Mon,Dec15,2025
ಕನ್ನಡ / English

ಅಸಮರ್ಥ ಗೃಹ ಸಚಿವರ ಆಳ್ವಿಕೆಯಲ್ಲಿ ಕರ್ನಾಟಕವು ಬ್ಯಾಂಕ್ ದರೋಡೆಕೋರರಿಗೆ ನೆಚ್ಚಿನ ತಾಣವಾಗಿದೆ- ಶಾಸಕ ಯತ್ನಾಳ್ | JANATA NEWS

20 Nov 2025

ಬೆಂಗಳೂರು : ನಿನ್ನೆ ಸಿಲಿಕಾನ್ ಸಿಟಿಯಲ್ಲಿ ಹಾಡುಹಗಲೇ ನಡೆದ ಭಾರಿ ಪ್ರಮಾಣದ ಹಗಲು ದರೋಡೆಗೆ ರಾಜ್ಯಾದ್ಯಂತ ಭಾರಿ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ, ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು, ಅಸಮರ್ಥ ಗೃಹ ಸಚಿವರ ಆಳ್ವಿಕೆಯಲ್ಲಿ ಕರ್ನಾಟಕವು, ಬ್ಯಾಂಕ್ ದರೋಡೆಕಾರರಿಗೆ ನೆಚ್ಚಿನ ತಾಣವಾಗಿದೆ, ಎಂದು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ಶಾಸಕ ಯತ್ನಾಳ್ ಅವರು ಈ ಕುರಿತು ತಮ್ಮ ಎಕ್ಸ್ ಪೋಸ್ಟ್ ನಲ್ಲಿ ಬರೆದಿದ್ದು,
"📍ಅಕ್ಟೋಬರ್ 2024 : ದಾವಣಗೆರೆಯಲ್ಲಿ SBI ಬ್ಯಾಂಕ್ ದರೋಡೆ
📍ಜನವರಿ 2025 : ಮಂಗಳೂರಿನ ಕೋಟೆಕಾರ್ ಸಹಕಾರಿ ಸಂಘದಲ್ಲಿ ದರೋಡೆ
📍ಮೇ 2025 : ವಿಜಯಪುರದಲ್ಲಿಕೆನರಾ ಬ್ಯಾಂಕ್ ದರೋಡೆ
📍ಸೆಪ್ಟೆಂಬರ್ 2025 : ವಿಜಯಪುರದಲ್ಲಿ SBI ಬ್ಯಾಂಕ್ ದರೋಡೆ
📍ನಿನ್ನೆ, ಬೆಂಗಳೂರಿನ ಅಶೋಕ ಪಿಲ್ಲರ್ ಹತ್ತಿರ ಬ್ಯಾಂಕ್ ದರೋಡೆ "

"ಬ್ಯಾಂಕಿನಲ್ಲಿ ನಮ್ಮ ಹಣ ಸುರಕ್ಷಿತವಾಗಿರುತ್ತದೆ ಎಂದು ಸಾರ್ವಜನಿಕರು ಅಲ್ಲಿ ಹಣ ಇಡುತ್ತಾರೆ. ಅದನ್ನು ಸುರಕ್ಷಿತವಾಗಿ ಇಡಬೇಕಾದದ್ದು (safe custody) ಬ್ಯಾಂಕ್ ಹಾಗೂ ಸರ್ಕಾರದ ಕರ್ತವ್ಯ. "

"ಅಸಮರ್ಥ ಗೃಹ ಸಚಿವರ ಆಳ್ವಿಕೆಯಲ್ಲಿ ಕರ್ನಾಟಕ ಬ್ಯಾಂಕ್ ದರೋಡೆಕಾರರಿಗೆ ನೆಚ್ಚಿನ ತಾಣವಾಗಿದೆ. ಸಾರ್ವಜನಿಕ ಹಣವನ್ನು ದೋಚುವ ದರೋಡೆಕೋರರಿಗೆ ಯಾವುದೇ ಮುಲಾಜಿಲ್ಲದೆ shoot at sight ಆದೇಶವನ್ನು ನೀಡಿ. "

