ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ ಜನ್ಮದಿನ! | Filmz news
: ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್‌ಗಿಂದು ಹುಟ್ಟುಹಬ್ಬದ ಸಂಭ್ರಮ. ತಮ್ಮ 59ನೇ ಜನ್ಮದಿನವನ್ನು ಇಂದು ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ ಕುಟುಂಬಸ್ಥರೊಂದಿಗೆ ಸರಳವಾಗಿ ಆಚರಿಸಿಕೊಂಡಿದ್ದಾರೆ.
ಕನ್ನಡ ಚಿತ್ರರಂಗದಲ್ಲಿ ತಮ್ಮ ನಟನೆ, ವ್ಯಕ್ತಿತ್ವ ಹಾಗೂ ಹೋರಾಟಗಳಿಂದ ಭಿನ್ನವಾದ ವರ್ಚಸ್ಸನ್ನು ಹೊಂದಿರುವವರು ನಟ ಶಿವರಾಜ್‌ಕುಮಾರ್ ಇಂದು ಅವರು 59ನೇ ವಯಸ್ಸಿಗೆ ಕಾಲಿಟ್ಟಿದ್ದಾರೆ. ಆದರೆ ಈ ವರ್ಷವೂ ಕೊರೊನಾ ಆತಂಕದ ಛಾಯೆ ಶಿವರಾಜಕುಮಾರ್ ಹುಟ್ಟುಹಬ್ಬದ ಸಂಭ್ರಮವನ್ನು ಮಂಕಾಗಿಸಿದೆ.
ಕಳೆದ ವರ್ಷ ಕೋವಿಡ್ ಮೊದಲ ಅಲೆಯ ಆತಂಕದಿಂದ ಶಿವಣ್ಣ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿರಲಿಲ್ಲ. ಇನ್ನು ಈ ವರ್ಷವೂ ಕೊರೊನಾ ಎರಡನೇ ಅಲೆಯ ಆತಂಕ ಮುಂದುವರೆದಿರುವುದರಿಂದ, ಈ ಬಾರಿಯೂ ಅಭಿಮಾನಿಗಳು ಅದ್ಧೂರಿಯಾಗಿ ಹುಟ್ಟುಹಬ್ಬವನ್ನು ಆಚರಿಸದಂತೆ ಶಿವರಾಜಕುಮಾರ್ ಕೆಲ ದಿನಗಳ ಹಿಂದಷ್ಟೇ ಸಾಮಾಜಿಕ ಜಾಲತಾಣಗಳ ಮೂಲಕ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.
ಕರುನಾಡ ಚಕ್ರವರ್ತಿ ಶಿವರಾಜ್‌ಕುಮಾರ್ ಹುಟ್ಟುಹಬ್ಬದ ಪ್ರಯುಕ್ತ ನಟನೆಯ 123ನೇ ಸಿನಿಮಾದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಔಟ್ ಆಯಂಡ್ ಔಟ್ ಆಯಕ್ಷನ್ ಲುಕ್‌ನಲ್ಲಿ ಶಿವರಾಜಕುಮಾರ್ ಕಾಣಿಸಿಕೊಂಡಿದ್ದು, ಚಿತ್ರದ ಫಸ್ಟ್‌ಲುಕ್ ರಿಲೀಸ್ ಅಭಿಮಾನಿಗಳಿಗೆ ಚಿತ್ರದ ಮೇಲೆ ಕುತೂಹಲ ಹೆಚ್ಚಿಸಿದೆ. ಈ ಚಿತ್ರದ ಟೈಟಲ್ ಇಂದು (ಜುಲೈ12) ಬಿಡುಗಡೆಯಾಗಲಿದೆ. ಈ ಚಿತ್ರವನ್ನು ವಿಜಯ್ ಮಿಲ್ಟನ್ ನಿರ್ದೇಶಿಸುತ್ತಿದ್ದಾರೆ.
ಇದರ ನಡುವೆಯೇ126ನೇ ಸಿನಿಮಾಕ್ಕೆ ರಿಷಭ್ ಶೆಟ್ಟಿ ನಿರ್ದೇಶನ ಮಾಡಲಿದ್ದಾರೆ ಎಂಬ ಸುದ್ದಿಯೂ ಹೊರಬಿದ್ದಿದೆ.
ಶಿವರಾಜ್‌ಕುಮಾರ್ ಜನ್ಮದಿನದ ಪ್ರಯುಕ್ತ ಇಂದು ಅವರ "ಭಜರಂಗಿ 2" ಚಿತ್ರದ ಬರ್ತಡೇ ಸ್ಪೆಷಲ್ ಟೀಸರ್ ಬಿಡುಗಡೆಯಾಗಲಿದೆ. ಹಾಗೇ, ಶಿವರಾಜ್‌ಕುಮಾರ್ ರವರ ಮುಂದಿನ ಪ್ರಾಜೆಕ್ಟ್‌ಗಳ ಘೋಷಣೆಯೂ ಇಂದೇ ಆಗಲಿದೆ.