ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು | Janata news
:
ಉದಯವಾಗಲಿ ನಮ್ಮ ಚೆಲುವ ಕನ್ನಡನಾಡು
ಬದುಕು ಬಲುಹಿನ ನಿಧಿಯು ಸದಭಿಮಾನದ ಗೂಡು || ೨ ||
ರಾಜನ್ಯರಿಪು ಪರಶುರಾಮನಮ್ಮನ ನಾಡು,
ಆ ಜಲಧಿಯನೆ ಜಿಗಿದ ಹನುಮನುದಿಸಿದ ನಾಡು,
ಓಜೆಯಿಂ ಮೆರೆದರಸುಗಳ ಸಾಹಸದ ಸೂಡು,
ತೇಜವನು ನಮಗೀವ ವೀರವೃಂದದ ಬೀಡು. ||
ಲೆಕ್ಕಿಗಮಿತಾಕ್ಷರರು ಬೆಳೆದು ಮೆರೆದಿಹ ನಾಡು,
ಜಕ್ಕಣನ ಶಿಲ್ಪಕಲೆಯಚ್ಚರಿಯ ಕರುಗೋಡು,
ಚೊಕ್ಕಮತಗಳ ಸಾರಿದವರಿಗಿದು ನೆಲೆವೀಡು,
ಬೊಕ್ಕಸದ ಕಣಜವೈ ವಿದ್ವತ್ತೆಗಳ ಕಾಡು. ||
ಪಾವನೆಯರಾ ಕೃಷ್ಣೆ ಭೀಮೆಯರ ತಾಯ್ನಾಡು,
ಕಾವೇರಿ ಗೋದೆಯರು ಮೈದೊಳೆವ ನಲುನಾಡು,
ಆವಗಂ ಸ್ಪೂರ್ತಿಸುವ ಕಬ್ಬಿಗರ ನಡೆಮಾಡು,
ಕಾವ ಗದುಗಿನ ವೀರನಾರಾಯಣನ ಬೀಡು. ||
- ಹುಯಿಲಗೋಳ ನಾರಾಯಣರಾಯರು
English summary :Udayavagali namma cheluva Kannada nadu - Huyilagola Narayanarayaru