ಪರೀಕ್ಷೆ ಇಲ್ಲದೆ ಎಲ್ಲಾ ವಿದ್ಯಾರ್ಥಿಗಳ ತೇರ್ಗಡೆ ? | Janata news
ಬೆಂಗಳೂರು : ರಾಜ್ಯದಲ್ಲಿ ಒಂದು ವಾರದಿಂದ ಕೋವಿಡ್-19 ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಹೀಗಾಗಿ ಸೋಮವಾರ ಮುಖ್ಯಮಂತ್ರಿ ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ಗೃಹ, ಕಂದಾಯ, ಶಿಕ್ಷಣ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಮುಖ್ಯಮಂತ್ರಿಗಳು, ಶಿಕ್ಷಣ ಸಚಿವರು, ಗೃಹ ಸಚಿವರು ಕಂದಾಯ ಸಚಿವರೊಂದಿಗೆ ಚರ್ಚಿಸಿ ಅಧಿಕೃತವಾಗಿ ಪ್ರಕಟಿಸಲಾಗುತ್ತದೆ ಎಂದರು.
ರಾಜ್ಯದಲ್ಲಿ ಕೋವಿಡ್ ವೈರಸ್ ಸೋಂಕು ಆತಂಕಾರಿಯಾಗುವ ಮಟ್ಟದಲ್ಲಿ ಹರಡುತ್ತಿದೆ. ಇದು ರೂಪಾಂತರಿ ಸೋಂಕು ಎಂಬುದು ನಿಶ್ಚಿತ. ಸದ್ಯಕ್ಕೆ ಇದರ ಹರಡುವ ವೇಗ ಹೆಚ್ಚಿದೆ. ಸಾವಿನ ಪ್ರಮಾಣ ಕಡಿಮೆ ಇದೆ. ಮುಂದಿನ ಆರು ವಾರಗಳ ಕಾಲ ಕಠಿಣ ಕ್ರಮಗಳನ್ನು ಕೈಗೊಳ್ಳದೇ ಹೋದಲ್ಲಿ ಅಪಾಯ ನಿಶ್ಚಿತ ಎಂದು ಅವರು ಹೇಳಿದರು.
ರಾಜ್ಯದಲ್ಲಿ ಕೊರೋನ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಪ್ರತಿನಿತ್ಯ ಮೂರು ಸಾವಿರ ಪ್ರಕರಣಗಳು ಬರುತ್ತಿದೆ. ಈಗ ತೆಗೆದುಕೊಂಡಿರುವ ಕ್ರಮಗಳು ಸಾಕಾಗಲ್ಲ. ಗಡಿ ಭಾಗಗಳಲ್ಲಿ ಕಟ್ಟುನಿಟ್ಟಿನ ಕ್ರಮ ವಹಿಸಲಾಗಿದೆ. ಜೊತೆಗೆ ಬೆಂಗಳೂರಿಗೆ ಬರುವವರ ಬಗ್ಗೆ ತೀವ್ರ ನಿಗಾ ಇರಿಸಬೇಕಾದ ಅಗತ್ಯವಿದೆ ಎಂದು ಸುಧಾಕರ್ ತಿಳಿಸಿದರು.