ಬೆಂಕಿ ಅವಘಡ: ಹೊತ್ತಿ ಉರಿದ ಅಗರಬತ್ತಿ ಕಾರ್ಖಾನೆ | Janata news
ರಾಮನಗರ : ಅಗರಬತ್ತಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿ ಲಕ್ಷಾಂತರ ರೂಪಾಯಿ ನಷ್ಟವಾಗಿರುವ ಘಟನೆ ನಡೆದಿದೆ. ರಾಮನಗರ ಜಿಲ್ಲೆಯ ಕಗ್ಗಲಿಪುರ ಪೊಲೀಸ್ ಠಾಣೆ ವ್ಯಾಪ್ತಿಯ ತರುಳು ಗ್ರಾಮದ ಬಳಿ ಈ ಘಟನೆ ನಡೆದಿದೆ.
ಶಾರ್ಟ್ ಸರ್ಕ್ಯೂಟ್ನಿಂದ ಇಂತಹದೊಂದು ಅವಘಡ ಸಂಭವಿಸಿದ್ದು ಮೋಕ್ಷ ಅಗರಬತ್ತಿ ಕಾರ್ಖಾನೆಗೆ ಬೆಂಕಿಗೆ ಆಹುತಿಯಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು ಬೆಂಕಿ ನಂದಿಸುವುದಕ್ಕೆ ಹರ ಸಾಹಸ ಪಡುವಂತಹ ಪರಿಸ್ಥಿತಿ ಉಂಟಾಗಿದೆ.
ಬೆಂಕಿ ಮತ್ತು ಹೊಗೆಯನ್ನು ನೋಡಿದ ಕಾರ್ಖಾನೆಯಲ್ಲಿದ್ದ ಎಲ್ಲಾ ಸಿಬ್ಬಂದಿಗಳು ತಕ್ಷಣ ಹೊರ ಬಂದಿದ್ದಾರೆ. ಸಂಪೂರ್ಣ ಕಾರ್ಖಾನೆ ಸುಟ್ಟ ಕರಕಲಾಗಿದೆ. 5 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.
ಸ್ಥಳಕ್ಕೆ ಕಗ್ಗಲೀಪುರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ. ಕಾರ್ಮಿಕರು ಹೊರಗೋಡಿ ಬಂದಿದ್ದರಿಂದ ಭಾರಿ ಅನಾಹುತ ತಪ್ಪಿದೆ.