Sun,Jul12,2026
ಕನ್ನಡ / English

ಸಚಿವ ಡಿ. ಸುಧಾಕರ್‌ ಆರೋಗ್ಯದ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರಹಸ್ಯ - ಜೆಡಿಎಸ್ ಗಂಭೀರ ಆರೋಪ | JANATA NEWS

29 Apr 2026

ಬೆಂಗಳೂರು : ಸಚಿವರಾದ ಡಿ. ಸುಧಾಕರ್‌ ಅವರ ಆರೋಗ್ಯದ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರಹಸ್ಯ ಮಾಡುತ್ತಿದೆ ಎಂದೂ, ಸಚಿವರ ಪುತ್ರರ ಹೇಳಿಕೆಗೂ, ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆಯೂ ರಾಜ್ಯ ಜೆಡಿಎಸ್ ಪಕ್ಷ ಸಂಶಯ ವ್ಯಕ್ತಪಡಿಸಿದ್ದು, ಸ್ಪಷ್ಟನೆಗೆ ಒತ್ತಾಯಿಸಿದೆ.

"ಸಚಿವರಾದ ಡಿ. ಸುಧಾಕರ್‌ ಅವರ ಪುತ್ರರು ತಮ್ಮ ತಂದೆಯ ಆರೋಗ್ಯದ ಬಗ್ಗೆ ರಾಜ್ಯದ ಜನರ ಎದುರು ಹೇಳಲು ಯಾರೋ ಬರೆದುಕೊಟ್ಟ ಸ್ಕ್ರೀಪ್ಟ್‌ ಓದುತ್ತಿರುವುದು ವಿಡಿಯೋದಲ್ಲಿ ಸ್ಪಷ್ಟವಾಗುತ್ತಿದೆ. 10ಕ್ಕೂ ಹೆಚ್ಚು ಬಾರಿ ಎಡಿಟ್‌ ಮಾಡಿರುವ ಆ ವಿಡಿಯೋ ನೋಡಿದರೆ, ಯಾರದೋ ಒತ್ತಡಕ್ಕೆ ಮಣಿದು ರಾಜಕೀಯವಾಗಿ ಈ ರೀತಿ ಬಲವಂತದ ಹೇಳಿಕೆ ಕೊಡಿಸಲಾಗಿದೆ. ಇದರ ಹಿಂದಿರುವ ಆ ಮಹಾನಾಯಕ ಯಾರು? "

"ಸಿಎಂ ಸಿದ್ದರಾಮಯ್ಯ ಭೇಟಿಗೂ ಮುನ್ನ ಸಚಿವರು ವೆಂಟಿಲೇಟರ್‌ನಿಂದ ಉಸಿರಾಟ ಮಾಡ್ತಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ಹೆಲ್ತ್‌ ಬುಲೆಟಿನ್‌ ಬಿಡುಗಡೆ ಮಾಡಿದ್ದರು. ಸಚಿವರಾದ ಡಿ. ಸುಧಾಕರ್‌ ಅವರ ಆರೋಗ್ಯ ವಿಚಾರಿಸಲು ದಿನಾಂಕ : 25/04/2026ರಂದ ಆಸ್ಪತ್ರೆಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು, ಸಚಿವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ, ಅವರಿಗೆ ಪ್ರಜ್ಞೆ ಬಂದಿಲ್ಲ ಎಂದು ಹೇಳಿಕೆ ಕೊಟ್ಟಿದ್ದರು."

"ಸಿಎಂ ಭೇಟಿ ಬಳಿಕ ಅಂದರೆ ಮಾರನೆ ದಿನ ದಿನಾಂಕ : 26/04/2026 ರಂದು ಡಿಸಿಎಂ ಡಿಕೆ.ಶಿವಕುಮಾರ್ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ತೆಗೆದಿರುವ ಚಿತ್ರದಲ್ಲಿ ಯಾವುದೇ ವೆಂಟಿಲೇಟರ್‌ ಕಾಣಿಸುತ್ತಿಲ್ಲ. ಹಾಗಾದರೆ, ಒಂದೇ ದಿನದಲ್ಲಿ ವೆಂಟಿಲೇಟರ್‌ ಕಣ್ಮರೆಯಾಯಿತೆ? ಸಚಿವರು ಲೈಫ್ ಸಪೋರ್ಟ್ ಇಲ್ಲದೆ ಉಸಿರಾಟ ಮಾಡುತ್ತಿದ್ದಾರೆಯೇ, ಅವರ ಆರೋಗ್ಯ ಸಮಸ್ಯೆಗಳು ನಿವಾರಣೆ ಆಯಿತೇ?"

