ನಟ ಸಂಚಾರಿ ವಿಜಯ್ ಬೈಕ್ ಅಪಘಾತ: ಶಸ್ತ್ರಚಿಕಿತ್ಸೆ ನಡೆಸಿ 10 ಗಂಟೆ ಕಳೆದರೂ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ, ವಿಜಯ್​ ಸ್ಥಿತಿ ಗಂಭೀರ | Filmz news

2021-06-13
1051
Sanchari vijay

: ನಟ ಸಂಚಾರಿ ವಿಜಯ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. . ನಿನ್ನೆ ರಾತ್ರಿ ಬೈಕ್ ನಲ್ಲಿ ತೆರಳುತ್ತಿದ್ದಂತ ಸಂದರ್ಭದಲ್ಲಿ ಸ್ಯಾಂಡಲ್ ವುಡ್ ನಟ ಸಂಚಾರಿ ವಿಜಯ್ ಅವರು ಸ್ನೇಹಿತನ ಜೊತೆಗೆ ಸಾಮಾಜಿಕ ಕಾರ್ಯ ಮುಗಿಸಿ, ಮನೆಗೆ ವಾಪಾಸ್ ಬರುತ್ತಿದ್ದಂತ ಸಂದರ್ಭದಲ್ಲಿ ಬೈಕ್ ಅಪಘಾತಗೊಂಡಿತ್ತು.

ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಅಪೋಲೊ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಈಗಾಗಲೇ ಮೆದುಳಿನ ಬಲ ಭಾಗದಲ್ಲಿ ರಕ್ತಸ್ರಾವ ಉಂಟಾಗಿದ್ದು, ತೊಡೆಯಲ್ಲಿ ಗಾಯಗಳಾಗಿವೆ. ನಿನ್ನೆ ರಾತ್ರಿಯೇ ಅವರಿಗೆ ವೈದ್ಯರು ಮೆದುಳಿನ ಶಸ್ತ್ರಚಿಕಿತ್ಸೆ ನಡೆಸಿದ್ದು, ಸದ್ಯ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ.

"ನಟ ಸಂಚಾರಿ ವಿಜಯ್​ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಚಿಕಿತ್ಸೆ ನೀಡುತ್ತಿರುವ ವೈದ್ಯರು ಮಾಹಿತಿ ನೀಡಿದ್ದಾರೆ. ವಿಜಯ್​ಗೆ ತುಂಬಾನೆ ಹಾನಿಯಾಗಿದೆ" ಎಂದು ನಟ ಸಂಚಾರಿ ವಿಜಯ್​ ಆಪ್ತರಾದ ನಿರ್ದೇಶಕ ಲಿಂಗದೇವರು ಮಾಹಿತಿ ನೀಡಿದ್ದಾರೆ.

ಬಲಗಾಲಿನ ತೊಡೆಯ ಮೂಳೆ ಮುರಿದಿದೆ. ಮೆದುಳಿನ ಭಾಗದಲ್ಲಿ ತೀವ್ರ ರಕ್ತಸ್ತ್ರಾವವಾಗಿದೆ. ಹಾಗಾಗಿ ಶಸ್ತ್ರ ಚಿಕಿತ್ಸೆ ಮಾಡಿ, ಐಸಿಯುನಲ್ಲಿ ಇರಿಸಲಾಗಿದೆ. ಮುಂದಿನ 48 ಗಂಟೆ ಏನೂ ಹೇಳಲು ಸಾಧ್ಯವಿಲ್ಲ ಎಂದು ನ್ಯೂರೋ ಸರ್ಜನ್ ಅರುಣ್ ನಾಯಕ್ ತಿಳಿಸಿದ್ದಾರೆ.

ಸ್ನೇಹಿತ ನವೀನ್ ಜತೆ ಬರುವಾಗ ಬೈಕ್​ ಸ್ಕಿಡ್​ ಆಗಿ ಸಂಭವಿಸಿದ ಅಪಘಾತದಲ್ಲಿ ವಿಜಯ್ ಹಾಗೂ ನವೀನ್​ಗೆ ಗಂಭೀರ ಗಾಯಗಳಾಗಿವೆ. ಬನ್ನೇರುಘಟ್ಟ ರಸ್ತೆ ಬಳಿ ಜೆ.ಪಿ ನಗರದ 7th ಬ್ಲಾಕ್ ನಲ್ಲಿ ನಿನ್ನೆ ರಾತ್ರಿ (ಜೂನ್​ 12) ಅವಘಡ ಸಂಭವಿಸಿದೆ.

ಬೈಕ್ ಸ್ಕಿಡ್ ಆಗಿ ಬಿದ್ದಿರುವುದಾಗಿ ನವೀನ್ ಹೇಳಿಕೆ ನೀಡಿದ್ದಾರೆ. ಬೈಕ್​ ಓಡಿಸುತ್ತಿದ್ದ ನವೀನ್​ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಹಿಂಬದಿ ಕುಳಿತಿದ್ದ ಸಂಚಾರಿ ವಿಜಯ್​ಗೆ ತೀವ್ರ ಗಾಯಗಳಾಗಿವೆ.

ಅವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಹೀಗೆ ಬೈಕ್ ಅಪಘಾತಕ್ಕೆ ಕಾರಣವಾದಂತ ನವೀನ್ ಎಂಬುವರ ವಿರುದ್ಧ ಸಂಚಾರಿ ವಿಜಯ್ ಸಹೋದರ ಸಿದ್ದೇಶ್ ಕುಮಾರ್, ಜಯನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

English summary :Sanchari vijay

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಫೋಟೋ ಗ್ಯಾಲಾರಿ MORE PHOTO...