Thu,Apr25,2024
ಕನ್ನಡ / English

ದೇಗುಲಕ್ಕೆ ಬಂದು ₹101 ತಪ್ಪು ಕಾಣಿಕೆ ಸಲ್ಲಿಸಿದ ಮಾಜಿ ಸಿಎಂ ಕುಮಾರಸ್ವಾಮಿ! | Janata news

15 Jan 2021
2314

ರಾಮನಗರ : ರಾಮನಗರ ತಾಲ್ಲೂಕಿನ ಜಾಲಮಂಗಲದ ಲಕ್ಷ್ಮಿ ನಾರಾಯಣಸ್ವಾಮಿ ದೇಗುಲದಲ್ಲಿ ಶುಕ್ರವಾರ ಕುಟುಂಬದೊಂದಿಗೆ ಪೂಜೆ ಸಲ್ಲಿಸಿದ ಎಚ್‌.ಡಿ. ಕುಮಾರಸ್ವಾಮಿ, ದೇವರಿಗೆ ₹ 101 ತಪ್ಪು ಕಾಣಿಕೆಯನ್ನೂ ಅರ್ಪಿಸಿದರು.

ಶುಕ್ರವಾರ ಕುಟುಂಬ ಸಮೇತ ದೇಗುಲಕ್ಕೆ ಬಂದ ಎಚ್​ಡಿಕೆ, 101 ರೂಪಾಯಿಯನ್ನು ತಪ್ಪು ಕಾಣಿಕೆಯಾಗಿ ದೇವರಿಗೆ ಸಮರ್ಪಿಸಿದರು. ಬಳಿಕ ಲಕ್ಷ್ಮೀನಾರಾಯಣಸ್ವಾಮಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಈ ಕುರಿತು ಮಾತನಾಡಿದ ಕುಮಾರಸ್ವಾಮಿ 2004ರ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಲ್ಲಿ ಸ್ಪರ್ಧಿಸಿ, ಲಕ್ಷ್ಮಿ ನರಸಿಂಹಸ್ವಾಮಿ ಸನ್ನಿಧಿಯಲ್ಲಿ ಪೂಜೆ ಸಲ್ಲಿಸುವ ಸಂದರ್ಭ ಇಲ್ಲಿನ ಜನ ನನ್ನನ್ನು ಮುಂದಿನ ಮುಖ್ಯಮಂತ್ರಿ ಎಂದು ಕೂಗಿದ್ದರು. ಈ ಕ್ಷೇತ್ರದ ಪ್ರತಿಯೊಬ್ಬರೂ ಸಂತೋಷದಿಂದ ಬದುಕುವಂತೆ ಮಾಡಬೇಕು. ಅಲ್ಲಿಯವರೆಗೂ ಮಂತ್ರಿ ಸ್ಥಾನಕ್ಕೆ ಆಸೆ ಪಡಲ್ಲ ಎಂದು ಅವರೆದುರು ಭಾಷಣ ಮಾಡಿದ್ದೆ.

ಆದರೆ ನಂತರದಲ್ಲಿ ಎರಡು ಬಾರಿ ಮುಖ್ಯಮಂತ್ರಿ ಆದರೂ ಅರ್ಧಕ್ಕೆ ಅಧಿಕಾರ ಮೊಟಕಾಯಿತು. ಅಂದಿನಿಂದಲೂ ದೇವರ ಸನ್ನಿಧಿಯಲ್ಲಿ ಆಡಿದ ಮಾತು ತಪ್ಪಿ, ಅಪಚಾರ ಎಸಗಿದ್ದಿನೇನೊ ಎಂದು ಮನಸ್ಸಿನಲ್ಲಿ ಕೊರಗಿದೆ. ಹೀಗಾಗಿ ಕುಟುಂಬ ಸಮೇತ ಬಂದು ತಪ್ಪು ಕಾಣಿಕೆ ಸಲ್ಲಿಸಿ ಕ್ಷಮೆ ಕೇಳಿದ್ದೇನೆ. 2023ರ ಚುನಾವಣೆಗೆ ಆಶೀರ್ವಾದ ಕೋರಿದ್ದೇನೆ ಎಂದರು.

ಕುಮಾರಸ್ವಾಮಿ ಜತೆಗೆ ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್​ ಕುಮಾರಸ್ವಾಮಿ, ಸೊಸೆ ರೇವತಿ ಅವರು ಪೂಜೆಯಲ್ಲಿ ಪಾಲ್ಗೊಂಡಿದ್ದರು. ಮಾಗಡಿ ಶಾಸಕ ಮಂಜುನಾಥ್​ ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

RELATED TOPICS:
English summary :HD Kumaraswamy

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...