ಮೇ 1ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಲಸಿಕೆ ಪಡೆಯಬಹುದು, ಹೇಗೆ? | ಜನತಾ ನ್ಯೂಸ್

20 Apr 2021
620
Covid-19 vaccine for every Indian above 18 years from May 1: How to register, book appointment and download vaccine certificate online

ನವದೆಹಲಿ: : ದೇಶದಲ್ಲಿ ಕೊವಿಡ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೂರನೇ ಹಂತದ ಕೊರೊನಾ ಲಸಿಕಾ ಅಭಿಯಾನವು ಮೇ 1ರಿಂದ ಆರಂಭಗೊಳ್ಳಲಿದ್ದು, 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಲಸಿಕೆ ಪಡೆಯಲು ಅರ್ಹ ಎಂದು ಕೇಂದ್ರ ಸರ್ಕಾರ ಪ್ರಕಟಿಸಿದೆ.

ಕೊರೊನಾ ಸೋಂಕು ಕಾಣಿಸಿಕೊಂಡ ನಂತರ ದೇಶದಲ್ಲಿ ಒಂದು ವರ್ಷದಿಂದಲೂ ಕೊರೊನಾ ಲಸಿಕೆ ಅಭಿವೃದ್ಧಿಯಲ್ಲಿ ಭಾರತ ಸರ್ಕಾರ ಪರಿಶ್ರಮ ಪಡುತ್ತಿದೆ. ಅತಿ ಕಡಿಮೆ ಅವಧಿಯಲ್ಲಿ ಹೆಚ್ಚೆಚ್ಚು ಭಾರತೀಯರು ಲಸಿಕೆ ಪಡೆಯಬೇಕೆಂಬುದು ನಮ್ಮ ಆಶಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

18 ವರ್ಷ ಮೇಲ್ಪಟ್ಟ ಎಲ್ಲರೂ ಲಸಿಕೆ ಪಡೆಯಲು ಅರ್ಹರಾಗಿದ್ದಾರೆ ಎಂದು ಹೇಳಲಾಗಿದೆ. ಸದ್ಯ ಈಗ 45 ವರ್ಷ ಮೇಲ್ಪಟ್ಟವರಿಗೆ ಮಾತ್ರ ಲಸಿಕೆ ಪಡೆದುಕೊಳ್ಳಲು ಅವಕಾಶವಿದೆ. ಆದರೆ ಕೋವಿಡ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನಿಯಮವನ್ನು ಸಡಿಲಿಕೆ ಮಾಡಿದೆ.

ಲಸಿಕಾ ಉತ್ಪಾದಕರಿಗೆ, ಲಸಿಕೆಗಳ ಉತ್ಪಾದನೆಯನ್ನು ಹೆಚ್ಚಿಸಲು ಸೂಚಿಸಲಾಗಿದೆ. ಲಸಿಕೆ ಉತ್ಪಾದಕರು ರಾಜ್ಯ ಸರ್ಕಾರಗಳಿಗೆ 50% ಲಸಿಕೆಗಳನ್ನು ಸರಬರಾಜು ಮಾಡಬಹುದಾಗಿದೆ. ರಾಜ್ಯಗಳು ನೇರವಾಗಿ ಉತ್ಪಾದಕರಿಂದಲೇ ಲಸಿಕೆ ಪಡೆದುಕೊಳ್ಳಬಹುದಾಗಿದೆ ಎನ್ನಲಾಗಿದೆ.

ಈ ಹಿಂದಿನಂತೆಯೇ ಲಸಿಕೆ ನೀಡುವ ಪ್ರಕ್ರಿಯೆಯು ಮುಂದುವರೆಯಲಿದೆ. ಅಗತ್ಯವಿದ್ದ ಕಡೆ ಉಚಿತವಾಗಿ ಲಸಿಕೆ ನೀಡಲಾಗುವುದು ಎಂದು ತಿಳಿದುಬಂದಿದೆ.

