ರಾಜ್ಯದಲ್ಲಿ ಕೊರೊನಾ ಸ್ಫೋಟ: ಒಂದೇ ದಿನಕ್ಕೆ 3082 ಮಂದಿಗೆ ಸೋಂಕು, 12 ಮಂದಿ ಬಲಿ | Janata news
ಬೆಂಗಳೂರು : ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 3082 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, 12 ಮಂದಿ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಭಾನುವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 9,51,452ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 12,504ಕ್ಕೆ ತಲುಪಿದೆ.
12 ಸೋಂಕಿತರು ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆಯು 12,504ಕ್ಕೇರಿದೆ. ಇಂದು 1285 ಸೇರಿ ಈವರೆಗೂ 9,51,452 ಮಂದಿ ಡಿಸ್ಜಾರ್ಜ್ ಆಗಿದ್ದಾರೆ.
ಬೆಂಗಳೂರಿನಲ್ಲಿ ಒಂದೇ ದಿನ 2004 ಸೋಂಕು ಪ್ರಕರಣಗಳು ವರದಿಯಾಗಿದ್ದು, 786 ಮಂದಿ ಸೋಂಕಿನಿಂದ ಗುಣಮುಖಿತರಾಗಿದ್ದಾರೆ. 7 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
RELATED TOPICS:
English summary :Corona Virus in Karnataka