ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿದ ಸಿ.ಎಂ. ಇಬ್ರಾಹಿಂ! | Janata news
ಬೆಂಗಳೂರು : ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಸಿ.ಎಂ. ಇಬ್ರಾಹಿಂ ಅವರು ಇಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ನಗರದ ಶಿವಾನಂದ ವೃತ್ತದ ಸಮೀಪವಿರುವ ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿದ ಇಬ್ರಾಹಿಂ, ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಇಬ್ರಾಹಿಂ, ಇಂದು ಶುಭ ಶುಕ್ರವಾರ, ಎಲ್ಲವೂ ಒಳ್ಳೆಯದಾಗುತ್ತದೆ ಎಂದರು.
ಜೆಡಿಎಸ್ ಗೆ ಸೇರುವ ವಿಚಾರವಾಗಿ ಮಾತನಾಡಿದ ಅವರು, ಅದು ಇಲ್ಲಿ ತೀರ್ಮಾನ ಆಗುವುದಿಲ್ಲ. ದೆಹಲಿಯಲ್ಲಿ ತೀರ್ಮಾನ ಆಗುತ್ತದೆ. ಸಮಯ ಸಿಕ್ಕಾಗ ದೆಹಲಿಗೆ ಹೋಗಿ ಬರುತ್ತೇನೆ ಎಂದರು.
RELATED TOPICS:
English summary :Siddaramaiah