ಭಾರತದಲ್ಲಿ ಜನವರಿ 16ರಿಂದ ಲಸಿಕಾ ಅಭಿಯಾನ ಆರಂಭವಾಗಿದ್ದು, ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಗಿತ್ತು. ಎರಡನೇ ಹಂತದಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಹಾಗೂ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ. ಇದೀಗ ಮೂರನೇ ಹಂತದಲ್ಲಿ 18 ವಯಸ್ಸು ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲು ಸೂಚಿಸಲಾಗಿದೆ.

- ಕೋವಿಡ್ -19 ಲಸಿಕೆಗಾಗಿ ಮೊಬೈಲ್ ಸಂಖ್ಯೆ ಮತ್ತು ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್ ಮುಂತಾದ ಫೋಟೋ ಐಡಿ ಪ್ರೂಫ್ ಅಗತ್ಯವಿರುತ್ತದೆ.

- ಕೋವಿಡ್ -19 ಲಸಿಕೆ ನೋಂದಣಿ ಆನ್‌ಲೈನ್ ಹೇಗೆ ಮಾಡುವುದು?
Www.cowin.gov.in ಗೆ ಲಾಗ್ ಇನ್ ಮಾಡುವ ಮೂಲಕ ನೀವು ಕೋವಿಡ್ -19 ಲಸಿಕೆಗಾಗಿ ನೋಂದಾಯಿಸಿಕೊಳ್ಳಬಹುದು. SMS ಮೂಲಕ ಪರಿಶೀಲನೆಗಾಗಿ OTP ಸ್ವೀಕರಿಸಲು ನಿಮ್ಮ ಮೊಬೈಲ್ ಸಂಖ್ಯೆಯನ್ನು ನಮೂದಿಸಿ. ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಪರಿಶೀಲಿಸಿ ಬಟನ್ ಕ್ಲಿಕ್ ಮಾಡಿ.

- ಕೋವಿಡ್ ವೆಬ್‌ಸೈಟ್‌ನಲ್ಲಿ ನೋಂದಾಯಿಸಿದ ನಂತರ, ಹೊಸ ವ್ಯಾಕ್ಸಿನೇಷನ್ ನೋಂದಣಿ ಪುಟ ಕಾಣಿಸುತ್ತದೆ. ಫೋಟೋ ಐಡಿ ಪ್ರಕಾರ, ಫೋಟೋ ಐಡಿ ಪ್ರೂಫ್ ಸಂಖ್ಯೆ, ಹೆಸರು, ಹುಟ್ಟಿದ ದಿನಾಂಕ, ಲಿಂಗ ಮತ್ತು ಇತರ ವಿವರಗಳಂತಹ ವಿವರಗಳನ್ನು ನಮೂದಿಸಿ.

- ನಂತರ ರಿಜಿಸ್ಟರ್ ಬಟನ್ ಕ್ಲಿಕ್ ಮಾಡಿ. ಚುಚ್ಚುಮದ್ದಿನ ಬಗ್ಗೆ ಅಗತ್ಯ ವಿವರಗಳನ್ನು ನೀವು SMS ಮೂಲಕ ಸ್ವೀಕರಿಸುತ್ತೀರಿ. ವಿವರಗಳನ್ನು ಸರಿಯಾಗಿ ಪರಿಶೀಲಿಸಿ. ಲಸಿಕೆಗಾಗಿ ನೋಂದಾಯಿಸುವ ಸಮಯದಲ್ಲಿ ನೀವು ಫಲಾನುಭವಿ ಉಲ್ಲೇಖ ಐಡಿ ಪಡೆಯುತ್ತೀರಿ, ಈ ಐಡಿಯನ್ನು ಸೇವ್ ಮಾಡಿಕೊಳ್ಳಿ.

- ಕೋವಿನ್ ವೆಬ್‌ಸೈಟ್‌ನಲ್ಲಿ ಒಂದೇ ಖಾತೆಗೆ ಲಿಂಕ್ ಮಾಡಲಾದ ಇನ್ನೂ 3 ಜನರನ್ನು ನೀವು ಸೇರಿಸಬಹುದು. ಇದನ್ನು ಮಾಡಲು, ಖಾತೆ ವಿವರಗಳ ಪುಟದ ಕೆಳಗಿನ ಬಲಭಾಗದಲ್ಲಿರುವ ಇನ್ನಷ್ಟು ಸೇರಿಸಿ ಬಟನ್ ಕ್ಲಿಕ್ ಮಾಡಿ. ವ್ಯಾಕ್ಸಿನೇಷನ್ಗಾಗಿ ಇತರ ಜನರಿಗೆ ನೋಂದಾಯಿಸಲು ನೀವು ಇದೇ ರೀತಿಯ ವಿವರಗಳನ್ನು ನಮೂದಿಸಬೇಕಾಗುತ್ತದೆ.

- ನೀವು ಮೊದಲ ಲಸಿಕೆ ಶಾಟ್ ಪಡೆದ ನಂತರ ಮಾತ್ರ ನೀವು ವ್ಯಾಕ್ಸಿನೇಷನ್ ಪ್ರಮಾಣಪತ್ರವನ್ನು ಡೌನ್‌ಲೋಡ್ ಮಾಡಬಹುದು. ಪ್ರಮಾಣಪತ್ರದಲ್ಲಿ ಹೆಸರು, ಹುಟ್ಟಿದ ದಿನಾಂಕ, ಫಲಾನುಭವಿ ಉಲ್ಲೇಖ ಐಡಿ, ಫೋಟೋ ಐಡಿ, ಲಸಿಕೆ ಹೆಸರು, ಆಸ್ಪತ್ರೆಯ ಹೆಸರು, ದಿನಾಂಕ ಮತ್ತು ಇತರ ವಿವರಗಳು ಇರುತ್ತವೆ.

RELATED TOPICS:
English summary :Covid-19 vaccine for every Indian above 18 years from May 1: How to register, book appointment and download vaccine certificate online

ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ: ವಿಕೃತ ಕಾಮುಕನ ಬಂಧನ | ಜನತಾ ನ್ಯೂ&#
ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ: ವಿಕೃತ ಕಾಮುಕನ ಬಂಧನ | ಜನತಾ ನ್ಯೂ&#
ತಂದೆಯ ತಲೆಯನ್ನ ರುಬ್ಬವ ಕಲ್ಲಿಂದ ಜಜ್ಜಿ ಕೊಂದ ಮಗ! | ಜನತಾ ನ್ಯೂ&#
ತಂದೆಯ ತಲೆಯನ್ನ ರುಬ್ಬವ ಕಲ್ಲಿಂದ ಜಜ್ಜಿ ಕೊಂದ ಮಗ! | ಜನತಾ ನ್ಯೂ&#
ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ - ಹೆಚ್. ವಿಶ್ವನಾಥ್ | ಜನತಾ ನ್ಯೂ&#
ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ - ಹೆಚ್. ವಿಶ್ವನಾಥ್ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 138 ಸಾವು, 5,983 ಹೊಸ ಪ್ರಕರಣ : ಬೆಂಗಳೂರಲ್ಲಿ 1,209 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 138 ಸಾವು, 5,983 ಹೊಸ ಪ್ರಕರಣ : ಬೆಂಗಳೂರಲ್ಲಿ 1,209 | ಜನತಾ ನ್ಯೂ&#
ವಿಶ್ವದ ಅತಿಹೆಚ್ಚು ಡೇಟಾ ಬಳಕೆ, ಅತಿಕಡಿಮೆ ಡೇಟಾ ದರವಿರುವ ಭಾರತದಲ್ಲಿ ಹೂಡಿಕೆಗೆ ಅಹ್ವಾನ - ಪ್ರಧಾನಿ ಮೋದಿ  | ಜನತಾ ನ್ಯೂ&#
ವಿಶ್ವದ ಅತಿಹೆಚ್ಚು ಡೇಟಾ ಬಳಕೆ, ಅತಿಕಡಿಮೆ ಡೇಟಾ ದರವಿರುವ ಭಾರತದಲ್ಲಿ ಹೂಡಿಕೆಗೆ ಅಹ್ವಾನ - ಪ್ರಧಾನಿ ಮೋದಿ | ಜನತಾ ನ್ಯೂ&#
ನಾಲ್ವರು ಶ್ರೀಗಂಧ ಕಳ್ಳರ ಬಂಧನ: 25 ಲಕ್ಷ ಮೌಲ್ಯದ ಶ್ರೀಗಂಧ ವಶ | ಜನತಾ ನ್ಯೂ&#
ನಾಲ್ವರು ಶ್ರೀಗಂಧ ಕಳ್ಳರ ಬಂಧನ: 25 ಲಕ್ಷ ಮೌಲ್ಯದ ಶ್ರೀಗಂಧ ವಶ | ಜನತಾ ನ್ಯೂ&#
ರಾಜ್ಯಕ್ಕೆ ರಕ್ಷಣಾ ತಂತ್ರಜ್ಞಾನ ಹಬ್‌ ಘೋಷಿಸುವಂತೆ ರಕ್ಷಣಾ ಸಚಿವರಿಗೆ ಪತ್ರ | ಜನತಾ ನ್ಯೂ&#
ರಾಜ್ಯಕ್ಕೆ ರಕ್ಷಣಾ ತಂತ್ರಜ್ಞಾನ ಹಬ್‌ ಘೋಷಿಸುವಂತೆ ರಕ್ಷಣಾ ಸಚಿವರಿಗೆ ಪತ್ರ | ಜನತಾ ನ್ಯೂ&#
ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! | ಜನತಾ ನ್ಯೂ&#
ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! | ಜನತಾ ನ್ಯೂ&#
ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ - ಡಿಸಿಎಂ  ಸ್ಪಷ್ಟನೆ | ಜನತಾ ನ್
ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ - ಡಿಸಿಎಂ ಸ್ಪಷ್ಟನೆ | ಜನತಾ ನ್
ಜೂನ್​ 21ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಸಂಚಾರ ಆರಂಭ, ಆದರೆ ಷರತ್ತು ಅನ್ವಯ! | ಜನತಾ ನ್ಯೂ&#
ಜೂನ್​ 21ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಸಂಚಾರ ಆರಂಭ, ಆದರೆ ಷರತ್ತು ಅನ್ವಯ! | ಜನತಾ ನ್ಯೂ&#
ವಿಶ್ವನಾಥ್ ಮಗ ಜಿಪಂ‌ ಸದಸ್ಯ ಅಲ್ವಾ, ಅದು ಕುಟುಂಬ ರಾಜಕೀಯ ಅಲ್ವಾ?  | ಜನತಾ ನ್ಯೂ&#
ವಿಶ್ವನಾಥ್ ಮಗ ಜಿಪಂ‌ ಸದಸ್ಯ ಅಲ್ವಾ, ಅದು ಕುಟುಂಬ ರಾಜಕೀಯ ಅಲ್ವಾ? | ಜನತಾ ನ್ಯೂ&#
ಸೋನಿಯಾ ಎರಡೂ ಡೋಸ್ ಪಡೆದಿದ್ದಾರೆ, ರಾಹುಲ್ ಕಾಯುವ ಅವಧಿಯ ಬಳಿಕ ತೆಗೆದುಕೊಳ್ಳಲಿದ್ದಾರೆ - ಕಾಂಗ್ರೆಸ್ | ಜನತಾ ನ್ಯೂ&#
ಸೋನಿಯಾ ಎರಡೂ ಡೋಸ್ ಪಡೆದಿದ್ದಾರೆ, ರಾಹುಲ್ ಕಾಯುವ ಅವಧಿಯ ಬಳಿಕ ತೆಗೆದುಕೊಳ್ಳಲಿದ್ದಾರೆ - ಕಾಂಗ್ರೆಸ್ | ಜನತಾ ನ್ಯೂ&#

ನ್ಯೂಸ್ MORE NEWS...