ಜಿಟಿ ಜಿಟಿ ಮಳೆಗೆ ಮನೆ ಕುಸಿದು ಬಿದ್ದು ದಂಪತಿ ದಾರುಣ ಸಾವು! | Janata news
ಬಳ್ಳಾರಿ : ಬಳ್ಳಾರಿಯಲ್ಲಿ ಮನೆ ಕುಸಿದುಬಿದ್ದು ದಂಪತಿ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಕೊಲಣ್ಣ (45 ವರ್ಷ) ಹಾಗೂ ಆತನ ಪತ್ನಿ ಸಾವಿತ್ರಿ (40) ಮೃತರು. ದಂಪತಿಯ ಪುತ್ರ ಸಂತೋಷ್ (13) ಮಣ್ಣಿನಲ್ಲಿ ಸಿಲುಕಿಕೊಂಡಿದ್ದ. ಇದನ್ನು ಗಮನಿಸಿದ ಸ್ಥಳೀಯರು ಆತನನ್ನು ರಕ್ಷಿಸಿದ್ದಾರೆ. ಸಂತೋಷ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
2 ದಿನಗಳಿಂದ ಚಂಡಮಾರುತದ ಪರಿಣಾಮ ಜಿಟಿ ಜಿಟಿ ಮಳೆಯಾಗುತ್ತಿದ್ದು, ತೇವವಾಗಿದ್ದ ಮಣ್ಣಿನ ಮನೆ ಕುಸಿದು ದಂಪತಿ ಸಾವನ್ನಪ್ಪಿದ್ದಾರೆ. ಮಣ್ಣಿನಲ್ಲಿ ಸಿಲುಕಿದ ದಂಪತಿಗಳು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಕೌಲ್ ಬಜಾರ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
English summary :Ballari