ಆಡಳಿತ ಮಂಡಳಿ ಕಾರಣ, ಬೋರ್ಡ್ನಲ್ಲಿ ಬರೆದು ಆತ್ಮಹತ್ಯೆಗೆ ಶರಣಾದ ಪ್ರೌಢಶಾಲಾ ಶಿಕ್ಷಕ | Janata news
ಚಿಕ್ಕಬಳ್ಳಾಪುರ : ಕಪ್ಪು ಹಲಗೆಯ ಮೇಲೆ ಡೆತ್ನೋಟ್ ಬರೆದು ಅನುದಾನಿತ ಶಾಲೆಯ ಶಿಕ್ಷಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಚಂದ್ರಶೇಖರ್(32) ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕನಾಗಿದ್ದು, ಇವರು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಕನಗಾನಕೊಪ್ಪ ಗ್ರಾಮದ ನಿವಾಸಿ. ಚಂದ್ರಶೇಖರ್ ಅವರು ಮಂಚೇನಹಳ್ಳಿಯ ಅನುದಾನಿತ ಆಚಾರ್ಯ ಪ್ರೌಢಶಾಲೆಯ ಶಿಕ್ಷಕಕನಾಗಿ ಕೆಲಸ ಮಾಡುತ್ತಿದ್ದರು.
ಶಾಲಾ ಆಡಳಿತ ಮಂಡಳಿ ಅನುದಾನಿತ ಶಿಕ್ಷಕನಾಗಿ ಅನುಮೋದನೆ ಮಾಡದ ಹಿನ್ನಲೆಯಲ್ಲಿ ಆತ್ಮಹತ್ಯೆಗೆ ಆಚಾರ್ಯ ಪ್ರೌಢಶಾಲೆ ಆಡಳಿತ ಮಂಡಳಿ ಕಾರಣ ಎಂದು ಕಪ್ಪು ಹಲಗೆಯ ಮೇಲೆ ಡೆತ್ನೋಟ್ ಬರೆಯಲಾಗಿದೆ.
ತನ್ನ ಆತ್ಮಹತ್ಯೆಗೆ ಆಚಾರ್ಯ ಪ್ರೌಢಶಾಲೆ ಆಡಳಿತ ಮಂಡಳಿ ಕಾರಣ ಎಂದು ಚಂದ್ರಶೇಖರ್ ಡೆತ್ನೋಟ್ ನಲ್ಲಿ ಬರೆದುಕೊಂಡಿದ್ದಾರೆ. ಅಲ್ಲದೆ ಶಾಲೆಯ ಬೋರ್ಡ್ ನಲ್ಲಿ ವಿದ್ಯಾರ್ಥಿಗಳೇ ನಿಮ್ಮ ಭವಿಷ್ಯ ಉಜ್ವಲವಾಗಲಿ. ಹಾಗೂ ನನ್ನೆಲ್ಲಾ ಪ್ರೀತಿ ಪಾತ್ರರಲ್ಲಿ ಕ್ಷಮೆಯಾಚಿಸುತ್ತಿದ್ದೇನೆ ಎಂದು ಕೂಡ ಬರೆದಿದ್ದಾರೆ.
ಘಟನಾ ಸ್ಥಳಕ್ಕೆ ಮಂಚೇನಹಳ್ಳಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.