Thu,May02,2024
ಕನ್ನಡ / English

ಶ್ರೀರಾಮ ಕೇವಲ ಬಿಜೆಪಿ ಸ್ವತ್ತಲ್ಲ, ನಾವು ಶ್ರೀರಾಮನ ಮಕ್ಕಳೇ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ | Janata news

13 Mar 2021
1749

ಶಿವಮೊಗ್ಗ : ರಾಮ ಕೇವಲ ಬಿಜೆಪಿಗೆ ಮಾತ್ರ ಸೇರಿದವನಾ? ಎಂದು ಪ್ರಶ್ನಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ನಾವೆಲ್ಲಾ ಶ್ರೀರಾಮನ ಮಕ್ಕಳು ಎಂದಿದ್ದಾರೆ. ನಾವೂ ಹಿಂದೂಗಳೇ, ನನ್ನ ಹೆಸರಲ್ಲಿ ಶಿವ, ಸಿದ್ದರಾಮಯ್ಯ ಹೆಸರಲ್ಲಿ ರಾಮ ಇಲ್ಲವೇ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.

ಶಿವಮೊಗ್ಗದ ಕಾಂಗ್ರೆಸ್ ಜನಾಕ್ರೋಶ ಸಮಾವೇಶದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಪಕ್ಷದ ಶಾಸಕರು ಹಾಗೂ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್ ಹಾಕಲಾಗಿದೆ. ಬಿಜೆಪಿ ಸರ್ಕಾರ ಅಧಿಕಾರ ಹಾಗೂ ಅಧಿಕಾರಿಗಳನ್ನು ಬಳಸಿಕೊಂಡು ಕೇಸ್ ಹಾಕುತ್ತಿದೆ. ಇದನ್ನು ವಿರೋಧಿಸಿ, ನಾವು ಎಲ್ಲರೂ ಇಲ್ಲಿಗೆ ಬಂದಿದ್ದೇವೆ. ಪ್ರತಿಯೊಬ್ಬ ಕಾರ್ಯಕರ್ತರ ರಕ್ಷಣೆಗೆ ಕಾಂಗ್ರೆಸ್ ಪಕ್ಷದ ಇದೆ. ಇದೇ ಸಂದೇಶ ಕೊಡಲು ನಾವು ಶಿವಮೊಗ್ಗಕ್ಕೆ ಬಂದಿದ್ದೇವೆ ಎಂದರು.

ನಾವು ಕೂಡ ಹಿಂದುಗಳೆ. ರಾಮನ ಭಕ್ತರೆ. ನನ್ನ ಹೆಸರಲ್ಲಿ ಶಿವ ನಿದ್ದರೆ, ಸಿದ್ದರಾಮಯ್ಯ ಹೆಸರಲ್ಲಿ ರಾಮ ನಿದ್ದಾನೆ. ಹಾಗಾಗಿ ನಾವೆಲ್ಲಾ ಶ್ರೀರಾಮನ ಮಕ್ಕಳು ಎಂದರು.

ಬಿಜೆಪಿ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ. ವಿಧಾನಸಭೆಯಿಂದ ಸಂಗಮೇಶ್ ಅವರನ್ನು ಅಮಾನತುಗೊಳಿಸಲಾದ ಆದೇಶವನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿ ಈ ಪ್ರತಿಭಟನೆ ನಡೆಯುತ್ತಿದೆ.

ಸಿಎಂ ಬಿಎಸ್​ವೈ ತವರಲ್ಲಿ ಶಕ್ತಿ ಪ್ರದರ್ಶನಕ್ಕೆ ಸಜ್ಜಾದ ಕಾಂಗ್ರೆಸ್​ನ ಜನಾಕ್ರೋಶ ಪ್ರತಿಭಟನೆ-ಶಿವಮೊಗ್ಗ ಚಲೋ ಸಮಾವೇಶ ಇಂದು ಸಂಜೆ 4ಕ್ಕೆ ಆರಂಭವಾಯಿತು. ಮಾಜಿ ಸಿಎಂ ಸಿದ್ದರಾಮಯ್ಯ, ರಾಮಲಿಂಗಾರೆಡ್ಡಿ, ಡಾ.ಜಿ.ಪರಮೇಶ್ವರ, ಎಸ್.ಆರ್.ಪಾಟೀಲ್, ಆರ್.ಧ್ರುವನಾರಾಯಣ ಸೇರಿ ಪ್ರಮುಖ ನಾಯಕರು ಉಪಸ್ಥಿತರಿದ್ದರು.

janata

RELATED TOPICS:
English summary :DKShivakumar

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...