ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 17 ನೇ ಕಂತಿನ ಬಿಡುಗಡೆ : ಪ್ರಧಾನಿ ಮೋದಿ 3ನೇ ಅವಧಿಯ ಮೊದಲ ಕಡತಕ್ಕೆ ಸಹಿ | JANATA NEWS

ನವದೆಹಲಿ : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 17 ನೇ ಕಂತಿನ ಬಿಡುಗಡೆಗೆ ಅಧಿಕಾರ ನೀಡುವ ಮೊದಲ ಕಡತಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 10, ಸೋಮವಾರ ಸಹಿ ಹಾಕಿದರು. ಐತಿಹಾಸಿಕ ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಒಂದು ದಿನದ ನಂತರ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ.
ಈ ಯೋಜನೆಯು 9.3 ಕೋಟಿ ರೈತರಿಗೆ ಪ್ರಯೋಜನವನ್ನು ನೀಡುತ್ತದೆ ಮತ್ತು ಸುಮಾರು ₹ 20,000 ಕೋಟಿಗಳನ್ನು ವಿತರಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಮೊನ್ನೆ ಸೋಮವಾರ ಮೋದಿ ಮೂರನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡರು. “ನಮ್ಮದು ಕಿಸಾನ್ ಕಲ್ಯಾಣಕ್ಕೆ ಸಂಪೂರ್ಣ ಬದ್ಧವಾಗಿರುವ ಸರ್ಕಾರ. ಆದ್ದರಿಂದ, ಅಧಿಕಾರ ವಹಿಸಿಕೊಂಡ ಮೇಲೆ ಸಹಿ ಮಾಡಿದ ಮೊದಲ ಕಡತ ರೈತ ಕಲ್ಯಾಣಕ್ಕೆ ಸಂಬಂಧಿಸಿದೆ ಎಂಬುದು ಸೂಕ್ತ. ಮುಂದಿನ ದಿನಗಳಲ್ಲಿ ನಾವು ರೈತರು ಮತ್ತು ಕೃಷಿ ಕ್ಷೇತ್ರಕ್ಕಾಗಿ ಇನ್ನಷ್ಟು ಕೆಲಸ ಮಾಡಬೇಕೆಂದು ಬಯಸುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.