ಬಿಗ್ ಬಾಸ್ ಬಗ್ಗೆ ಬಿಗ್ ಅಪ್ಡೇಟ್: ಸ್ಪರ್ಧಿಗಳ ಸೂಟ್‌ಕೇಸ್ ಪ್ಯಾಕ್ ಆಗಿದೆ..! | Filmz news

2021-06-16
1122
Bigg boss kanadda

: ಕನ್ನಡ ಕಿರುತೆರೆಯ ಅತಿ ದೊಡ್ಡ ರಿಯಾಲಿಟಿ ಶೋ "ಬಿಗ್ ಬಾಸ್ ಕನ್ನಡ 8" ಕಾರ್ಯಕ್ರಮ ಕೋವಿಡ್ ಎರಡನೇ ಅಲೆಯನ್ನು ನಿಯಂತ್ರಿಸುವ ಸಲುವಾಗಿ ಹೇರಲಾಗಿದ್ದ ಲಾಕ್‌ಡೌನ್‌ನಿಂದ ಅರ್ಧಕ್ಕೆ ನಿಂತು ಹೋಗಿತ್ತು. ಇದೀಗ ಮತ್ತೆ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ.

ಕನ್ನಡ ವಾಹಿನಿಯ ಸಾಮಾಜಿಕ ಜಾಲತಾಣಗಳಲ್ಲಿ ಇಂದು (ಜೂನ್ 16) ಬೆಳ್ಳಂಬೆಳಗ್ಗೆ ಹಂಚಿಕೊಳ್ಳಲಾಗಿರುವ ಫೋಟೋ ಒಂದು ಬಿಗ್​ಬಾಸ್​ ಮುಂದುವರೆಯಲಿದೆ ಎಂಬುದಕ್ಕೆ ಪುಷ್ಟಿ ನೀಡಿದ್ದು, ವೀಕ್ಷಕರು ಸಂತಸ ವ್ಯಕ್ತಪಡಿಸಿದ್ದಾರೆ.

ಮೇ 9 ರಂದು "ಬಿಗ್ ಬಾಸ್" ಮನೆಯೊಳಗಿದ್ದ ಸ್ಪರ್ಧಿಗಳೆಲ್ಲಾ ಆಚೆ ಬಂದಿದ್ದರು. ವೈಷ್ಣವಿ ಗೌಡ, ಮಂಜು ಪಾವಗಡ, ಅರವಿಂದ್.ಕೆ.ಪಿ, ಶಮಂತ್, ಶುಭಾ ಪೂಂಜಾ, ರಘು, ನಿಧಿ ಸುಬ್ಬಯ್ಯ, ಪ್ರಶಾಂತ್ ಸಂಬರಗಿ, ದಿವ್ಯಾ ಸುರೇಶ್, ಚಕ್ರವರ್ತಿ ಚಂದ್ರಚೂಡ್ ಹಾಗೂ ಪ್ರಿಯಾಂಕಾ ತಿಮ್ಮೇಶ್ ಕಣ್ಣೀರು ಹಾಕುತ್ತಾ ಬಿಗ್ ಬಾಸ್ ಮನೆಯಿಂದ ಹೊರಗಡೆ ಬಂದಿದ್ದರು.

ಕೊರೊನಾ ನಿಯಮಗಳ ಕಾರಣಕ್ಕೆ ಬಿಗ್‍ಬಾಸ್ 8 ನೇ ಆವೃತ್ತಿ 72 ದಿನಗಳಿಗೆ ಅರ್ಧದಲ್ಲೇ ನಿಂತು ಹೋಗಿತ್ತು. 12 ಮಂದಿ ಸ್ಪರ್ಧಿಗಳನ್ನು ಬಿಗ್‍ಬಾಸ್ ಮನೆಯಿಂದ ಆಚೆ ಕರೆತರಲಾಗಿತ್ತು. ಆದರೆ ವಿನ್ನರ್ ಯಾರು ಎಂದು ಬಿಗ್‍ಬಾಸ್ ಹೇಳಿರಲಿಲ್ಲ. ಈಗ ಪೂರ್ತಿ ನೂರು ದಿನಗಳನ್ನು ಪೂರೈಸುವ ಯೋಜನೆ ವಾಹಿನಿಯದ್ದಾಗಿದೆ. ಹೀಗಾಗಿ ಈಗ ಮತ್ತೆ 28 ದಿನಗಳ ಕಾಲ ಮತ್ತೆ ಶೋ ಪ್ರಸಾರ ನಡೆಸಲು ಸಿದ್ಧತೆ ನಡೆಯುತ್ತಿದೆ.

