ಗರ್ಭಿಣಿ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ,ಪ್ರತಿಭಟನೆ | Janata news
ಕೋಲಾರ : ಹೆರಿಗೆಗೆಂದು ಬಂದಿದ್ದ ಗರ್ಭಿಣಿ ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದ್ದು, ಮೃತಳ ಸಂಬಂಧಿಕರು ಆರ್ ಎಲ್ ಜಾಲಪ್ಪ ಆಸ್ಪತ್ರೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ನಿಡಗುರ್ಕಿ ಗ್ರಾಮದ ಅನುಷಾ(24) ಮೃತ ಮಹಿಳೆ. ನಿನ್ನೆ ಸಂಜೆ ಕೋಲಾರ ಹೊರವಲಯದ ಟಮಕ ಬಳಿ ಇರುವ ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ಚಿಕಿತ್ಸೆಗೆಂದು ಅನುಷಾ ದಾಖಲಾಗಿದ್ದಾರೆ.
ಆದರೆ ಇಂದು ಮುಂಜಾನೆ ವೇಳೆಗೆ ಚಿಕಿತ್ಸೆ ಫಲಕಾರಿಯಾಗದೆ ಗರ್ಭಿಣಿ ಸಾವನ್ನಪ್ಪಿದ್ದಾರೆ. ಅನುಷಾ ಎದೆ ನೋವು ಹಾಗೂ ಉಸಿರಾಟದ ತೊಂದರೆಯಿಂದ ಮೃತಪಟ್ಟಿರುವುದಾಗಿ ವೈದ್ಯರು ಸಂಬಂಧಿಕರಿಗೆ ತಿಳಿಸಿದ್ದಾರೆ ಎನ್ನಲಾಗ್ತಿದೆ. ವೈದ್ಯರ ನಿರ್ಲಕ್ಷ್ಯದಿಂದ ಸಾವನ್ನಪ್ಪಿದ್ದಾಳೆಂದು ಮೃತಳ ಸಂಬಂಧಿಕರು ಆರೋಪಿಸಿ, ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು.