ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡ್ತಿದ್ದಾರಂತೆ ಮಹಾಲಕ್ಷ್ಮಿ ರವೀಂದರ್ ಜೋಡಿ! | Filmz news
: ಮಹಾಲಕ್ಷ್ಮಿ ಮತ್ತು ರವೀಂದರ್ ಮದುವೆ ಆಗುತ್ತಿದ್ದಂತೆಯೇ ಈ ಜೋಡಿ ಸಖತ್ ಟ್ರೆಂಡ್ ಆಗಿತ್ತು. ನಟಿ ಮಹಾಲಕ್ಷ್ಮಿ ಮತ್ತು ನಿರ್ಮಾಪಕ ರವೀಂದರ್ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇತ್ತೀಚೆಗೆ ನೀಡಿದ ಸಂದರ್ಶನದಲ್ಲಿ ಅವರು ಈ ಕುರಿತು ಮಾತನಾಡಿದ್ದಾರೆ ಎನ್ನಲಾಗಿದೆ
ಮಹಾಲಕ್ಷ್ಮಿ ಮತ್ತು ರವೀಂದರ್ ದಂಪತಿ ಬಿಗ್ ಬಾಸ್ ಮನೆಗೆ ಹೋಗುತ್ತಾರೆ ಎನ್ನುವ ಸುದ್ದಿಯೇ ತಮಿಳು ಚಿತ್ರೋದ್ಯಮದಲ್ಲಿ ಸಂಚಲನ ಸೃಷ್ಟಿ ಮಾಡಿದೆ. ರವೀಂದರ್ ಮುಂಬರುವ 6ನೇ ಬಿಗ್ ಬಾಸ್ ಸೀಸನ್ ನಲ್ಲಿ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡಲಿದ್ದಾರೆ ಎಂಬ ವರದಿಗಳಿವೆ.
ಮದುವೆ ನಂತರ ಹಲವಾರು ದೇವಸ್ಥಾನಗಳಿಗೆ ಭೇಟಿ ನೀಡಿರುವ ಮಹಾಲಕ್ಷ್ಮಿ ಮತ್ತು ರವೀಂದರ್, ದೇವರ ದರ್ಶನದ ನಂತರ ಅಮೆರಿಕಾಗೆ ಹಾರಿದ್ದರು. ಅಮೆರಿಕಾದಲ್ಲಿ ಹನಿಮೂನ್ ಮುಗಿಸಿಕೊಂಡು ಮತ್ತೆ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ ಮಹಾಲಕ್ಷ್ಮಿ.
ಬಿಗ್ ಬಾಸ್ ಸೀಸನ್ 6 ಅಕ್ಟೋಬರ್ 9 ರಿಂದ ಪ್ರಾರಂಭವಾಗಲಿದೆ ಎಂದು ಅಧಿಕೃತವಾಗಿ ಘೋಷಿಸಲಾಗಿದೆ. ಈ ವೇಳೆ ಸ್ಪರ್ಧಿಗಳ ಪಟ್ಟಿಯಲ್ಲಿ ಹಲವರ ಹೆಸರು ಕೇಳಿಬಂದಿದೆ. ಇದರಲ್ಲಿ ರವೀಂದರ್ ಮತ್ತು ಮಹಾಲಕ್ಷ್ಮಿ ಇಬ್ಬರ ಹೆಸರುಗಳಿವೆ. ಬಿಗ್ ಬಾಸ್ ಮನೆಗೆ ರವೀಂದರ್ ಪ್ರವೇಶಿಸುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ.
ಬಿಗ್ ಬಾಸ್ ಮನೆಗೆ ರವೀಂದರ್ ಎಂಟ್ರಿ ಕೊಡ್ತಾರಾ? ಅಥವಾ ಇಲ್ಲ ಎಂಬುದು ಅಕ್ಟೋಬರ್ 9 ರಂದು ಖಚಿತವಾಗಿ ತಿಳಿಯಲಿದೆ.