ದರ್ಶನ್ ಅಭಿಮಾನಿಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ವಿಚಾರ: ಸಿನಿಮಾ ಸೆಟ್​ ನಲ್ಲಿದ್ದ ಜಗ್ಗೇಶ್​ಗೆ ದರ್ಶನ್​ ಅಭಿಮಾನಿಗಳು ಮುತ್ತಿಗೆ! | Filmz news

2021-02-22
1042
Jaggesh

: ನಟ ಜಗ್ಗೇಶ್, ದರ್ಶನ್ ಅಭಿಮಾನಿಗಳ ವಿರುದ್ಧ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದ್ದು ಇದರಿಂದ ಆಕ್ರೋಶಗೊಂಡಿರುವ ದರ್ಶನ್ ಅಭಿಮಾನಿಗಳು, ಜಗ್ಗೇಶ್ ನಟನೆಯ ತೋತಾಪುರಿ ಚಿತ್ರದ ಶೂಟಿಂಗ್ ಸ್ಪಾಟ್ ಗೆ ತೆರಳಿ ಜಗ್ಗೇಶ್ ಗೆ ಮುತ್ತಿಗೆ ಹಾಕಿದ್ದಾರೆ. ಅಲ್ಲದೇ ತಮ್ಮ ವಿರುದ್ಧ ಮಾತನಾಡಿದ್ದಕ್ಕೆ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

ಇನ್ಸ್​ಪೆಕ್ಟರ್ ವಿಕ್ರಂ ಚಿತ್ರದ ನಿರ್ಮಾಪಕ ವಿಖ್ಯಾತ್ ಜೊತೆಗೆ ಫೋನಿನಲ್ಲಿ ಮಾತನಾಡಬೇಕಾದಾಗ, ದರ್ಶನ್ ಅವ್ರ ಅಭಿಮಾನಿಗಳ ತರ ತಲೆ ಮಾಂಸ ಕೇಳುವವರಲ್ಲ ಎಂಬ ಆಡಿಯೋವೊಂದು ದರ್ಶನ್ ಮತ್ತು ಅವ್ರ ಅಭಿಮಾನಿಗಳಿಗೆ ಬೇಸರ ಉಂಟು ಮಾಡಿತ್ತು. ಈ ವಿಚಾರವಾಗಿ ಇಂದು ಮೈಸೂರಿನಲ್ಲಿ ಜಗ್ಗೇಶ್​ಗೆ ದರ್ಶನ್ ಅಭಿಮಾನಿಗಳು ಮುತ್ತಿಗೆ ಹಾಕಿದ್ದಾರೆ‌.

ಸದ್ಯ ಜಗ್ಗೇಶ್ ಮೈಸೂರಿನ ಬನ್ನೂರು ಸಮೀಪದ ಅತ್ತಳ್ಳಿ ಬಳಿ ತೋತಾಪುರಿ ಸಿನಿಮಾ ಶೂಟಿಂಗ್​ನಲ್ಲಿ ಇರಬೇಕಾದರೆ, ಅಭಿಮಾನಿಗಳು ಜಗ್ಗೇಶ್ ಅವ್ರನ್ನ ಸುತ್ತುವರೆದು ತರಾಟೆಗೆ ತೆಗೆದುಕೊಂಡಿದ್ದಾರೆ. ದರ್ಶನ್ ಮತ್ತು ಅಭಿಮಾನಿಗಳ ಬಗ್ಗೆ ಯಾಕೆ ಕೆಟ್ಟದಾಗಿ ಮಾತನಾಡಿದ್ರಿ ಎಂದು ಪ್ರಶ್ನೆ ಮಾಡಿದ್ದಾರೆ‌.

janata

ಈ ವೇಳೆ ಜಗ್ಗೇಶ್, ನಾನು ಯಾವುದೇ ರೀತಿ ಕೆಟ್ಟದಾಗಿ ಮಾತನಾಡಿಲ್ಲ. ಇದರ ಹಿಂದೆ ದೊಡ್ಡ ಹುನ್ನಾರ ನಡೆದಿದೆ. ಆ ಆಡಿಯೋ ಕ್ಲಿಪ್​ನಲ್ಲಿರುವ ಧ್ವನಿ ತನ್ನದಲ್ಲ ಎಂದು ಆರೋಪವನ್ನು ತಳ್ಳಿ ಹಾಕಿದ್ದಾರೆ.

ತಾನು ದರ್ಶನ್​ ಹೆಸರಿನ ವೆಬ್​ ಡಿಸೈನರ್​ ಬಗ್ಗೆ ಮಾತನಾಡಿದ್ದು, ಅದನ್ನು ಎಡಿಟ್​ ಮಾಡಿ ಈ ರೀತಿ ಆರೋಪ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಆಡಿಯೋ ಎಡಿಟ್ ಮಾಡಿ ನನ್ನ ವಿರುದ್ಧ ಅಪಪ್ರಚಾರ ಮಾಡಲಾಗಿದೆ ಎಂದು ಹೇಳಿದ್ದಾರೆ. ಆದರೂ ಪಟ್ಟು ಬಿಡದ ದರ್ಶನ್ ಅಭಿಮಾನಿಗಳು ಕ್ಷಮೆ ಯಾಚಿಸುವಂತೆ ಒತ್ತಾಯಿಸಿದ್ದಾರೆ. ಒತ್ತಡಕ್ಕೆ ಮಣಿದ ಜಗ್ಗೇಶ್ ಕೊನೆಗೂ ದರ್ಶನ್ ಅಭಿಮಾನಿಗಳ ಕ್ಷಮೆ ಕೋರಿದ್ದಾರೆ.

ನನ್ನ ಮತ್ತು ದರ್ಶನ್ ಗೆಳೆತನದ ಮಧ್ಯೆ ಯಾರೋ ಹುಳಿ ಹಿಂಡುತ್ತಿದ್ದಾರೆ. ನಾನು ದರ್ಶನ್ ಬಗ್ಗೆ ಎಲ್ಲೂ ಕೆಟ್ಟದಾಗಿ ಮಾತನಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಅಷ್ಟಕ್ಕೂ ಜಗ್ಗೇಶ್ ಆಡೀಯೋದಲ್ಲಿ ಹೇಳಿದ್ದೇನು?:
ನಮ್ಮಹತ್ರ ಇರೋರೆಲ್ಲ ಹಾರ್ಡ್ ವರ್ಕ್ ಮಾಡೋರು. ದರ್ಶನ್ ಅಭಿಮಾನಿಗಳ ಥರ ತಲೆ ಮಾಂಸ ಕೇಳೋರು, ನೂರು ಕುರಿ ಕಳಿಸಿ ಅಂತ ಕೇಳೋರು ಯಾರೂ ಇಲ್ಲ ಎಂದು ದರ್ಶನ್ ಅಭಿಮಾನಿಗಳ ಬಗ್ಗೆ ಅವಹೇಳನಕಾರಿಯಾಗಿ ಜಗ್ಗೇಶ್ ಹೇಳಿದ್ದಾರೆ ಎಂಬ ಆಡಿಯೋ ಭಾರಿ ವೈರಲ್ ಆಗಿದೆ.

English summary :Jaggesh

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಫೋಟೋ ಗ್ಯಾಲಾರಿ MORE PHOTO...