"ಸಚಿವರ ಆರೋಗ್ಯದ ವಿಷಯದಲ್ಲಿ ಕಾಂಗ್ರೆಸ್ ಸರ್ಕಾರ ಯಾಕಿಷ್ಟು ರಹಸ್ಯ ಮಾಡುತ್ತಿದೆ? ಅವರ ಆರೋಗ್ಯದ ಚೇತರಿಕೆ ಬಗ್ಗೆ ಆಸ್ಪತ್ರೆಯವರೂ ಯಾಕೆ ಹೆಲ್ತ್ ಬುಲೆಟಿನ್ ಹೊರಡಿಸುತ್ತಿಲ್ಲ? ಇದು ರಾಜ್ಯದ ಜನರನ್ನು ಕಾಡುತ್ತಿರುವ ಆತಂಕದ ಪ್ರಶ್ನೆ. ಇದನಷ್ಟೇ ಕೇಂದ್ರ ಸಚಿವರಾದ ಶ್ರೀ ಎಚ್.ಡಿ.ಕುಮಾರಸ್ವಾಮಿ ಅವರು ಪ್ರಶ್ನಿಸಿರುವುದು. ದಯವಿಟ್ಟು ಸತ್ಯ ಹೇಳಿ.", ಎಂದು ಪ್ರತಿಪಕ್ಷ ಜೆಡಿಎಸ್ ಒತ್ತಾಯಿಸಿದೆ.

English summary :Health issues of Min. D.Sudhakar kept secret by state Cong govt - Serious allegation by JDS

