ಆರೋಗ್ಯ ಕೇಂದ್ರದಲ್ಲೇ ಮಹಿಳಾ ಸಿಬ್ಬಂದಿಯಿಂದ ಭರ್ಜರಿ ಎಣ್ಣೆ ಪಾರ್ಟಿ..! | Janata news
ಬೆಳಗಾವಿ : ಗೋಕಾಕ್ ತಾಲೂಕಿನ ಶಿಂಧಿಕುರಬೇಟ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲೇ ಮಹಿಳಾ ಸಿಬ್ಬಂದಿ ಇಬ್ಬರು ಧೂಮಪಾನ ಮತ್ತು ಮದ್ಯಪಾನ ಮಾಡಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇಬ್ಬರು ಮಹಿಳಾ ಸಿಬ್ಬಂದಿ ಧೂಮಪಾನ, ಮದ್ಯಪಾನ ಮಾಡಿದ್ದಾರೆ ಎನ್ನಲಾದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿವೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಶಿಂಧಿಕುರಬೇಟ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲೇ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.
ಈ ಪ್ರಾಥಮಿಕ ಆರೋಗ್ಯ ಕೇಂದ್ರ ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತದೆ. ಮದ್ಯದ ನಶೆಯಲ್ಲಿಯೇ ಸ್ಟಾಫ್ ನರ್ಸ್ ಚಿಕಿತ್ಸೆ ನೀಡುತ್ತಾರೆ ಎಂಬ ಆರೋಪವು ಇದೆ. ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಸ್ಥಳದಲ್ಲೇ ಧೂಮಪಾನ ಹಾಗೂ ಮದ್ಯಪಾನದಂತಹ ಅಕ್ರಮ ಚಟುವಟಿಕೆ ನಡೆಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.