Thu,Apr25,2024
ಕನ್ನಡ / English

ಕನ್ನಡ ಸಾಹಿತ್ಯ ಲೋಕದ ಹಿರಿಯ ಕವಿ, ಸಾಹಿತಿ ಡಾ.ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರು ಇನ್ನಿಲ್ಲ | Janata news

06 Mar 2021
1150

ಬೆಂಗಳೂರು : ಕನ್ನಡ ಸಾಹಿತ್ಯ ಲೋಕದಲ್ಲಿ, ಎನ್ನೆಸ್ಸೆಲ್ ಎಂದೇ ಮನೆಮಾತಾಗಿದ್ದ ಹಿರಿಯ ಕವಿ, ಸಾಹಿತಿ ಡಾ.ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರು ವಿಧಿವಶರಾಗಿದ್ದಾರೆ.

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಭಟ್ಟರು ಶನಿವಾರ ಬೆಳಗ್ಗೆ 4:45ರ ಸುಮಾರಿಗೆ ಕೊನೆಯುಸಿರೆಳೆದರು. ಅವರಿಗೆ 85 ವರ್ಷ ವಯಸ್ಸಾಗಿತ್ತು.

ಬನಶಂಕರಿಯ ಅವರ ನಿವಾಸದಲ್ಲಿ ಬೆಳಗ್ಗೆ 10.30ರವರೆಗೆ ಅಂತಿಮ ದರ್ಶನ ಪಡೆದುಕೊಳ್ಳಬಹುದೆಂದು ಕುಟುಂಬದ ಮೂಲಗಳು ಮಾಹಿತಿ ನೀಡಿವೆ.

ಡಾ.ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರು, ಭಾವಗೀತೆ ಸಾಹಿತ್ಯ ವಿಮರ್ಶೆ, ಅನುವಾದ, ನವ್ಯಕವಿತೆ, ಮಕ್ಕಳಿಗಾಗಿ ಗೀತೆಗಳ ರಚನೆ, ಮುಂತಾದ ಹಲವರು ಪ್ರಕಾರಗಳಲ್ಲಿ ವ್ಯವಸಾಯ ಮಾಡಿದ್ದರು. ಜೊತೆಗೆ ಕನ್ನಡ, ಸಂಸ್ಕೃತ ಮತ್ತು ಇಂಗ್ಲಿಷ್‌ ಭಾಷೆಗಳಲ್ಲಿ ಅಪಾರ ಸಾಹಿತ್ಯ ಕೃಷಿ ಮಾಡಿದ್ದ ಡಾ. ಎನ್‌ಎಸ್ ಲಕ್ಷ್ಮೀನಾರಾಯಣ ಭಟ್ಟರು ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಕುಟುಂಬ ಮೂಲಗಳು ತಿಳಿಸಿವೆ.

ಭಟ್ಟರು 1936ರ ಅಕ್ಟೋಬರ್​ 29ರಂದು ಶಿವಮೊಗ್ಗದಲ್ಲಿ ಜನಿಸಿದರು. ಇವರ ತಂದೆ ಶಿವರಾಮಭಟ್ಟ, ತಾಯಿ ಮೂಕಾಂಬಿಕೆ. ಎಂಎ ಪದವಿ ಪಡೆದ ಬಳಿಕ ಭಾಷಾಶಾಸ್ತ್ರ ಸಂಶೋಧಕರಾಗಿ ಎರಡು ವರ್ಷ ಕೆಲಸ ಮಾಡಿದ ಬಳಿಕ ಕಾಲೇಜಿನಲ್ಲಿ ಪ್ರಾಧ್ಯಪಕರಾಗಿ ಸೇವೆ ಆರಂಭಿಸಿದರು.

ಬೆಂಗಳೂರಿನಲ್ಲಿ ಕಾಲೇಜು ಅಧ್ಯಾಪಕರಾಗಿ ವೃತ್ತಿ ಜೀವನ ಆರಂಭಿಸಿದ ಅವರು ನಂತರ ಬೆಂಗಳೂರು ವಿಶ್ವ ವಿದ್ಯಾಲಯದಲ್ಲಿ ಪ್ರೊಫೆಸರ್ ಆಗಿ, ವಿಭಾಗ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು.

ಹಿಂದೆ ಹೀಗೆ ಚಿಮ್ಮುತ್ತಿತ್ತು ಯಾವ ಘಳಿಗೆಯಲ್ಲಿ, ನೀರ ಮೇಲಿನ ಲೀಲೆ, ನಿತ್ಯ ನಿತ್ಯ ಭೂಮಿ, ಮಾಗಿ ಕೊರೆವ ಬಾಳಿಗೆ ಮುಂತಾದ ಭಾವಗೀತೆಗಳು ಪ್ರಸಿದ್ದಿಯಾಗಿದ್ದವು. ವೃತ್ತಿ, ಸುಳಿ, ನಿನ್ನದೆ ನನ್ನ ಮಾತು, ಹೊಳೆಯ ಸಾಲಿನ ಮರ, ಪಾಂಚಾಲಿ, ಅರುಣಗೀತೆ, ಚಿತ್ರಕೂಟ, ದೀಪಿಕಾ, ಬಾರೋ ವಸಂತ, ಸುನೀತಾ ಕವನ ಸಂಕಲನಗಳನ್ನು ಲಕ್ಷ್ಮೀ ನಾರಾಯಣ ಭಟ್ಟ ಬರೆದಿದ್ದರು.

ಎನ್ನೆಸ್ಸೆಲ್​ ಕನ್ನಡ ಸಾಹಿತ್ಯದ ಅಗ್ರಮಾನ್ಯ ಕವಿ, ಜನಪ್ರಿಯ ಪ್ರಧ್ಯಾಪಕರು. ಇವರು ಕನ್ನಡ-ಸಂಸ್ಕೃತ-ಇಂಗ್ಲೀಷ್ ಭಾಷೆಗಳಲ್ಲಿ ಕೃತಿರಚನೆ ಮಾಡಿದ್ದಾರೆ. ಎಲಿಯಟ್ಸ್​, ಷೇಕ್ಸ್​ಪಿಯರ್​ ಕಾವ್ಯಗಳನ್ನು ಕನ್ನಡಕ್ಕೆ ಅನುವಾದಿಸಿದರು. ಹೊರಳು ದಾರಿಯಲ್ಲಿ ಕಾವ್ಯ ಈ ವಿಮರ್ಶಾಗ್ರಂಥ ಕ್ಕೆ 1974ರಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ.

ಜಗನ್ನಾಥ ವಿಜಯ, ಮುದ್ರಾಮಂಜೂಷ ಕಾವ್ಯಗಳನ್ನು ರಚಿಸಿದ್ದಾರೆ. ಭಟ್ಟರ ಕಾರ್ಯವನ್ನು ಗುರುತಿಸಿ, ಎನ್.ಸಿ.ಆರ್.ಟಿ ಸಂಸ್ಥೆಯಿಂದ ಶಿಶು ಸಾಹಿತ್ಯಕ್ಕಾಗಿ ಬಾಲಸಾಹಿತ್ಯ ಪುರಸ್ಕಾರ ಲಭಿಸಿದೆ.

RELATED TOPICS:
English summary :NSLaxminarayanbhat passedAway

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...