Fri,Apr26,2024
ಕನ್ನಡ / English

ಸಂಬಳ ನೀಡುವಲ್ಲಿ ವ್ಯತ್ಯಯವಾಗಿರುವುದನ್ನ ಒಪ್ಪಿಕೊಂಡ ವಿಸ್ಟ್ರಾನ್: ಕಂಪನಿಯ ಉಪಾಧ್ಯಕ್ಷನ ತಲೆದಂಡ | Janata news

19 Dec 2020
1390

ಕೋಲಾರ : ಜಿಲ್ಲೆಯ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ತೈವಾನ್​ ಮೂಲದ ವಿಸ್ಟ್ರಾನ್ ಎಲೆಕ್ಟ್ರಾನಿಕ್ಸ್​ ಕಂಪನಿಯಲ್ಲಿ ಇತ್ತೀಚೆಗೆ ನಡೆದ ಭಾರೀ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿ ಕಂಪನಿಯ ಉಪಾಧ್ಯಕ್ಷ ವಿನ್ಸೆಂಟ್​​ ಲೀ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ.

ವೇತನ ನೀಡಿಲ್ಲವೆಂದು ಆರೋಪಿಸಿ ಡಿಸೆಂಬರ್ 12 ರಂದು ಐಫೋನ್ ತಯಾರಿಕಾ ಕಂಪನಿ ವಿಸ್ಟ್ರಾನ್ ಮೇಲೆ ಕಾರ್ಮಿಕರು ಕಲ್ಲು ತೂರಾಟ ನಡೆಸಿ, ಕಾರ್​ಗಳು ಮತ್ತು ಪೀಠೋಪಕರಣಗಳಿಗೆ ಬೆಂಕಿ ಹಚ್ಚಿದ್ದರು. ಅಲ್ಲದೇ ಸಾವಿರಾರು ದುಬಾರಿ ಐಫೋನ್​ಗಳನ್ನು ಲೂಟಿ ಮಾಡಲಾಗಿದ್ದು ಇದರಿಂದಾಗಿ ಸಂಸ್ಥೆಗೆ 437 ಕೋಟಿ ರೂ ನಷ್ಟವಾಗಿದೆ ಎನ್ನಲಾಗಿತ್ತು.

ಸಂಸ್ಥೆಯ ಆಡಳಿತ ಮಂಡಳಿ ತನ್ನ ತಪ್ಪೊಪ್ಪಿಕೊಂಡಿದ್ದು ಇಂದು ಬಿಡುಗಡೆ ಮಾಡಿರುವ ತನ್ನ ಮಾಧ್ಯಮ ಪ್ರಕಟಣೆಯಲ್ಲಿ ಈ ಕುರಿತು ನೌಕರರ ಬಳಿ ಕ್ಷಮೆ ಸಹ ಯಾಚಿಸಿದೆ ಎಂದು ತಿಳಿದುಬಂದಿದೆ. ಜೊತೆಗೆ, ನರಸಾಪುರದಲ್ಲಿರುವ ತನ್ನ ಕಾರ್ಖಾನೆಯನ್ನು ವಿಸ್ತರಿಸುತ್ತಿರುವ ವೇಳೆ ಕಾರ್ಮಿಕರ ವೇತನ ಮತ್ತು ಇತರೆ ವ್ಯವಸ್ಥೆಗಳ ಕಡೆ ಸೂಕ್ತ ಗಮನ ಹರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಈ ಘಟನೆಗೆ ಕಾರಣವಾಯಿತು. ಹಾಗಾಗಿ, ಮುಂಬರುವ ದಿನಗಳಲ್ಲಿ ಇಂಥದ್ದು ಮರುಕಳಿಸದಂತೆ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದೆ.

ಇದಲ್ಲದೆ, ತಾವು ಕೈಗೊಂಡಿರುವ ಶಿಸ್ತುಕ್ರಮದ ಅನುಗುಣವಾಗಿ ವಿಸ್ಟ್ರಾನ್​ನ ಭಾರತ ವಿಭಾಗದ ಉಪಾಧ್ಯಕ್ಷರಾದ ವಿನ್ಸೆಂಟ್​​ ಲೀ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ ಎಂದು ಸಂಸ್ಥೆ ತಿಳಿಸಿದೆ. ವಿಸ್ಟ್ರಾನ್ ಇನ್​ಫೋಕಾಮ್ ಮ್ಯಾನುಫ್ಯಾಕ್ಚರಿಂಗ್ ಇಂಡಿಯಾ ಉಪಾಧ್ಯಕ್ಷ ವಿನ್ಸೆಂಟ್ ಲೀ ಅವರನ್ನ ಉಪಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿದೆ.

ಜೊತೆಗೆ, ಕಾರ್ಮಿಕರ ಕಷ್ಟಕ್ಕೆ ಸ್ಪಂದಿಸಲು ಒಂದು 24X7 ಬಹುಭಾಷಾ ಹೆಲ್ಪಲೈನ್​ನ ಸಹ ಸ್ಥಾಪಿಸಿದೆ ಎಂದು ತನ್ನ ಪ್ರಕಟಣೆಯಲ್ಲಿ ಉಲ್ಲೇಖಿಸಿದೆ. ನೌಕರರು ಕನ್ನಡ, ತೆಲುಗು, ತಮಿಳು, ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ತಮ್ಮ ಹೆಸರು ಹೇಳದೆಯೇ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಬಹುದಾಗಿದೆ.

RELATED TOPICS:
English summary :Bangalore

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...