"ಮಕ್ಕಳ ವಿದ್ಯಾಭ್ಯಾಸ, ಮದುವೆ, ಇತರೆ ಖರ್ಚು ವೆಚ್ಚಗಳಿಗೆ ಬ್ಯಾಂಕ್ ಗಳಲ್ಲಿ ಹಣವಿಟ್ಟರೆ ಸುರಕ್ಷಿತವಾಗಿರುತ್ತದೆ ಎಂದು ನಂಬಿ ಇಟ್ಟಿರುತ್ತಾರೆ. ಆದರೆ, ಹಾಡ ಹಗಲೇ ಜಯನಗರದಂತ ಜನನಿಭಿಡ ಪ್ರದೇಶದಲ್ಲಿ ಹಣ ಸಾಗಿಸುತ್ತಿದ್ದ ವಾಹನವನ್ನು ಅಡ್ಡಗಟ್ಟಿ ದರೋಡೆ ಮಾಡುತ್ತಾರೆ ಎಂದರೆ ನಮ್ಮ ಗೃಹ ಇಲಾಖೆ ಎಷ್ಟರ ಮಟ್ಟಿಗೆ ನಿಷ್ಕ್ರಿಯವಾಗಿದೆ ಎಂಬುದು ಗೊತ್ತಾಗುತ್ತದೆ. ದರೋಡೆಕಾರರಿಗೆ, ಅತ್ಯಾಚಾರಿಗಳಿಗೆ, ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ಸಮಾಜಘಾತುಕರಿಗೆ ಅವರಿಗೆ ಅರ್ಥವಾಗುವ ಭಾಷೆಯಲ್ಲಿ ವ್ಯವಹರಿಸಿ.", ಎಂದು ಯತ್ನಾಳ್ ಅವರು ಈ ದರೋಡೆ ಕುರಿತಾದ ಪತ್ರಿಕೆಯ ತುಣುಕನ್ನು ಹಂಚಿಕೊಂಡಿದ್ದಾರೆ.

English summary :Under the inept Home Minister administration, Karnataka become preferred destination for bank robber - MLA Yatnal

ವೋಟ್ ಚೋರಿ - ನಿರೂಪಣೆಯನ್ನು ಕಟುವಾಗಿ ಟೀಕಿಸಿದ ಎಚ್.ಡಿ. ದೇವೇಗೌಡ : ಕಾಂಗ್ರೆಸ್ ಗೆ ಎಚ್ಚರಿಕೆ ನೀಡಿ ಕಿವಿ ಹಿಂಡಿದ ಮಾಜಿ ಪ್ರಧಾನಿ
ವೋಟ್ ಚೋರಿ - ನಿರೂಪಣೆಯನ್ನು ಕಟುವಾಗಿ ಟೀಕಿಸಿದ ಎಚ್.ಡಿ. ದೇವೇಗೌಡ : ಕಾಂಗ್ರೆಸ್ ಗೆ ಎಚ್ಚರಿಕೆ ನೀಡಿ ಕಿವಿ ಹಿಂಡಿದ ಮಾಜಿ ಪ್ರಧಾನಿ
ಸಿಡ್ನಿ ಬೋಂಡಿ ಬೀಚ್ ದಾಳಿ: ಭಯೋತ್ಪಾದಕರು ಪಾಕಿಸ್ತಾನ ಮೂಲದ ತಂದೆ ಮತ್ತು ಮಗ.
ಸಿಡ್ನಿ ಬೋಂಡಿ ಬೀಚ್ ದಾಳಿ: ಭಯೋತ್ಪಾದಕರು ಪಾಕಿಸ್ತಾನ ಮೂಲದ ತಂದೆ ಮತ್ತು ಮಗ.
 ಆಸ್ಟ್ರೇಲಿಯಾ ಬೋಂಡಿ ಬೀಚ್‌ನಲ್ಲಿ ಭಯೋತ್ಪಾದಕ ದಾಳಿಗೆ ಕನಿಷ್ಟ 12 ಸಾವು
ಆಸ್ಟ್ರೇಲಿಯಾ ಬೋಂಡಿ ಬೀಚ್‌ನಲ್ಲಿ ಭಯೋತ್ಪಾದಕ ದಾಳಿಗೆ ಕನಿಷ್ಟ 12 ಸಾವು
2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ
2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ
₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಎಸ್ಐಆರ್, ಸಂಚಾರ ಸಾಥಿ - ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ

ನ್ಯೂಸ್ MORE NEWS...