ಠಾಧಿಕಾರಿಗಳಿಗೆ ಸರ್ಕಾರ ಆದೇಶಿಸಬೇಕು. ಅನುಮತಿಯಿಲ್ಲದೆ ರಸ್ತೆಗಳು, ಪಾದಚಾರಿ ಮಾರ್ಗಗಳು ಅಥವಾ ಸರ್ಕಾರಿ ಆವರಣಗಳಲ್ಲಿ ನಮಾಜ್ ಸಲ್ಲಿಸಲು ಅವಕಾಶ ನೀಡದಂತೆ ಸೂಚಿಸಬೇಕು ಎಂದು ಯತ್ನಾಳ್​ ಆಗ್ರಹಿಸಿದ್ದಾರೆ.

English summary :MLA Yatnal writes to CM urging not to allow Namaz in government places

 ಆಸ್ಟ್ರೇಲಿಯಾ ಬೋಂಡಿ ಬೀಚ್‌ನಲ್ಲಿ ಭಯೋತ್ಪಾದಕ ದಾಳಿಗೆ ಕನಿಷ್ಟ 12 ಸಾವು
ಆಸ್ಟ್ರೇಲಿಯಾ ಬೋಂಡಿ ಬೀಚ್‌ನಲ್ಲಿ ಭಯೋತ್ಪಾದಕ ದಾಳಿಗೆ ಕನಿಷ್ಟ 12 ಸಾವು
2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ
2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ
₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಎಸ್ಐಆರ್, ಸಂಚಾರ ಸಾಥಿ - ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು

ನ್ಯೂಸ್ MORE NEWS...