ಕಾರು ಮತ್ತು ಬೈಕ್ ನಡುವೆ ಅಪಘಾತ: ಮೂವರಿಗೆ ಗಂಭೀರ ಗಾಯ | Janata news
ಉಪ್ಪಿನಂಗಡಿ : ಬೈಕ್ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ಇಂದು ಬೆಳಗ್ಗೆ ನಡೆದಿದೆ.
ಕಾಂಚನ ಕ್ರಾಸ್ ಬಳಿಯ ಸಣ್ಣಂಪಾಡಿ ಎಂಬಲ್ಲಿ ಹ್ಯುಂಡೈ ಐ20 ಕಾರು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆದಿದ್ದು, ಬೈಕಿನಲ್ಲಿದ್ದ ಮೂವರು ಗಂಭೀರ ಗಾಯಗೊಂಡಿದ್ದಾರೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಮತ್ತು ಬೈಕ್ ನಜ್ಜುಗುಜ್ಜಾಗಿದೆ.
ಘಟನೆಯಲ್ಲಿ ಗಾಯಗೊಂಡವರನ್ನು ಸುಧಾಕರ್, ಲೋಕಯ್ಯ, ರವಿ ಎಂದು ಗುರುತಿಸಲಾಗಿದೆ. ಈ ಮೂವರು ಬೈಕ್ ನಲ್ಲಿ ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಹೋಗುತ್ತಿದ್ದರು ಎನ್ನಲಾಗಿದೆ.
ಪುತ್ತೂರು ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ
RELATED TOPICS:
English summary :Mangalore