ಮಾರಕಾಸ್ತ್ರಗಳಿಂದ ಕೊಚ್ಚಿ ಗ್ರಾಮ ಪಂಚಾಯತಿ ಸದಸ್ಯನ ಕೊಲೆ! | Janata news
ಕಲಬುರಗಿ : ಕಲಬುರ್ಗಿಯ ಕೈಲಾಸ ನಗರದಲ್ಲಿ ಸೋಮವಾರ ರಾತ್ರಿ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.
ಆಳಂದ ತಾಲ್ಲೂಕಿನ ಕಡಗಂಚಿ ಗ್ರಾಮ ಪಂಚಾಯಿತಿ ಸದಸ್ಯ ಶಿವಲಿಂಗಪ್ಪ ಭೂಶೆಟ್ಟಿ (53) ಕೊಲೆಯಾದವರು.
ಕಳೆದ ರಾತ್ರಿ ಶಿವಲಿಂಗಪ್ಪ ಭೂಶೆಟ್ಟಿಯವರು ಮನೆಯ ಬಳಿ ನಿಂತಿದ್ದಾಗ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
RELATED TOPICS:
English summary :Kalburgi