Sat,Apr27,2024
ಕನ್ನಡ / English

ಚಿಕ್ಕಬಳ್ಳಾಪುರದಲ್ಲಿ ಜಿಲೆಟಿನ್ ಸ್ಫೋಟ: ಸಮಗ್ರ ತನಿಖೆ, ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ! | Janata news

23 Feb 2021
1196

ಚಿಕ್ಕಬಳ್ಳಾಪುರ : ಹಿರೇನಾಗವಲ್ಲಿ ಜಿಲೆಟಿನ್ ಸ್ಪೋಟಕ ಪ್ರಕರಣ ಕುರಿತಂತೆ ಸಮಗ್ರ ತನಿಖೆ ನಡೆಸಲಾಗುತ್ತದೆ. ತಪ್ಪಿತಸ್ತರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಇದರಲ್ಲಿ ಪೊಲೀಸರ ಲೋಪವಿಲ್ಲ ಎಂಬುದಾಗಿ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಕನಿಷ್ಠ ಆರು ಮಂದಿಯ ಸಾವಿಗೆ ಕಾರಣವಾದ ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜಲ್ಲಿ ಕ್ರಷರ್ ಮಾಲೀಕನನ್ನು ಬಂಧಿಸುವಂತೆ ರಾಜ್ಯ ಸರ್ಕಾರ ಆದೇಶ ನೀಡಿದೆ ಎನ್ನಲಾಗಿದೆ.

ಗುಡಿಬಂಡೆ ತಾಲ್ಲೂಕಿನ ಹಿರೇನಾಗವಲ್ಲಿ ಜಿಲೆಟಿನ್ ಸ್ಫೋಟದ ಘಟನಾ ಸ್ಥಳಕ್ಕೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ರಾತ್ರಿ 12:30 ನಡೆದಿರುವ ಜಿಲೆಟಿನ್‌ ಸ್ಫೋಟ ದುರಂತ ಪ್ರಕರಣ ನಿಜಕ್ಕೂ ಅತಂಕ ಮೂಡಿಸಿದೆ. ಶಿವಮೊಗ್ಗದ ಘಟನೆಯ ಬಳಿಕ ಜಿಲ್ಲಾಡಳಿತ ಎಚ್ಚೆತ್ತುಕೊಂಡಿತ್ತು. ಅನಧಿಕೃತವಾಗಿ ಕ್ರಷರ್ ನಡೆಸಬಾರದು ಎಂದು ಸೂಚನೆ ನೀಡಿದ್ದೆ. ಈ ಸಂಬಂಧ ಹಲವು ಬಾರಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದೆ ಎಂದು ಹೇಳಿದರು.

ಕಳೆದ ಕೆಲವೇ ಕೆಲವು ದಿನಗಳ ಹಿಂದೆ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಭ್ರಮರವಾನಿಸಿ ಕ್ರಷರ್ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ನಿಯಮ ಉಲ್ಲಂಘಿಸಿರುವುದು ಕಂಡು ಬಂದ ಹಿನ್ನೆಲೆ ಅದನ್ನು ಬಂದ್ ಮಾಡಿಸಲಾಗಿತ್ತು. ಅದಾಗಿಯೂ ಇಂಥದೊಂದು ಘಟನೆ ನಡೆಸಿರುವುದು ಬೇಸರ ತಂದಿದೆ ಎಂದು ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.


ರಾತ್ರಿಯಿಂದಲೂ ನಾನು ಅಧಿಕಾರಿಗಳ ಜೊತೆ ಸಂಪರ್ಕದಲ್ಲಿದ್ದು, ಮಾಹಿತಿ ಪಡೆದಿದ್ದೇನೆ. ಸದ್ಯ ರಾಜ್ಯದ ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್‌) ತಂಡ ಘಟನಾ ಸ್ಥಳಕ್ಕೆ ಬಂದಿದ್ದು ಪರಿಶೀಲನೆ ನಡೆಸುತ್ತಿದ್ದಾರೆ ಎಂದರು.

ಜಿಲ್ಲಾಡಳಿತದ ಕಟ್ಟುನಿಟ್ಟಿನ ಕ್ರಮಕ್ಕೆ ಹೆದರಿ ಹೀಗೆ ಮಾಡಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಇಂತ ಘಟನೆ ಆಗದ ರೀತಿಯಲ್ಲಿ ಅಧಿಕಾರಿಗಳು ಕ್ರಮ ಜರುಗಿಸಬೇಕು ಎಂದು ಸೂಚನೆ ನೀಡುತ್ತೇನೆ ಎಂದರು.

RELATED TOPICS:
English summary :Chikkaballapura

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...