Thu,Apr25,2024
ಕನ್ನಡ / English

ಐ ಫೋನ್‌ ಘಟಕದ ಮೇಲೆ ಕಾರ್ಮಿಕರಿಂದ ದಾಂಧಲೆ ಪ್ರಕರಣ: 50 ಕೋಟಿಗೂ ಅಧಿಕ ನಷ್ಟ; 210 ಮಂದಿ ಬಂಧನ | Janata news

13 Dec 2020
2798

ಕೋಲಾರ : ಜಿಲ್ಲೆಯ ನರಸಾಪುರದಲ್ಲಿರುವ ತೈವಾನ್ ಮೂಲದ ಐಫೋನ್‌ ಘಟಕದಲ್ಲಿ ಸರಿಯಾಗಿ ವೇತನ ನೀಡುತ್ತಿಲ್ಲ ಎಂಬ ಕಾರಣಕ್ಕೆ ಸಾವಿರಾರು ಕಾರ್ಮಿಕರು ಸಿಟ್ಟಾಗಿ ಸರಿ ಸುಮಾರು 50 ಕೋಟಿ ಮೊತ್ತ ಆಸ್ತಿಪಾಸ್ತಿಗಳನ್ನು ನಾಶ ಪಡಿಸಿದ್ದರು.

ಕಳೆದೆರಡು ತಿಂಗಳಿಂದ ವೇತನವನ್ನ ಸರಿಯಾಗಿ ಗುತ್ತಿಗೆ ಪಡೆದ ಕಂಪನಿಯವರು ನೀಡುತ್ತಿಲ್ಲ ಎನ್ನುವ ಆರೋಪ ಕಾರ್ಮಿಕರು ಶುಕ್ರವಾರ ರಾತ್ರಿಯೇ ಮಾಡಿದ್ದರು. ಬೆಳಗ್ಗೆ 4.50 ಕ್ಕೆ ಆರಂಭವಾದ ಪ್ರತಿಭಟನೆಯಲ್ಲಿ ರಾತ್ರಿ ಪಾಳಯದ ಒಂದು ಸಾವಿರಕ್ಕೂ ಹೆಚ್ಚು ಕಾರ್ಮಿಕರು ಹಾಗು ಬೆಳಗ್ಗೆ ಮೊದಲ ಶಿಪ್ಟ್‍ಗೆ ಆಗಮಿಸಿದ ಇನ್ನೂರಕ್ಕು ಹೆಚ್ಚು ಕಾರ್ಮಿಕರು ಪ್ರತಿಭಟನೆ ನಡೆಸಿ, ಬಾಕಿಯಿರುವ ಎರಡು ತಿಂಗಳ ಸಂಬಳ ಹಾಗು ಹೆಚ್ಚುವರಿಯಾಗಿ ಮಾಡಿರುವ ಕೆಲಸದ ಹಣವನ್ನ ನೀಡುವಂತೆ ಆಗ್ರಹಿಸಿದ್ದಾರೆ.

15 ಸಾವಿರ ಸಂಬಳಕ್ಕೆಂದು ಕೆಲಸಕ್ಕೆ ಸೇರಿಸಿಕೊಂಡು 10-11 ಸಾವಿರ ಹಣ ಕೊಟ್ಟು ಯಾಮಾರಿಸ್ತಿದ್ದಾರೆ ಎನ್ನುವ ಆರೋಪಗಳು ಕಳೆದ ಒಂದು ತಿಂಗಳ ಹಿಂದೆ ಕೇಳಿಬಂದಿತ್ತು. ಈ ಬಗ್ಗೆ ಆಡಳಿತ ವಿಭಾಗದ ವಿರುದ್ದ ಮೊನ್ನೆ ರಾತ್ರಿಯಿಂದ ಪ್ರತಿಭಟನೆ ನಡೆಸಲು ಸಜ್ಜಾಗಿದ್ದ ನೌಕರರ ಆಕ್ರೋಶದ ಕಟ್ಟೆ ನಿನ್ನೆ ಬೆಳಗ್ಗೆ ಕಟ್ಟೆ ಒಡೆದು ದಾಂಧಲೆ ಮಾಡುವ ಹಂತಕ್ಕೆ ಹೋಗಿದೆ.

ಇನ್ನು ಕಂಪನಿಯ ಎರಡು ಮಹಡಿಯಲ್ಲೂ ಸಂಫೂರ್ಣವಾಗಿ ಗಾಜುಗಳು ಹಾಗು ಯಂತ್ರಗಳು ನಜ್ಜು ಗುಜ್ಜಾಗಿದ್ದು, ಒಟ್ಟು ನಷ್ಟ 50 ಕೋಟಿಗೂ ಅಧಿಕ ಎಂದು ಅಂದಾಜಿಸಲಾಗಿದೆ.

ಘಟನೆಯಲ್ಲಿ ಅಪಾರ ಪ್ರಮಾಣದ ವಸ್ತುಗಳು ಕಳುವಾಗಿದೆ ಎನ್ನಲಾಗಿದೆ. ಆಪಲ್ ಕಂಪನಿಯ ಲ್ಯಾಪ್‍ಟಾಪ್, ಬೆಲೆಬಾಳುವ ಐಪೋನ್ ಬಿಡಿಭಾಗಗಳನ್ನ ಕಾಮಿರ್ಕರು ಕದ್ದಿರುವ ಆರೋಪವೂ ಕೇಳಿಬಂದಿದೆ.

200ಕ್ಕು ಹೆಚ್ಚು ಮಂದಿಯನ್ನ ಬಂಧಿಸಿದ್ದು, ತನಿಖೆ ನಡೆಸಿ ಎಲ್ಲಾ ಆರೋಪಿಗಳನ್ನ ಪತ್ತೆಹಚ್ಚಲು 10 ತಂಡ ರಚನೆ ಮಾಡಿರುವುದಾಗಿ ತಿಳಿಸಿದ್ದಾರೆ. ಈ ಗಲಾಟೆಯಲ್ಲಿ 800 ಕಾರ್ಮಿಕರು ಭಾಗಿಯಾಗಿರುವ ಆರೋಪ ಇದೆ.

ಘಟನೆಯ ಬಗ್ಗೆ ಪ್ರಧಾನಿ ಮೋದಿಯವರ ಕಚೇರಿ, ಕೇಂದ್ರ ಗೃಹ ಇಲಾಖೆ ರಾಜ್ಯ ಸರ್ಕಾರಕ್ಕೆ ಮಾಹಿತಿ ಕೇಳಿದ್ದು, ಸಿಎಂ ಯಡಿಯೂರಪ್ಪ ಜಿಲ್ಲಾಧಿಕಾರಿ ಸತ್ಯಭಾಮರಿಗೆ ಕರೆ ಮಾಡಿ ವರದಿ ನೀಡುವಂತೆ ಸೂಚಿಸಿದ್ದಾರೆ.

RELATED TOPICS:
English summary :Bangalore

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...