ಕನ್ನಡ ಚಿತ್ರರಂಗದ ಹಿರಿಯ ನಟಿ "ಅಭಿನಯ ಶಾರದೆ" ಇನ್ನಿಲ್ಲ: ಗಣ್ಯರ, ಅಭಿಮಾನಿಗಳ ಸಂತಾಪ | Filmz news

2021-07-26
1720
Jayanthi Death

: ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಟಿ, ಅಭಿನಯ ಶಾರದೆ ಜಯಂತಿ (76) ಅವರು ಸೋಮವಾರ ಬೆಳಗ್ಗೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ಜಯಂತಿ ನಿಧನಕ್ಕೆ ಅನೇಕ ಸೆಲೆಬ್ರಿಟಿಗಳು, ಗಣ್ಯರು, ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ. ನಟಿ ಜಯಂತಿ ನಿಧನಕ್ಕೆ ಸಿಎಂ ಬಿ.ಎಸ್. ಯಡಿಯೂರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಸಂತಾಪ ಸೂಚಿಸಿದ್ದಾರೆ.

1945ರಲ್ಲಿ ಬಳ್ಳಾರಿಯಲ್ಲಿ ಜನಿಸಿದ ಜಯಂತಿಯವರ ಮೂಲ ಹೆಸರು ಕಮಲಾ ಕುಮಾರಿ. ತಂದೆ ಬಾಲಸುಬ್ರಹ್ಮಣ್ಯಂ, ತಾಯಿ ಸಂತಾನ ಲಕ್ಷ್ಮೀ. ಬಾಲ ಸುಬ್ರಹ್ಮಣ್ಯಂ ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಪಕರಾಗಿ ಕಾರ್ಯನಿರ್ವಹಿಸುತ್ತಿದ್ದರೆ, ತಾಯಿ ಸಂತಾನಲಕ್ಷ್ಮೀ ಗೃಹಿಣಿಯಾಗಿದ್ದರು. ದಂಪತಿಗೆ ಮೂವರು ಮಕ್ಕಳಿದ್ದು, ಅವರಲ್ಲಿ ಹಿರಿಯವರೇ ಜಯಂತಿ. ತಂದೆ-ತಾಯಿ ವಿಚ್ಛೇದನ ಪಡೆದ ಹಿನ್ನೆಲೆ ಜಯಂತಿ ಅಮ್ಮನೊಂದಿಗೆ ಮದ್ರಾಸ್​​ನಲ್ಲಿ ಬೆಳೆದರು.

ಕನ್ನಡ, ತಮಿಳು, ತೆಲುಗು, ಮಲಯಾಳಂ, ಹಿಂದಿ ಮತ್ತು ಮರಾಠಿ ಸೇರಿದಂತೆ 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. 1963ರಲ್ಲಿ ತೆರೆ ಕಂಡ ವೈ.ಅರ್. ಸ್ವಾಮಿ ನಿರ್ದೇಶನದ "ಜೇನು ಗೂಡು" ಚಿತ್ರದ ಮೂಲಕ ಜಯಂತಿ ಅವರು ಚಿತ್ರರಂಗ ಪ್ರವೇಶಿಸಿದರು.

1965 ರಲ್ಲಿ ತೆರೆಕಂಡ "ಮಿಸ್ ಲೀಲಾವತಿ" ಚಿತ್ರದ ಅಭಿನಯಕ್ಕಾಗಿ ಜಯಂತಿ ಅವರಿಗೆ ರಾಷ್ಟ್ರ ಪ್ರಶಸ್ತಿ ಒಲಿದು ಬಂದಿದೆ. ಎರಡು ಮುಖ(1969), ಮನಸ್ಸಿನಂತೆ ಮಾಂಗಲ್ಯ(1976), ಧರ್ಮ ದಾರಿ ತಪ್ಪಿತು(1981), ಮಸಣದ ಹೂವು (1985), ಆನಂದ್ (1986) ಚಿತ್ರಗಳ ಅಭಿನಯಕ್ಕಾಗಿ ಐದು ಬಾರಿ ರಾಜ್ಯ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಅಭಿನಯ ಶಾರದೆ ಕಳೆದುಕೊಂಡ ಚಂದನವನ ಶೋಕಸಾಗರದಲ್ಲಿ ಮುಳುಗಿದೆ.

ಹಿರಿಯ ನಟಿ ಜಯಂತಿ ನಿಧನಕ್ಕೆ ಸಂತಾಪ ಸೂಚಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಅಭಿಜಾತ ಪ್ರತಿಭೆಯ ಮೂಲಕ ದಶಕಗಳ ಕಾಲ ಚಿತ್ರಪ್ರೇಮಿಗಳ ಮನಗೆದ್ದಿದ್ದ ಮತ್ತು ನನ್ನ ಇಷ್ಟದ ನಟಿ ಅಭಿನಯ ಶಾರದೆ ಜಯಂತಿಯವರ ನಿಧನದಿಂದ ಅತೀವ ದುಃಖ ವಾಗಿದೆ. ಜಯಂತಿ ಅವರು ತಮ್ಮ ಚಿತ್ರಗಳ ಮೂಲಕ ಸದಾಕಾಲ ನಮ್ಮೆಲ್ಲರ ಮನದಲ್ಲಿ ಅಜರಾಮಾರರಾಗಿ ಇರುತ್ತಾರೆ. ಅವರ ಕುಟುಂಬಕ್ಕೆ ನನ್ನ ಸಾಂತ್ವನಗಳು ಎಂದು ಟ್ವೀಟ್ ಮಾಡಿದ್ದಾರೆ.

English summary :Jayanthi Death

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಫೋಟೋ ಗ್ಯಾಲಾರಿ MORE PHOTO...