ಕೆಲವೇ ನಿಮಿಷಗಳ ಹಿಂದೆ ಅಪ್‌ಡೇಟ್‌ ಆಗಿರುವ ಕಲರ್ಸ್ ಕನ್ನಡ ವಾಹಿನಿಯ ಅಫೀಶಿಯಲ್ ಫೇಸ್‌ಬುಕ್‌ ಪೇಜ್‌ನ ಕವರ್ ಫೋಟೋದಲ್ಲಿ ಹನ್ನೆರಡು ಸೂಟ್‌ಕೇಸ್‌ಗಳು ರೆಡಿ ಆಗಿವೆ. ಅಂದ್ಮೇಲೆ, "ಬಿಗ್ ಬಾಸ್ ಕನ್ನಡ 8" ಕಾರ್ಯಕ್ರಮ ಮರಳಿ ಶುರುವಾಗುತ್ತಿದ್ದು, ಬಿಗ್ ಬಾಸ್ ಮನೆಯೊಳಗೆ ಕಾಲಿಡಲು 12 ಸ್ಪರ್ಧಿಗಳ ಸೂಟ್‌ಕೇಸ್‌ಗಳು ಪ್ಯಾಕ್ ಆಗಿವೆ ಅಂತ್ಲೇ ತಾನೆ ಅರ್ಥ.?

ಬಿಗ್ ಬಾಸ್ ಕನ್ನಡ 8 ಕಾರ್ಯಕ್ರಮ ಇದೇ ತಿಂಗಳು ಪುನಃ ಆರಂಭವಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಆದರೆ, ಈ ಬಗ್ಗೆ ಕಲರ್ಸ್ ಕನ್ನಡ ವಾಹಿನಿ ಇನ್ನೂ ಅಧಿಕೃತ ಘೋಷಣೆ ಮಾಡಿಲ್ಲ. ಬಿಗ್‍ಬಾಸ್ ಮತ್ತೆ ಪ್ರಾರಂಭವಾಗುತ್ತಾ ಎಂದು ಎದುರು ನೋಡುತ್ತಿರುವ ಅಭಿಮಾನಿಗಳಿಗೆ ಬಿಗ್‍ಬಾಸ್ ಮತ್ತೆ ಪ್ರಾರಂಭವಾಗುತ್ತದೆ ಎನ್ನುವ ಸುದ್ದಿ ಸಖತ್ ಖುಷಿಯನ್ನು ತಂದಿದೆ.

English summary :Bigg boss kanadda

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ ಬಲವರ್ಧನೆ
ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ
ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ
ದೆಹಲಿ ಅಬಕಾರಿ ನೀತಿ ಹಗರಣ : ದೆಹಲಿ ಸಿಎಂ  ಕೇಜ್ರಿವಾಲ್ ಗೆ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನ
ದೆಹಲಿ ಅಬಕಾರಿ ನೀತಿ ಹಗರಣ : ದೆಹಲಿ ಸಿಎಂ ಕೇಜ್ರಿವಾಲ್ ಗೆ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನ
 ಮಾಜಿ ಉಪಪ್ರಧಾನಿ ಎಲ್‌ಕೆ ಅಡ್ವಾಣಿ ಅವರ ನಿವಾಸದಲ್ಲಿ ಭಾರತ ರತ್ನ ಪ್ರಶಸ್ತಿ ಪ್ರದಾನ
ಮಾಜಿ ಉಪಪ್ರಧಾನಿ ಎಲ್‌ಕೆ ಅಡ್ವಾಣಿ ಅವರ ನಿವಾಸದಲ್ಲಿ ಭಾರತ ರತ್ನ ಪ್ರಶಸ್ತಿ ಪ್ರದಾನ

ಫೋಟೋ ಗ್ಯಾಲಾರಿ MORE PHOTO...