ಈ ವರ್ಷ ಬರ್ತ್​​ಡೇ ಆಚರಣೆ ಮಾಡಲ್ಲ: ಶಿವರಾಜ್ ಕುಮಾರ್ ಸ್ಪಷ್ಟನೆ | Filmz news

2021-07-07
1376
Shivarajkumar

: ಈ ಬಾರಿ ತಾವು ಹುಟ್ಟುಹಬ್ಬ ಆಚರಿಸಿಕೊಳ್ಳೋದಿಲ್ಲ ಎಂದು ಶಿವರಾಜ್​ಕುಮಾರ್​ ಹೇಳಿದ್ದಾರೆ. ನನ್ನ ಹುಟ್ಟುಹಬ್ಬಕ್ಕಿಂತ ಅಭಿಮಾನಿಗಳ ಆರೋಗ್ಯ ಮುಖ್ಯ ಎಂದು ಹೇಳುವ ಮೂಲಕ ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಅವರು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ.

ಈ ಕುರಿತು ವಿಡಿಯೋ ಸಂದೇಶ ಬಿಡುಗಡೆ ಮಾಡಿರುವ ಶಿವರಾಜ್​ಕುಮಾರ್ ಅವರು, ಈ ಬಾರಿ ನನ್ನ ಹುಟ್ಟುಹಬ್ಬ ಆಚರಣೆ ಮಾಡಲ್ಲ. ಯಾರೂ ಮನೆ ಬಳಿ ಬರಬೇಡಿ. ಜುಲೈ 12ಕ್ಕೆ ಹುಟ್ಟು ಹಬ್ಬವಿದ್ದು, ಕೊರೊನಾ ಕಾರಣ ಬರ್ತ್​​ ಡೇ ಆಚರಿಸದಿರಲು ನಿರ್ಧಾರ ಮಾಡಿದ್ದೀನಿ. ನನ್ನ ಹುಟ್ಟು ಹಬ್ಬಕ್ಕಿಂತ ನಿಮ್ಮ ಆರೋಗ್ಯ ಮುಖ್ಯ. ಕಾರಣಾಂತರದಿಂದ ನಾನು ಹುಟ್ಟುಹಬ್ಬದಂದು ಊರಲ್ಲಿ ಇರುವುದಿಲ್ಲ. ನೀವು ಇರುವಲ್ಲೇ ಸೋಷಿಯಲ್ ಮೀಡಿಯಾ ಮೂಲಕ ನನಗೆ ಶುಭಕೋರಿ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.

ನಾನು ಹುಟ್ಟುಹಬ್ಬ ಆಚರಿಸಿಕೊಳ್ಳದೇ ಇರುವುದರಿಂದ ನಿಮಗೆ (ಅಭಿಮಾನಿಗಳಿಗೆ) ಎಷ್ಟು ಬೇಸರವಾಗಿದೆಯೋ, ಅದಕ್ಕಿಂತಲೂ ಹೆಚ್ಚಿನ ಬೇಸರ ನನ್ನ ಹುಟ್ಟುಹಬ್ಬದಂದು ನಿಮ್ಮನ್ನು ನೋಡಲಾಗುವುದಿಲ್ಲ ಎಂಬ ಬೇಸರವಾಗುತ್ತದೆ, ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕವೇ ಜನ್ಮ ದಿನದ ಶುಭಾಶಯಗಳನ್ನು ತಿಳಿಸಿರಿ ಎಂದು ಹೇಳಿದ್ದಾರೆ.

ಇದೇ ವೇಳೆ ಕೊರೊನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ, ಕೊರೊನಾ ಲಸಿಕೆ ಪಡೆದುಕೊಳ್ಳಿ. ಆದಷ್ಟು ಬೇಗ ಕೊರೊನಾ ದೂರವಾಗಿ ಎಲ್ಲರೂ ಒಟ್ಟಾಗಿ ಸೇರುವ ದಿನ ಬರಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡಿಕೊಳ್ಳೋಣ. ಸಾಮಾಜಿಕ ಅಂತರ ಪಾಲನೆ ಮಾಡಿ ಮಾಸ್ಕ್ ಹಾಕಿಕೊಳ್ಳುವುದನ್ನು ಮರೆಯಬೇಡಿ ಎಂದು ಕೋರಿದ್ದಾರೆ.

ಆದಷ್ಟು ಬೇಗ ಕೊರೊನಾ ಕಡಿಮೆ ಆಗಿ, ನಾವೆಲ್ಲರೂ ಸೇರುವಂತೆ ಆಗಲಿ ಎಂದು ಆ ದೇವರಲ್ಲಿ ಪ್ರಾರ್ಥನೆ ಮಾಡಿಕೊಳ್ಳೋಣ. ಮನೆಯಲ್ಲಿರಿ, ಸೇಫ್​ ಆಗಿರಿ. ಎಲ್ಲರೂ ಸೇಫ್​ ಆಗಿರುವಂತೆ ನೋಡಿಕೊಳ್ಳಿ ಎಂದು ಶಿವಣ್ಣ ಮನವಿ ಮಾಡಿಕೊಂಡಿದ್ದಾರೆ.

English summary :Shivarajkumar

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಫೋಟೋ ಗ್ಯಾಲಾರಿ MORE PHOTO...