ಬಿಗ್‌ಬಾಸ್ ಖ್ಯಾತಿಯ ಮಸ್ತಾನ್ ಮನೆ ಮೇಲೆ ಪೊಲೀಸರ ದಾಳಿ, ನೈಜೀರಿಯನ್ ಡ್ರಗ್ ಪೆಡ್ಲರ್ ನಿಂದ ಡ್ರಗ್ಸ್ ಖರೀದಿಸುತ್ತಿದ್ದ ಮಸ್ತಾನ್? | Janata news
ಬೆಂಗಳೂರು : ಬಿಗ್‌ಬಾಸ್ ಖ್ಯಾತಿಯ ಮಸ್ತಾನ್ ಮನೆ ಮೇಲೆ ಪೊಲೀಸರು ಇಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಸ್ಯಾಂಡಲ್ವುಡ್ ಡ್ರಗ್ ಡೀಲಿಂಗ್ ಆರೋಪ ಪ್ರಕರಣ ಸಂಬಂಧ ಈ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.
ಸಂಜಯ್ ನಗರದಲ್ಲಿರುವ ಮಸ್ತಾನ್ ಮನೆ ಮೇಲೆ ಗೋವಿಂದಪುರ ಪೊಲೀಸರು ಶುಕ್ರವಾರ ಬೆಳ್ಳಂಬೆಳಗ್ಗೆ ದಾಳಿ ಮಾಡಿದ್ದಾರೆ. ನೈಜೀರಿಯನ್ ಡ್ರಗ್ ಫೆಡ್ಲರ್ಸ್ ಜತೆ ಮಸ್ತಾನ್ ಸಂಪರ್ಕ ಹೊಂದಿರುವ ಆರೋಪ ಕೇಳಿಬಂದಿದೆ.
ಡ್ರಗ್ಸ್ ಪ್ರಕರಣದಲ್ಲಿ ಬಂಧಿತನಾಗಿರುವ ನೈಜಿರಿಯನ್ ಡ್ರಗ್ಸ್ ಪೆಡ್ಲರ್ ಮಾಹಿತಿ ಆಧಾರದ ಮೇಲೆ ಪೊಲೀಸರು ಈ ದಾಳಿ ನಡೆಸಿದ್ದಾರೆ. ವಿದೇಶಿ ಡ್ರಗ್ಸ್ ಪೆಡ್ಲರ್ ಗಳಿಂದ ಮಸ್ತಾನ್ ನಿರಂತರವಾಗಿ ವಿವಿಧ ರೀತಿಯ ಡ್ರಗ್ಸ್ ತೆಗೆದುಕೊಳ್ಳುತ್ತಿದ್ದ ಎನ್ನಲಾಗಿತ್ತು. ಈ ಬಗ್ಗೆ ಖಚಿತ ಮಾಹಿತಿ ಅಧರಿಸಿ ಪೊಲೀಸರು ದಾಳಿ ಮಾಡಿದ್ದಾರೆ.
ಸಿಸಿಬಿ ಪೊಲೀಸರು ಇದೀಗ ಮತ್ತೊಬ್ಬ ನೈಜೀರಿಯ ಡ್ರಗ್ ಪೆಡ್ಲರ್‌ನ್ನು ಅರೆಸ್ಟ್ ಮಾಡಿದ್ದಾರೆ. MDMA ಡ್ರಗ್ ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆಯನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಕಾರ್ಯಾಚರಣೆ ಮೂಲಕ ಬಂಧಿಸಿದ್ದಾರೆ. ಯುಗೋಚುಕ್ವು ವಿಕ್ಟರ್(34) ಬಂಧಿತ ಡ್ರಗ್ ಪೆಡ್ಲರ್.
ಬಂಧಿತನಿಂದ 40 ಲಕ್ಷ ಮೌಲ್ಯದ 500 ಗ್ರಾಂ ತೂಕದ MDMA ಡ್ರಗ್ ಪಿಲ್ಸ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಆರೋಪಿ ಸ್ಟೂಡೆಂಟ್ ವೀಸಾದಡಿ ಬೆಂಗಳೂರಿಗೆ ಬಂದು ಈ ಕೃತ್ಯ ಎಸಗುತ್ತಿದ್ದ. ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಆಕ್ಟ್ ಅಡಿ ಕೇಸ್ ದಾಖಲಾಗಿದೆ. ಇನ್ನು ಈತನ ಮಾಹಿತಿ ಮೇರೆಗೆ ಬಿಗ್‌ಬಾಸ್ ಖ್ಯಾತಿಯ ಮಸ್ತಾನ್ ಚಂದ್ರ ಮೇಲೆ ದಾಳಿ ನಡೆದಿದೆ ಎನ್ನಲಾಗಿದೆ.