ಭೀಕರ ಅಪಘಾತ: ನಡುರಸ್ತೆಯಲ್ಲೇ ಹೊತ್ತಿ ಉರಿದ ಕಾರು, ಲಾರಿ | Janata news
ದಾವಣಗೆರೆ : ಟಿಪ್ಪರ್ ಲಾರಿಗೆ ಕಾರು ಡಿಕ್ಕಿಯಾಗಿ ಭೀಕರ ರಸ್ತೆ ಅಪಘಾತ ದಾವಣಗೆರೆಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿ ಹೊತ್ತಿಕೊಂಡ ಬೆಂಕಿ, ಲಾರಿಗೂ ತಗುಲಿ, ಸುಟ್ಟು ಕರಕಲಾಗಿರುವ ಘಟನೆ ನಡೆಸಿದೆ.
ಬೆಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ಸಾಗುತ್ತಿದ್ದ ಕಾರು, ದಾವಣಗೆರೆಯ ಕಡೆಗೆ ತೆರಳುತ್ತಿದ್ದ ಟಿಪ್ಪರ್ ಲಾರಿ ನಡುವೆ ಡಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಎರಡೂ ವಾಹನ ನಡುರಸ್ತೆಯಲ್ಲೇ ಬೆಂಕಿಗೆ ಆಹುತಿಯಾಗಿವೆ.
ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದಂತವರು ಕೂಡಲೇ ಸಣ್ಣಪುಟ್ಟ ಗಾಯಗಳೊಂದಿಗೆ ಕೆಳಗೆ ಇಳಿದ ಪರಿಣಾಮ ಯಾವುದೇ ಅದೃಷ್ಟವಷಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು.
ಈ ಸಂಬಂಧ ದಾವಣಗೆರೆ ದಕ್ಷಿಣ ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.