ಉಗ್ರ ನಿಜ್ಜರ್ ಹತ್ಯೆಗೂ ಭಾರತ ಸರ್ಕಾರಕ್ಕೂಸಂಬಂಧವಿಲ್ಲ; ಬ್ರಾರ್ ಮಾಹಿತಿಗೆ 50 ಸಾವಿರ ಡಾಲರ್ ಬಹುಮಾನ - ಕೆನಡ, ಎಫ್‌ಬಿಐ
ಉಗ್ರ ನಿಜ್ಜರ್ ಹತ್ಯೆಗೂ ಭಾರತ ಸರ್ಕಾರಕ್ಕೂಸಂಬಂಧವಿಲ್ಲ; ಬ್ರಾರ್ ಮಾಹಿತಿಗೆ 50 ಸಾವಿರ ಡಾಲರ್ ಬಹುಮಾನ - ಕೆನಡ, ಎಫ್‌ಬಿಐ
ಇರಾನಿನ ಮಿಲಿಟರಿ ಗುರಿಗಳ ಮೇಲೆ ಅಮೆರಿಕ ಪ್ರಮುಖ ದಾಳಿ : ಹೆಚ್ಚಿದ ಉದ್ವಿಗ್ನತೆ
ಇರಾನಿನ ಮಿಲಿಟರಿ ಗುರಿಗಳ ಮೇಲೆ ಅಮೆರಿಕ ಪ್ರಮುಖ ದಾಳಿ : ಹೆಚ್ಚಿದ ಉದ್ವಿಗ್ನತೆ
ಬರುಯಿಪುರ್ ಅತ್ಯಾಚಾರ-ಕೊಲೆ ಪ್ರಕರಣದ ಪ್ರಮುಖ ಆರೋಪಿ ಪೊಲೀಸ್ ಎನ್ಕೌಂಟರ್ನಲ್ಲಿ ಬಲಿ
ಬರುಯಿಪುರ್ ಅತ್ಯಾಚಾರ-ಕೊಲೆ ಪ್ರಕರಣದ ಪ್ರಮುಖ ಆರೋಪಿ ಪೊಲೀಸ್ ಎನ್ಕೌಂಟರ್ನಲ್ಲಿ ಬಲಿ
2 ಭಯೋತ್ಪಾದನಾ ಘಟಕಗಳನ್ನು ಭೇದಿಸಿದ ದೆಹಲಿ ಪೊಲೀಸರು : 6 ಶಂಕಿತರ ಬಂಧನ
2 ಭಯೋತ್ಪಾದನಾ ಘಟಕಗಳನ್ನು ಭೇದಿಸಿದ ದೆಹಲಿ ಪೊಲೀಸರು : 6 ಶಂಕಿತರ ಬಂಧನ
ಎಸ್‌ಐಆರ್‌ ಬೃಹತ್ ಅಕ್ರಮ - ಎನ್‌ಡಿಎ ನಾಯಕರ ನಿಯೋಗದಿಂದ ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿಗೆ ದೂರು
ಎಸ್‌ಐಆರ್‌ ಬೃಹತ್ ಅಕ್ರಮ - ಎನ್‌ಡಿಎ ನಾಯಕರ ನಿಯೋಗದಿಂದ ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿಗೆ ದೂರು
8 ಶಂಕಿತ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರನ್ನು ಬಂಧಿಸಿದ ಗುಜರಾತ್ ಎಟಿಎಸ್
8 ಶಂಕಿತ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರನ್ನು ಬಂಧಿಸಿದ ಗುಜರಾತ್ ಎಟಿಎಸ್
 ವಿಶ್ವಸಂಸ್ಥೆಯ ಪ್ರಧಾನ ಕಚೇರಿಯ ಹೊರಗೆ ಚೀನಾ ವಿರುದ್ಧ ಪ್ರತಿಭಟನೆ ನಡೆಸಿ ಟಿಬೆಟಿಯನ್ ಕಾರ್ಯಕರ್ತ ಆತ್ಮಹತ್ಯೆ
ವಿಶ್ವಸಂಸ್ಥೆಯ ಪ್ರಧಾನ ಕಚೇರಿಯ ಹೊರಗೆ ಚೀನಾ ವಿರುದ್ಧ ಪ್ರತಿಭಟನೆ ನಡೆಸಿ ಟಿಬೆಟಿಯನ್ ಕಾರ್ಯಕರ್ತ ಆತ್ಮಹತ್ಯೆ
52 ಕ್ರಿಮಿನಲ್ ಪ್ರಕರಣ ವಜಾ ಮಾಡುವ ರಾಜ್ಯ ಸಚಿವ ಸಂಪುಟದ ನಿರ್ಧಾರಕ್ಕೆ ಕರ್ನಾಟಕ ಹೈಕೋರ್ಟ್ ತಡೆ
52 ಕ್ರಿಮಿನಲ್ ಪ್ರಕರಣ ವಜಾ ಮಾಡುವ ರಾಜ್ಯ ಸಚಿವ ಸಂಪುಟದ ನಿರ್ಧಾರಕ್ಕೆ ಕರ್ನಾಟಕ ಹೈಕೋರ್ಟ್ ತಡೆ
ರಾಮನಗರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಗಂಭೀರ ಲೋಪ
ರಾಮನಗರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಗಂಭೀರ ಲೋಪ
ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಕ್ಷಮೆಯಾಚಿಸಿದ್ದನ್ನು ಅಪಹಾಸ್ಯ ಮಾಡುವ ಪೋಸ್ಟರ್‌ ಹಾಕಿದ  ಬಿಜೆಪಿ
ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಕ್ಷಮೆಯಾಚಿಸಿದ್ದನ್ನು ಅಪಹಾಸ್ಯ ಮಾಡುವ ಪೋಸ್ಟರ್‌ ಹಾಕಿದ ಬಿಜೆಪಿ
ವಾಟ್ಸಾಪ್ ಯೂಸರ್-ನೇಮ್ ಬಿಡುಗಡೆ ತಾತ್ಕಾಲಿಕ ತಡೆ ನೀಡಿ ಕೇಂದ್ರ ಸರ್ಕಾರ ನಿರ್ದೇಶನ
ವಾಟ್ಸಾಪ್ ಯೂಸರ್-ನೇಮ್ ಬಿಡುಗಡೆ ತಾತ್ಕಾಲಿಕ ತಡೆ ನೀಡಿ ಕೇಂದ್ರ ಸರ್ಕಾರ ನಿರ್ದೇಶನ
 ಟೆಹ್ರಾನ್‌ನ ಹಲವಾರು ಮಿಲಿಟರಿ ಗುರಿಗಳ ಮೇಲೆ ದಾಳಿ ಮಾಡಿದ ಅಮೆರಿಕ-ಇಸ್ರೇಲ್; ಭಾರೀ ಸಾವುನೋವುಗಳನ್ನು ವರದಿ
ಟೆಹ್ರಾನ್‌ನ ಹಲವಾರು ಮಿಲಿಟರಿ ಗುರಿಗಳ ಮೇಲೆ ದಾಳಿ ಮಾಡಿದ ಅಮೆರಿಕ-ಇಸ್ರೇಲ್; ಭಾರೀ ಸಾವುನೋವುಗಳನ್ನು ವರದಿ

ನ್ಯೂಸ್ MORE NEWS...