Sat,Apr27,2024
ಕನ್ನಡ / English

ಪತ್ನಿಯನ್ನು ಕೊಂದ ಪತಿ-ಬಾವ: ದೆವ್ವ ಆಗ್ತಾಳೆಂದು ದೇಹ ತುಂಡರಿಸಿ ನಾಲೆಗೆ ಎಸೆದರು | Janata news

09 Mar 2021
1244

ಮಂಡ್ಯ : ಬಾವನ ಜೊತೆ ಸೇರಿಕೊಂಡು ಪತ್ನಿಯನ್ನು ಕೊಲೆ ಮಾಡಿದ ಪತಿ, ಸತ್ತ ಮೇಲೆ ದೆವ್ವವಾಗಿ ಕಾಡಿದರೆ ಏನು ಮಾಡೋದು ಅಂತ ಆಕೆಯ ದೇಹವನ್ನು ಕತ್ತರಿಸಿ ನದಿಗೆ ಎಸೆದ ಘಟನೆ ಮಂಡ್ಯದಲ್ಲಿ ನಡೆದಿದೆ.

ನಾಲ್ಕು ತಿಂಗಳ ಹಿಂದೆ ಅಂದರೆ ಕಳೆದ ನವೆಂಬರ್‌ನಲ್ಲಿ ಮಂಡ್ಯ ಜಿಲ್ಲೆಯ ಕೆಆರ್‌ಪೇಟೆ ತಾಲೂಕಿನ ಬಂಡಿಹೊಳೆ ಸಮೀಪ ಹೇಮಾವತಿ ನಾಲೆಯಲ್ಲಿ ಮಹಿಳೆಯೊಬ್ಬಳ ತುಂಡರಿಸಿದ ದೇಹ ಸಿಕ್ಕಿತ್ತು.

ಆದರೆ ಈ ಮಹಿಳೆ ಯಾರು ಎಂಬ ಬಗ್ಗೆ ಮಂಡ್ಯದ ಪೊಲೀಸರು ತಲೆಕೆಡಿಸಿಕೊಂಡಿದ್ದರು. ಏನು ಮಾಡಿದರೂ ಈಕೆ ಯಾರು ಎಂಬುದು ಪತ್ತೆಯಾಗಿರಲಿಲ್ಲ. ಇದರ ಬೆನ್ನತ್ತಿ ಹೋಗಿದ್ದ ಪೊಲೀಸರಿಗೆ ಇದೀಗ ನಾಲ್ಕು ತಿಂಗಳ ಬಳಿಕ ಅಂತೂ ರಹಸ್ಯವನ್ನು ಭೇದಿಸಿದ್ದಾರೆ.

ಪಾಂಡವಪುರದ ದೇಶವಳ್ಳಿ ಗ್ರಾಮದ ನಿವಾಸಿ ಆಶಾ ಕೊಲೆಯಾದ ದುರ್ದೈವಿ ಎಂದು ಗುರುತಿಸಲಾಗಿದ್ದು, ಈಕೆಯ ಗಂಡ ರಂಗಪ್ಪ ಹಾಗೂ ಭಾವ ರಾಮಚಂದ್ರ ಕೊಲೆ ಮಾಡಿರುವುದು ತಿಳಿದುಬಂದಿದೆ.

ತಿಂಗಳು ಪಾಂಡವಪುರ ಪೊಲೀಸ್ ಠಾಣೆಗೆ ದೇಶವಳ್ಳಿ ಗ್ರಾಮದ ವ್ಯಕ್ತಿ ತನ್ನ ಮಗಳು ಆಶಾ 4 ತಿಂಗಳಿನಿಂದ ಕಾಣೆಯಾಗಿದ್ದಾಳೆ ಎಂದು ದೂರು ನೀಡಿದ್ದಾರೆ. ಈ ವೇಳೆ ಪಾಂಡವಪುರ ಪೊಲೀಸರು ಕೆಆರ್‍ಪೇಟೆ ಪೊಲೀಸ್ ಠಾಣೆಗೆ ಈ ಬಗ್ಗೆ ತಿಳಿಸಿದ್ದಾರೆ.

ಪೊಲೀಸರು ದೂರು ನೀಡಿದ ವ್ಯಕ್ತಿಯನ್ನು ವಿಚಾರಣೆ ಮಾಡುವ ವೇಳೆ ಹೇಮಾವತಿ ನಾಲೆಯಲ್ಲಿ ದೊರೆತ ತುಂಡರಿಸಿದ ದೇಹಗಳ ಫೋಟೋಗಳನ್ನು ತೋರಿಸಿದ್ದು, ಒಂದು ಕೈ ಮೇಲೆ ಇದ್ದ ಮೀನಿನ ಟ್ಯಾಟು ಇರುವ ಫೋಟೋವನ್ನು ನೋಡಿ ನನ್ನ ಮಗಳು ಇದು ಎಂದು ಗುರುತಿಸಿದ್ದಾರೆ.

ನಂತರ ಇದರ ಬೆನ್ನತ್ತಿ ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ. ಗಂಡ ಹಾಗೂ ಭಾವನನ್ನು ವಶಕ್ಕೆ ಪಡೆದುಕೊಂಡ ಪೊಲೀಸರು ಬಾಯಿ ಬಿಡಿಸಿದ್ದಾರೆ. ಈ ವೇಳೆ ಇಬ್ಬರನ್ನು ವಿಚಾರಣೆ ಮಾಡಿದಾಗ, ಆಶಾ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಳು ಅದಕ್ಕೆ ನಾವು ದೇಶಹಳ್ಳಿಯ ಹೊರಗಡೆ ಕರೆದುಕೊಂಡು ಹೋಗಿ ಕಬ್ಬು ಕಡಿಯುವ ಮಚ್ಚಿನಿಂದ ಕೊಲೆ ಮಾಡಿದೆ. ಆಕೆ ದೆವ್ವವಾಗಿ ನಮ್ಮನ್ನ ಕಾಡಬಹುದು ಎಂದು ಆಕೆಯನ್ನು ತುಂಡು ತುಂಡಾಗಿ ಕತ್ತರಿಸಿ ನಾಲೆಗೆ ಎಸೆದೆವು ಎಂದು ಬಾಯಿ ಬಿಟ್ಟಿದ್ದಾರೆ.

ಆದರೆ ಆಶಾಳ ಸಂಬಂಧಿಕರು ರಂಗಪ್ಪ ರಾಮಚಂದ್ರನ ಮಗಳನ್ನು ಮದುವೆಯಾಗಬೇಕು ಎಂದುಕೊಂಡಿದ್ದ. ಇದೇ ಕಾರಣಕ್ಕೆ ಮನೆಯಲ್ಲಿ ಜಗಳವಾಗುತ್ತಿತ್ತು, ಈ ವೇಳೆ ನಿನ್ನ ಕತ್ತರಿಸಿಯಾದರು ಮದುವೆಯಾಗುತ್ತೇನೆ ಎಂದು ಆಶಾಳಿಗೆ ಬೆದರಿಕೆ ಹಾಕುತ್ತಿದ್ದ, ಇದೇ ಕಾರಣಕ್ಕೆ ಆಕೆಯನ್ನು ಕೊಲೆ ಮಾಡಿದ್ದಾನೆ ಎಂದು ಹೇಳುತ್ತಿದ್ದಾರೆ. ಇದೇ ಕಾರಣಕ್ಕೆ ಆಕೆಯನ್ನು ಕೊಲೆ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ.

RELATED TOPICS:
English summary :Mandya

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...